ದಿನೇಶ್ ಗುಂಡೂರಾವ್ 
ರಾಜ್ಯ

ಆಯುಷ್ ಇಲಾಖೆ ಅಡಿಯಲ್ಲಿರುವ ಎಲ್ಲಾ ಔಷಧಿಗಳು FDA ವ್ಯಾಪ್ತಿಗೆ: ರಾಜ್ಯ ಸರ್ಕಾರ

ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಈ ಹಿಂದೆ, ಒಂದು ಔಷಧವನ್ನು ಗುಣಮಟ್ಟವಲ್ಲ (NSQ) ಎಂದು ಗುರುತಿಸಿದರೆ, ಅದನ್ನು ಔಷಧಾಲಯಗಳು ಮತ್ತು ವಿತರಕರಿಂದ ಹಿಂತಿರುಗಿಸಲು 30 ದಿನಗಳವರೆಗೆ ತೆಗೆದುಕೊಳ್ಳಲಾಗುತ್ತಿತ್ತು.

ಬೆಂಗಳೂರು: ಆಯುರ್ವೇದ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿ ವಿಭಾಗಗಳನ್ನು ಒಳಗೊಂಡಂತೆ ಆಯುಷ್ ಇಲಾಖೆಯ ಅಡಿಯಲ್ಲಿರುವ ಎಲ್ಲಾ ಔಷಧಿಗಳನ್ನು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ದ ಔಷಧ ನಿಯಂತ್ರಣ ವಿಭಾಗದ ಅಡಿಯಲ್ಲಿ ತರಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಹೇಳಿದರು.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಔಷಧಿಗಳ ಗುಣಮಟ್ಟವನ್ನು ಸುಧಾರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕಡಿಮೆ ಗುಣಮಟ್ಟದ ಔಷಧಿಗಳನ್ನು ಮಾರುಕಟ್ಟೆಯಿಂದ ಕೇವಲ ಎರಡು ದಿನಗಳಲ್ಲಿ ಹಿಂಪಡೆಯುವ ವ್ಯವಸ್ಥೆ ಜಾರಿ ಮಾಡಲಾಗಿದೆ. ಈ ಹಿಂದೆ, ಒಂದು ಔಷಧವನ್ನು ಗುಣಮಟ್ಟವಲ್ಲ (NSQ) ಎಂದು ಗುರುತಿಸಿದರೆ, ಅದನ್ನು ಔಷಧಾಲಯಗಳು ಮತ್ತು ವಿತರಕರಿಂದ ಹಿಂತಿರುಗಿಸಲು 30 ದಿನಗಳವರೆಗೆ ತೆಗೆದುಕೊಳ್ಳಲಾಗುತ್ತಿತ್ತು. ಈಗ, ಆ ಸಮಯವನ್ನು ಕೇವಲ ಎರಡು ದಿನಗಳವರೆಗೆ ಕಡಿತಗೊಳಿಸಲಾಗಿದೆ. ಸುಮಾರು 40,48,436 ರೂ.ಗಳ ಮೌಲ್ಯದ ಗುಣಮಟ್ಟವಲ್ಲದ ಔಷಧಗಳನ್ನು ಮಾರುಕಟ್ಟೆಯಿಂದ ಹಿಂಪಡೆದು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಜೂನ್ 24 ಮತ್ತು 25ರಂದು ಔಷಧ ಆಡಳಿತದ ಅಮಲು ಜಾರಿ ಅಧಿಕಾರಿಗಳು ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟಲು 279 ವಿಶೇಷ ಪರಿವೀಕ್ಷಣೆಯನ್ನು ಕೈಗೊಂಡು, ಉಲ್ಲಂಘನೆ ಕಂಡು ಬಂದ 231 ಪ್ರಕರಣಗಳಲ್ಲಿ ಶೋಕಾಸ್ ನೋಟೀಸ್ ನೀಡಿದ್ದಾರೆ. ಹಾಗೆಯೇ 15 ಔಷಧ ಮಳಿಗೆಗಳಿಗೆ ಆಜ್ಞಾಪಾಲನೆ(ಕಂಪ್ಲೈನ್ಸ್) ಪತ್ರವನ್ನು ನೀಡಿದ್ದಾರೆ. ಇನ್ನು ಔಷಧ ಮತ್ತು ಕಾಂತಿವರ್ಧಕ ಅಧಿನಿಯಮ ಉಲ್ಲಂಘನೆ ಮಾಡಿದ 29 ಸಂಸ್ಥೆಗಳ ವಿರುದ್ಧ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗಿದೆ.

ಜುಲೈ ತಿಂಗಳಲ್ಲಿ 3,489 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೊಳಪಡಿಸಿದ್ದು, ಅವುಗಳಲ್ಲಿ 17 ಅಸುರಕ್ಷಿತ ಮಾದರಿಗಳಾಗಿದ್ದು, 18 ಕೆಳದರ್ಜೆಯ ಮಾದರಿಗಳಾಗಿವೆ. ಬೆಂಗಳೂರು ನಗರದ ಎಂಪೈರ್ ಹೋಟೆಲ್‍ಗಳಲ್ಲಿ 6 ಕಬಾಬ್ ಮಾದರಿಗಳನ್ನು ಸಂಗ್ರಹಿಸಿ, ವಿಶ್ಲೇಷಣೆಗೊಳಪಡಿಸಿದ್ದು, ಎಲ್ಲ ಮಾದರಿಗಳೂ ಕೃತಕ ಬಣ್ಣಗಳನ್ನು ಹೊಂದಿದ್ದರಿಂದ ಅಸುರಕ್ಷಿತ ಎಂದು ವರದಿಯಾಗಿದೆ. ಈ ಬಗ್ಗೆ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸುವುದಾಗಿ ಉದ್ದಿಮೆದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಹೇಳಿದರು.

ರಾಜ್ಯಾದ್ಯಂತ 1,557 ಬೀದಿ ಬದಿ ವ್ಯಾಪಾರ ಘಟಕಗಳಿಗೆ ಭೇಟಿ ನೀಡಿದ್ದು, ಲೋಪಗಳು ಕಂಡು ಬಂದಿರುವ 406 ಘಟಕಗಳಿಗೆ ನೋಟಿಸ್‍ಗಳನ್ನು ಜಾರಿ ಮಾಡಲಾಗಿರುತ್ತದೆ. ಸ್ಥಳದಲ್ಲೇ 44,500 ರೂ.ಗಳ ದಂಡವನ್ನು ವಿಧಿಸಲಾಗಿದೆ. 1,240 ಬೀದಿ ಬದಿ ಆಹಾರ ವ್ಯಾಪಾರಿಗಳಿಗೆ ನೈರ್ಮಲ್ಯತೆ ಮತ್ತು ಗುಣಮಟ್ಟದ ತರಬೇತಿಯನ್ನು ನೀಡಲಾಗಿದೆ. ಹಾಗೆಯೇ 866 ಬೀದಿ ಬದಿಯ ವ್ಯಾಪಾರ ಘಟಕಗಳಿಗೆ ಉಚಿತ ನೋಂದಣಿಯನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು.

ಇನ್ನು 186 ಬಸ್ ನಿಲ್ದಾಣಗಳಲ್ಲಿನ 889 ಆಹಾರ ಮಳಿಗೆಗಳಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದು, ಲೋಪಗಳು ಕಂಡು ಬಂದಿರುವ 206 ಘಟಕಗಳಿಗೆ ನೋಟಿಸ್‍ಗಳನ್ನು ಜಾರಿ ಮಾಡಿದ್ದಾರೆ. ಸ್ಥಳದಲ್ಲೇ 55,000 ರೂ.ಗಳ ದಂಡವನ್ನು ವಿಧಿಸಲಾಗಿದೆ. 99 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಸಲ್ಲಿಸಲಾಗಿದ್ದು, ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿದೆ ಎಂದು ಅವರು ವಿವರಿಸಿದರು.

ಇಲಾಖೆಯಿಂದ ನೀಡುತ್ತಿರುವ ಆನ್‍ಲೈನ್ ಸೇವೆಗಳನ್ನು ಓಎನ್‍ಡಿಎಲ್‍ಎಸ್ ಪೋರ್ಟಲ್‍ಗೆ ವರ್ಗಾಹಿಸಿರುವುದರಿಂದ ರಕ್ತನಿಧಿ ಕೇಂದ್ರಗಳಿಗೆ ಆನ್‍ಲೈನ್ ಮೂಲಕವೇ ಪರವಾನಿಗೆಗಳನ್ನು ನೀಡಲಾಗುತ್ತಿದೆ. ಮಾನ್ಯತೆ ಪಡೆದ ವೈದ್ಯಕೀಯ ಸಂಸ್ಥೆಗಳಲ್ಲಿ ಅಗತ್ಯ ಮಾದಕ ಔಷಧಗಳನ್ನು ಬಳಸಲು ಇಲಾಖೆಯಿಂದ ನೀಡಲಾಗುವ ಪ್ರಮಾಣ ಪತ್ರಗಳನ್ನು ಆನ್‍ಲೈನ್ ಮೂಲಕವೇ ಒದಗಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ರಾಜ್ಯದ 736 ಹೋಟೆಲ್, ರೆಸ್ಟೋರೆಂಟ್‍ಗಳಿಗೆ ಪರಿಶೀಲನಾ ಭೇಟಿ ನೀಡಲಾಗಿದ್ದು, ಲೋಪಗಳು ಕಂಡು ಬಂದಿರುವ 190 ಘಟಕಗಳಿಗೆ ನೋಟಿಸ್‍ಗಳನ್ನು ಜಾರಿ ಮಾಡಲಾಗಿದೆ. ಸ್ಥಳದಲ್ಲೇ 21,500 ರೂ.ಗಳ ದಂಡವನ್ನು ವಿಧಿಸಲಾಗಿದೆ. 291 ಕುಡಿಯುವ ನೀರಿನ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಸಲ್ಲಿಸಲಾಗಿದ್ದು, ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದರು.

ಈ ಅಭಿಯಾನದ ಭಾಗವಾಗಿ, ಇಲಾಖೆಯು ಎಂಪೈರ್ ರೆಸ್ಟೋರೆಂಟ್‌ನಿಂದ ಆರು ಕಬಾಬ್ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಎಲ್ಲಾ ಮಾದರಿಯಲ್ಲೂ ಸನ್‌ಸೆಟ್ ಹಳದಿ ಸೇರಿದಂತೆ ನಿಷೇಧಿತ ಬಣ್ಣಗಳ ಬಳಕೆ ಮಾಡಿರುವುದು ಕಂಡು ಬಂದಿದೆ. ಕ್ರಮದ ಬಳಿಕ ರೆಸ್ಟೋರೆಂಟ್ ಇದೀಗ ಬಣ್ಣವನ್ನು ಬಳಕೆ ಮಾಡುತ್ತಿಲ್ಲ. ನಿಷೇಧಿಕ ಬಣ್ಣಗಳ ಬಳಕೆ ಕಂಡು ಬಂದಿದ್ದೇ ಆದರೆ, ಜನರು ಸರ್ಕಾರಕ್ಕೆ ಮಾಹಿತಿ ನೀಡಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT