ಗೋವಿಂದ ರೆಡ್ಡಿ  
ರಾಜ್ಯ

K-RIDE ವ್ಯವಸ್ಥಾಪಕ ನಿರ್ದೇಶಕರಾಗಿ ಗೋವಿಂದ ರೆಡ್ಡಿ ನೇಮಕ

ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ(ಕರ್ನಾಟಕ) ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಐಎಎಸ್ ಅಧಿಕಾರಿ ಗೋವಿಂದ ರೆಡ್ಡಿ ಅವರನ್ನು ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಲ್ಲಿ ಪ್ರಸ್ತುತ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿ ಗೋವಿಂದ್ ರೆಡ್ಡಿ ಅವರು, ಕೆ-ರೈಡ್‌ ವ್ಯವಸ್ಥಾಪಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದು ಸೋಮವಾರ ಹೊರಡಿಸಲಾದ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ(ಕರ್ನಾಟಕ) ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಗೋವಿಂದ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಕೆ-ರೈಡ್‌ನ ಪ್ರಮುಖ ಬೆಂಗಳೂರು ಉಪನಗರ ರೈಲ್ವೆ ಯೋಜನೆ(ಬಿಎಸ್‌ಆರ್‌ಪಿ) ಕಾಮಗಾರಿ ಗುತ್ತಿಗೆಯನ್ನು ಎಲ್‌ ಆ್ಯಂಡ್‌ ಟಿ ಕಂಪನಿ ರದ್ದುಪಡಿಸಿದ ಬೆನ್ನಲ್ಲೇ ಈ ನೇಮಕಾತಿ ನಡೆದಿದೆ.

ಜುಲೈ 31 ರಂದು, ಅಗತ್ಯ ಭೂಮಿ ಹಸ್ತಾಂತರಕ್ಕೆ ಕರ್ನಾಟಕ ರೈಲು ಮೂಲಸೌಕರ್ಯ ಅಭಿವೃದ್ಧಿ ಕಂಪನಿ(ಕೆ-ರೈಡ್) ತೋರಿದ ನಿರ್ಲಕ್ಷ್ಯವೇ ಕೆಲಸ ಸ್ಥಗಿತಕ್ಕೆ ಕಾರಣ ಎಂದು ಕಂಪನಿ ದೂರಿದ್ದರೆ, ಎಲ್‌ ಆ್ಯಂಡ್‌ ಟಿ ಸಮರ್ಪಕವಾಗಿ ಕೆಲಸ ಮಾಡದೆ ಕಾನೂನು ಬಾಹಿರವಾಗಿ ಗುತ್ತಿಗೆಯಿಂದ ಹಿಂದೆ ಸರಿದಿದೆ ಎಂದು ಕೆ-ರೈಡ್‌ ಹೇಳುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ ಅಮೆರಿಕ ವ್ಯಾಪಾರ ಒಪ್ಪಂದ: 'ಬಹುತೇಕ ಎಲ್ಲ ಸಮಸ್ಯೆಗಳು ಇತ್ಯರ್ಥವಾಗಿವೆ': ಸರ್ಕಾರಿ ಮೂಲಗಳು!

ರಷ್ಯನ್ ತೈಲ: ಆರ್ಥಿಕ ಅವಶ್ಯಕತೆ ಮತ್ತು ಅಮೆರಿಕದ ಒತ್ತಡಗಳ ನಡುವೆ ಸಿಲುಕಿದ ಭಾರತ, ಚೀನಾ (ಜಾಗತಿಕ ಜಗಲಿ)

ಯಾರತ್ರ ಮಾತನಾಡಬೇಕೋ ಅಲ್ಲಿ ಮಾತನಾಡುತ್ತೇನೆ: ಯತೀಂದ್ರಗೆ ಡಿ.ಕೆ ಶಿವಕುಮಾರ್ ತಿರುಗೇಟು

ಚಿತ್ತಾಪುರದಲ್ಲಿ ಪಥ ಸಂಚಲನ: ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ; RSSಗೆ ನಿರಾಸೆ

ಕಾಶ್ಮೀರ: ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ NC

SCROLL FOR NEXT