ನಟ ಪ್ರಕಾಶ್ ರಾಜ್ 
ರಾಜ್ಯ

ಧರ್ಮಸ್ಥಳ: Youtubers ಮೇಲೆ ಸ್ಥಳೀಯರ ಹಲ್ಲೆ; ನ್ಯಾಯ ಕೇಳಿದರೆ ಕೋಪವೇಕೆ?- ನಟ ಪ್ರಕಾಶ್ ರಾಜ್

ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ.

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್‌ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್‌ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸಾಮಾಜಿಕ ಜಾಲತಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ ಸೌಜನ್ಯಳಿಗಾಗಿ ನ್ಯಾಯ ಕೇಳಿದರೆ, ಇವರಿಗೆ ಯಾಕೆ ಕೋಪ. ಈ ಗೂಂಡಾಗಳನ್ನು ಬಂಧಿಸಿ, ಕ್ರಮ ಕೈಗೊಳ್ಳಿ, ಸತ್ಯ ಹೊರತನ್ನಿ ಎಂದು ಆಗ್ರಹಿಸಿದ್ದಾರೆ.

ಧರ್ಮಸ್ಥಳದಲ್ಲಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಮಾಧ್ಯಮ ಮಿತ್ರರ ಮೇಲಿನ ಹಲ್ಲೆ ಖಂಡನಾರ್ಹ.. ಇಂತಹ ಗೂಂಡಾಗಳಿಂದಲೇ ಭಕ್ತಾದಿಗಳು ನಂಬುವ ಧರ್ಮಸ್ಥಳಕ್ಕೆ ಕಳಂಕ ಬಂದಿರುವುದು. ಸೌಜನ್ಯಾಳ ದಾರುಣ ಹತ್ಯೆಗೆ ನ್ಯಾಯ ಕೇಳಿದರೆ ಇವರಿಗೇಕೆ ಕೋಪ.. ದಯವಿಟ್ಟು ಬಂಧಿಸಿ ಸತ್ಯ ಹೊರತನ್ನಿ ಎಂದು ಒತ್ತಾಯಿಸಿದ್ದಾರೆ.

ಈ ಗೂಂಡಾಗಳ ಹಿಂದೆ ಯಾರಿದ್ದಾರೆ. ಯಾರು ಅವರನ್ನು ಕಳಿಸಿ, ಹೊಡೆಸುತ್ತಿದ್ದಾರೆ. ಅನುಮಾನ ಹೆಚ್ಚುತ್ತಿದೆ. ದಯವಿಟ್ಟು ಪೊಲೀಸರು ಗೂಂಡಾಗಳನ್ನು ಬಂಧಿಸಬೇಕು. ಸತ್ಯಾಸತ್ಯೆಯನ್ನು ತಿಳಿದುಕೊಳ್ಳಬೇಕು. ಕ್ರಮ ಕೈಗೊಳ್ಳಬೇಕು. ನ್ಯಾಯ ಕೇಳುವುದು ನಮ್ಮ ಹಕ್ಕು-ಕರ್ತವ್ಯ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿದ್ದ ರಿಗ್ಗಿಂಗ್ ವಾತಾವರಣದಲ್ಲಿ ನಿಜವಾಗಿಯೂ ಕೆಲಸ ಮಾಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ