ಕೆಂಪೇಗೌಡ ಬಸ್ ನಿಲ್ದಾಣ Express/ Shashidhar Byrappa
ರಾಜ್ಯ

ಮುಷ್ಕರ ಕಾನೂನುಬಾಹಿರ: ಸಾರಿಗೆ ನೌಕರರಿಗೆ ಹೈಕೋರ್ಟ್ ತರಾಟೆ; ಅರೆಸ್ಟ್ ಎಚ್ಚರಿಕೆ

ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ.

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ನಿಗಮಗಳ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿರುವ ಕರ್ನಾಟಕ ಹೈಕೋರ್ಟ್, ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮುಷ್ಕರ ಮುಂದುವರಿಸಿದರೆ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸುವುದಾಗಿ ಮಂಗಳವಾರ ಎಚ್ಚರಿಸಿದೆ.

ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನಾಯ್ಯಮೂರ್ತಿ ವಿಭು ಬಕ್ರು, ನ್ಯಾಯಮೂರ್ತಿ ಸಿ.ಎಂ.ಜೋಶಿ ಅವರ ವಿಭಾಗೀಯ ಪೀಠ, ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ(ಜೆಎಸಿ)ಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು.

ಹೈಕೋರ್ಟ್ ಮುಷ್ಕರ ನಡೆಸಬಾರದೆಂದು ಆದೇಶ ನೀಡಿದ್ದರೂ, ನೀವು ಅದನ್ನು ಪಾಲಿಸಿಲ್ಲ. ಎಸ್ಮಾ ಜಾರಿಯಾಗಿದ್ದರೂ ಮುಷ್ಕರ ನಡೆಸುವುದು ಕಾನೂನು ಬಾಹಿರ. ಎಸ್ಮಾ ಕಾಯಿದೆಯಡಿ ಸಂಘಟನೆಯ ಪದಾಧಿಕಾರಿಗಳನ್ನು ಬಂಧಿಸಬಹುದು. ನಾಳೆ ಮುಷ್ಕರ ನಿಂತಿರುವ ಬಗ್ಗೆ ಮಾಹಿತಿ ನೀಡಬೇಕೆಂದು ಹೈಕೋರ್ಟ್, ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಸೂಚಿಸಿದೆ.

ಪ್ರಸ್ತುತ ನೀವು ನಡೆಸುತ್ತಿರುವ ಮುಷ್ಕರ ಕಾನೂನುಬಾಹಿರ. ನಿಮಗೆ ಸಮಸ್ಯೆಗಳಿದ್ದರೆ, ನೀವು ಸರ್ಕಾರದೊಂದಿಗೆ ಮಾತುಕತೆ ನಡೆಸಬಹುದು. ನೀವು ಸಾರ್ವಜನಿಕರಿಗೆ ತೊಂದರೆ ಕೊಡಲು ಸಾಧ್ಯವಿಲ್ಲ. ಆದರೆ ಒಕ್ಕೂಟಗಳು ಮಾಡುತ್ತಿರುವುದು ಅದನ್ನೇ. ಸಾರ್ವಜನಿಕರಿಗೆ ಈ ರೀತಿಯಲ್ಲಿ ಅನಾನುಕೂಲತೆಯನ್ನುಂಟುಮಾಡುವುದು ಸರಿಯಲ್ಲ ಎಂದು ಹೈಕೋರ್ಟ್ ಹೇಳಿದೆ.

ಸರ್ಕಾರದ ಪರ ವಾದ ಮಂಡಿಸಿದ ಎಜಿ ಶಶಿಕಿರಣ್ ಶೆಟ್ಟಿ ಅವರು, ಈ “ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಎಸ್ಮಾ ಜಾರಿಯಾದರೂ ಮುಷ್ಕರ ನಡೆಸುವುದು ಕಾನೂನುಬಾಹಿರ ಎಂದು ಹೇಳಿ ನಾಲ್ಕೂ ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನು ಎರಡು ದಿನ ವಿಸ್ತರಣೆ ಮಾಡಿ ಆಗಸ್ಟ್ 7ಕ್ಕೆ ವಿಚಾರಣೆಯನ್ನು ಮುಂದೂಡಿತು.

ಹೈಕೋರ್ಟ್ ಎಚ್ಚರಿಕೆ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ ಜೆಎಸಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಅವರು, ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಎಲ್ಲಾ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿ. ಈ ಕ್ಷಣದಿಂದಲೇ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ನಾವಿಕರ ಸುರಕ್ಷತೆ ಮುಖ್ಯ; ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಇರಾನ್‌ಗೆ ಅಜಿತ್ ದೋವಲ್

ಜರ್ಮನಿಯ ವಸತಿ ಕಟ್ಟಡದಲ್ಲಿ ಶಂಕಿತ ಬೆಂಕಿ ಅವಘಡ: 3 ಭಾರತೀಯರು ಸಾವು!

ಹನಿಟ್ರ್ಯಾಪ್ ಪಿತೂರಿ ಪ್ರಶ್ನಿಸಿದ್ದಕ್ಕೆ ಕಿರುಕುಳ; JDS ಕಾರ್ಯಕರ್ತ CCB ವಶಕ್ಕೆ: ಕುಮಾರಸ್ವಾಮಿ ಆಕ್ರೋಶ

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video

ಯೂಟ್ಯೂಬರ್ ಧ್ರುವ್ ರಾಠಿಗೆ ಸಂಕಷ್ಟ: 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ; ದೆಹಲಿ ಕೋರ್ಟ್ ಸಮನ್ಸ್!