ಅನಂತ ಸುಬ್ಬರಾವ್ 
ರಾಜ್ಯ

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ: ಅನಂತ ಸುಬ್ಬರಾವ್ ಘೋಷಣೆ

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಬೆಂಗಳೂರು: ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ(ಕೆಕೆಆರ್‌ಟಿಸಿ) ಮತ್ತು ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ(ಎನ್‌ಡಬ್ಲ್ಯೂಕೆಆರ್‌ಟಿಸಿ)ಯ ನೌಕರರು ಮಂಗಳವಾರ ಆರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಮುಂದೂಡಿದ್ದಾರೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿದ್ದ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಹೈಕೋರ್ಟ್ ಮುಷ್ಕರ ನಡೆಸಬಾರದೆಂದು ಆದೇಶ ನೀಡಿದ್ದರೂ, ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಜಾರಿಯಾಗಿದ್ದರೂ ಮುಷ್ಕರ ನಡೆಸುವುದು ಕಾನೂನು ಬಾಹಿರ. ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ.

ಅಲ್ಲದೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡದೇ ಇದ್ದರೇ, ನಾಳೆ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಎಂದು ಹೈಕೋರ್ಟ್ ಎಚ್ಚರಿಕೆ ನೀಡಿತ್ತು. ಈ ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸುವುದಿಲ್ಲ ಎಂದು ಜಂಟಿ ಕ್ರಿಯಾ ಸಮಿತಿಯ ಪರ ವಕೀಲರು ಹೈಕೋರ್ಟ್ ಗೆ ತಿಳಿಸಿದರು.

ಹೈಕೋರ್ಟ್ ಆದೇಶದ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಜೆಎಸಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಅವರು, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದೂಡಿಕೆಯಾಗಿದೆ. ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ . ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ