ಗಜಪಯಣಕ್ಕೆ ಚಾಲನೆ 
ರಾಜ್ಯ

ಮೈಸೂರು ದಸರಾ 2025: ಮೊದಲ ಹಂತದ ಗಜಪಯಣಕ್ಕೆ ಚಾಲನೆ

ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2025ಕ್ಕೆ ಸೋಮವಾರ ಅಧಿಕೃತ ಚಾಲನೆ ಸಿಕ್ಕಿದೆ.

ಇಂದು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಹೆಬ್ಬಾಗಿಲು ವೀರನಹೊಸಳ್ಳಿಯ ಬಳಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಿದರು.

ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಲಾಯಿತು.

ಈ ಬಾರಿಯೂ 750 ಕೆ.ಜಿ ತೂಕದ ಅಂಬಾರಿಯನ್ನು ಹೊರಲಿರುವ ಅಭಿಮನ್ಯು, ಇಡೀ ತಂಡವನ್ನು ಮುನ್ನಡೆಸಲಿದ್ದಾನೆ. ವಿವಿಧ ಆನೆ ಶಿಬಿರಗಳಿಂದ ಆನೆಗಳನ್ನು ಆಯ್ಕೆ ಮಾಡಿರುವ ಅಧಿಕಾರಿಗಳು ಈಗಾಗಲೇ ಆನೆಗಳ ಆರೋಗ್ಯ ತಪಾಸಣೆ ಪೂರ್ಣಗೊಳಿಸಿದ್ದಾರೆ.

ಆನೆ ಶಿಬಿರದಲ್ಲಿರುವ ಹೆಣ್ಣು ಆನೆಗಳ ಗರ್ಭಧಾರಣೆ ಪರೀಕ್ಷೆಗಾಗಿ ರಕ್ತಗಳ ಮಾದರಿ ಸಂಗ್ರಹಿಸಿ ಲ್ಯಾಬ್‌ನಲ್ಲಿ ಪರೀಕ್ಷೆ ಮಾಡಿಸಿ ನಂತರ ಈ ಹೆಣ್ಣಾನೆಗಳನ್ನು ದಸರಾಗೆ ಆಯ್ಕೆ ಮಾಡಲಾಗಿದೆ. ನಾಳೆ ಒಂದು ದಿನ ಮೈಸೂರಿನಲ್ಲಿ ವಿಶ್ರಾಂತಿ ಪಡೆಯಲಿರುವ ಗಜಪಡೆ ಆ.7ರಂದು ಅರಮನೆ ಪ್ರವೇಶ ಮಾಡಲಿವೆ.

ಮೊದಲ ತಂಡದ ಆನೆಗಳ ಪಟ್ಟಿ

1. ಅಭಿಮನ್ಯು, ಗಂಡು : 59 ವರ್ಷ

2. ಪ್ರಶಾಂತ, ಗಂಡು : 53 ವರ್ಷ

3. ಧನಂಜಯ, ಗಂಡು : 45 ವರ್ಷ

4. ಮಹೇಂದ್ರ, ಗಂಡು : 42 ವರ್ಷ

5. ಏಕಲವ್ಯ, ಗಂಡು : 40 ವರ್ಷ

6. ಕಂಜನ್, ಗಂಡು : 26 ವರ್ಷ

7. ಭೀಮ, ಗಂಡು : 25 ವರ್ಷ

8. ಲಕ್ಷ್ಮಿ, ಹೆಣ್ಣು : 54 ವರ್ಷ

9. ಕಾವೇರಿ, ಹೆಣ್ಣು : 45 ವರ್ಷ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಯೋಗೀಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್‌; ಅ.27ಕ್ಕೆ ವಿಚಾರಣೆ ಮುಂದೂಡಿಕೆ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!