CM ಸಿದ್ದರಾಮಯ್ಯ ಜತೆ ಮಾತುಕತೆ 
ರಾಜ್ಯ

CM ಜತೆ ಮಾತುಕತೆ ವಿಫಲ; ನಾಳೆಯಿಂದಲೇ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ?

ಏತನ್ಮಧ್ಯೆ, ಕರ್ನಾಟಕ ಹೈಕೋರ್ಟ್ ಸೋಮವಾರ, ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಗೆ ಸೂಚನೆ ನೀಡಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ನಡೆದ ಮಾತುಕತೆ ವಿಫಲವಾದ ಕಾರಣ, ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಮಂಗಳವಾರದಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಸಾರಿಗೆ ನೌಕರರ ಮುಷ್ಕರವು ಕರ್ನಾಟಕ ಮತ್ತು ಹೊರಗಿನ ಬಸ್‌ಗಳ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಮತ್ತು ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ಯನ್ನು ತಮ್ಮ ಪ್ರಯಾಣಕ್ಕಾಗಿ ಅವಲಂಬಿಸಿರುವ ಲಕ್ಷಾಂತರ ಪ್ರಯಾಣಿಕರಿಗೆ ಅನಾನುಕೂಲತೆ ಉಂಟು ಮಾಡುವ ಸಾಧ್ಯತೆಯಿದೆ.

ಏತನ್ಮಧ್ಯೆ, ಕರ್ನಾಟಕ ಹೈಕೋರ್ಟ್ ಸೋಮವಾರ, ನೌಕರರ ಮುಷ್ಕರವನ್ನು ಒಂದು ದಿನ ಮುಂದೂಡುವಂತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಗೆ ಸೂಚನೆ ನೀಡಿದೆ.

ಹೈಕೋರ್ಟ್ ನಿರ್ದೇಶನಕ್ಕೆ ಪ್ರತಿಕ್ರಿಯಿಸಿದ ಜೆಎಸಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರು, ಹೈಕೋರ್ಟ್ ಆದೇಶದ ಪ್ರತಿ ಇನ್ನೂ ನಮ್ಮ ಕೈಗೆ ತಲುಪಿಲ್ಲ. ಆದೇಶ ಪ್ರತಿ ಕೈತಲುಪಿದ ಬಳಿಕ ಬಂದ್‌ ಬಗ್ಗೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಯಾವ ದೃಷ್ಟಿಯಲ್ಲಿ ಈ ರೀತಿಯಾಗಿ ಆದೇಶ ಕೊಟ್ಟಿದೆ ಗೊತ್ತಿಲ್ಲ. ಆದರೆ ಹೈಕೋರ್ಟ್‌ ಒಂದು ದಿನ ಮುಂದೂಡುವ ಆದೇಶದ ಬದಲು, ನಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಸೂಚಿಸಿದ್ದರೆ ಒಳ್ಳೆಯದಿತ್ತು. ಒಂದು ದಿನ ಮುಂದೂಡಿ ಮತ್ತೊಂದು ದಿನ ಪ್ರತಿಭಟನೆ ನಡೆಸಿದರೆ. ಆದರಿಂದ ಏನು ಬದಲಾವಣೆ ಆಗುತ್ತದೆ ಎಂದು ಅನಂತ ಸುಬ್ಬರಾವ್ ಹೇಳಿದ್ದಾರೆ.

ಜನವರಿ 1, 2024 ರಿಂದ ಜಾರಿಗೆ ಬರುವಂತೆ ಶೇ. 25 ರಷ್ಟು ವೇತನ ಹೆಚ್ಚಳ ಸೇರಿದೆತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿದ್ದಾರೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಫೆಡರೇಶನ್ ಅಧ್ಯಕ್ಷ H. V. ಅನಂತ ಸುಬ್ಬರಾವ್ ಮತ್ತು JAC ಪ್ರತಿನಿಧಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದರು. ಸಂಧಾನ ಸಭೆ ಸುಮಾರು ಮೂರು ಗಂಟೆಗಳ ಕಾಲ ನಡೆಯಿತು.

ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅನಂತ ಸುಬ್ಬರಾವ್, ಮುಷ್ಕರ ಮುಂದುವರಿಸುವುದಾಗಿ ಹೇಳಿದರು. "ಜನವರಿ 1, 2024 ರಿಂದ ಶೇ. 25 ರಷ್ಟು ವೇತನ ಹೆಚ್ಚಳ ಪರಿಷ್ಕರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬದ್ಧವಾಗಿಲ್ಲ. 38 ತಿಂಗಳ ವೇತನ ಬಾಕಿಯನ್ನು ತೆರವುಗೊಳಿಸುವ ಬದಲು ಕೇವಲ 14 ತಿಂಗಳ ವೇತನ ಮಾತ್ರ ಪಾವತಿಸಲು ಒಪ್ಪಿಕೊಂಡಿದ್ದಾರೆ ಎಂದರು.

ಮುಷ್ಕರವನ್ನು ಎದುರಿಸಲು ಖಾಸಗಿ ಬಸ್‌ಗಳ ಕಾರ್ಯಾಚರಣೆಯ ಕುರಿತಾದ ಪ್ರಶ್ನೆಗಳಿಗೆ ಉತ್ತರಿಸಿದ ಸುಬ್ಬರಾವ್, ಸರ್ಕಾರವು ಏನು ಬೇಕಾದರೂ ಮಾಡಲು ಸ್ವತಂತ್ರವಾಗಿದೆ ಎಂದು ಹೇಳಿದರು. "(ಸರ್ಕಾರ) ಜನರನ್ನು ಸಾಗಿಸಲು ಖಾಸಗಿ ಬಸ್‌ಗಳು ಅಥವಾ ಟೆಂಪೋಗಳನ್ನು ಓಡಿಸಲಿ. ನಮ್ಮ ಆರ್‌ಟಿಸಿ ನೌಕರರು ಮನೆಯಲ್ಲಿಯೇ ಇರುತ್ತಾರೆ ಮತ್ತು ಕೆಲಸಕ್ಕೆ ವರದಿ ಮಾಡುವುದಿಲ್ಲ" ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT