ಬಂಧಿತ ಆರೋಪಿ ತುಫೆಲಹ್ಮದ್ ದಾದಾಪೀರ್ ನಾಗರ್ಚಿ 
ರಾಜ್ಯ

ಬೆಳಗಾವಿ: ಮಸೀದಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ದಾದಾಪೀರ್ ಬಂಧನ

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಯನ್ನು ಪೋಸ್ಟ್ ಮಾಡಿದ ನಂತರ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ: 2023ರ ಅಕ್ಟೋಬರ್‌ನಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ತುಫೆಲಹ್ಮದ್ ದಾದಾಪೀರ್ ನಾಗರ್ಚಿ(22)ಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಟ್ವಿಟರ್ ಹ್ಯಾಂಡಲ್‌ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಯನ್ನು ಪೋಸ್ಟ್ ಮಾಡಿದ ನಂತರ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.

ಕೆರೆಹಳ್ಳಿ ಟ್ವಿಟರ್‌ನಲ್ಲಿ ಘಟನೆಯನ್ನು ಬಹಿರಂಗಪಡಿಸಿದ ತಕ್ಷಣ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಬೆಳಗಾವಿ ಎಸ್‌ಪಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.

ಪೊಲೀಸರು ಬಾಲಕಿಯ ಪೋಷಕರನ್ನು ಭೇಟಿಯಾಗಿದ್ದು, ಅವರು ಘಟನೆಯ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ. ಪ್ರಕರಣದಲ್ಲಿ ಪೊಲೀಸರು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ಕ್ಲಿಪ್ ಅನ್ನು ದಾಖಲೆಯಾಗಿ ಬಳಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮುಧೋಳ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ