ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಕಡಬಗೆರೆಯಲ್ಲಿ ಫಿಟ್ನೆಸ್ ಸೆಂಟರ್ ಒಂದರಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ಮೂರನೇ ಅಂತಸ್ತಿನಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾಳೆ. 20 ವರ್ಷದ ರಿಸೆಪ್ಷನಿಸ್ಟ್ ರಕ್ಷಿತಾ ಮೃತ ದುರ್ದೈವಿ. ಕಳೆದ ಎಂಟು ತಿಂಗಳಿನಿಂದ ರಕ್ಷಿತಾ ಜುನಿಫರ್ ಫಿಟ್ನೆಸ್ ಸೆಂಟರ್‌ನಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಫಿಟ್ನೆಸ್ ಸೆಂಟರ್‌ನ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಬಿದ್ದು ಮೃತಪಟ್ಟಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಆಗಿದೆ.