ಎಚ್. ಕೆ. ಪಾಟೀಲ್ 
ರಾಜ್ಯ

ರಾಜ್ಯ ಸಚಿವ ಸಂಪುಟ ಸಭೆ: ದೇವದಾಸಿ ಪದ್ಧತಿ ತಡೆ ಸೇರಿದಂತೆ 17 ಬಿಲ್ ಗಳಿಗೆ ಅನುಮೋದನೆ!

"ಕರ್ನಾಟಕ ದೇವದಾಸಿ (ತಡೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ- 2025 ಅನ್ನು ಸಂಪುಟ ಅನುಮೋದಿಸಿದೆ

ಬೆಂಗಳೂರು: ದೇವದಾಸಿ ಮಹಿಳೆಯರನ್ನು ಎಲ್ಲಾ ರೀತಿಯ ಶೋಷಣೆಯಿಂದ ಮತ್ತು ಅವರ ಮಕ್ಕಳನ್ನು ಸಬಲೀಕರಣದ ಮೂಲಕ ಸಾಮಾಜಿಕ ನಿಷೇಧಗಳಿಂದ ಮುಕ್ತಗೊಳಿಸುವ ಉದ್ದೇಶದ ಮಸೂದೆ ಸೇರಿದಂತೆ 17 ಮಸೂದೆಗಳಿಗೆ ರಾಜ್ಯ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ. ಈ ಎಲ್ಲ ವಿಧೇಯಕಗಳನ್ನು ಆಗಸ್ಟ್ 11ರಿಂದ ನಡೆಯಲಿರುವ ಅಧಿವೇಶನದಲ್ಲಿ ಮಂಡಿಸಿ, ಅಂಗೀಕರಿಸುವ ಸಾಧ್ಯತೆ ಇದೆ.

"ಕರ್ನಾಟಕ ದೇವದಾಸಿ (ತಡೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ- 2025 ಅನ್ನು ಸಂಪುಟ ಅನುಮೋದಿಸಿದೆ ಮತ್ತು ಶೋಷಣೆಗೆ ಒಳಗಾದ ದೇವದಾಸಿ ಮಹಿಳೆಯರನ್ನು ಎಲ್ಲಾ ರೀತಿಯ ಶೋಷಣೆಯಿಂದ ವಿಮೋಚನೆಗೊಳಿಸುವುದು, ಅವರ ಮಕ್ಕಳನ್ನು ಸಬಲೀಕರಣದ ಮೂಲಕ ಸಾಮಾಜಿಕ ನಿಷೇಧಗಳಿಂದ ಮುಕ್ತಗೊಳಿಸುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್. ಕೆ. ಪಾಟೀಲ್ ಸುದ್ದಿಗಾರರಿಗೆ ತಿಳಿಸಿದರು.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ದೇವದಾಸಿಯರ ಮಕ್ಕಳಿಗಾಗಿ ಅರ್ಜಿ ನಮೂನೆಗಳು ಮತ್ತು ಅಧಿಕೃತ ದಾಖಲೆಗಳಲ್ಲಿ ತಂದೆಯ ಹೆಸರಿನ ಅಗತ್ಯವನ್ನು ತೆಗೆದುಹಾಕಲು ಇದು ಉದ್ದೇಶಿಸಿದೆ. ದೇವದಾಸಿಗೆ ಮಗನಿದ್ದರೆ, ಆತನ ತಂದೆಯ ಹೆಸರಿನ ಬದಲು ತನ್ನ ಹೆಸರು, ಇಲ್ಲವೇ ತನ್ನ ಉಪನಾಮ ಅಥವಾ ತಾಯಿಯ ಹೆಸರನ್ನು ಬರೆಯಬಹುದು ಎಂದು ಅವರು ಹೇಳಿದರು

ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಒಪ್ಪಿಗೆ: ಜೀವನ ಮತ್ತು ವ್ಯವಹಾರವನ್ನು ಸುಲಭಗೊಳಿಸಲು ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ) ವಿಧೇಯಕ, ಕರ್ನಾಟಕ ಬಂದರು (ಲ್ಯಾಂಡಿಂಗ್ ಮತ್ತು ಶಿಪ್ಪಿಂಗ್ ಫೀಸ್) ತಿದ್ದುಪಡಿ ವಿಧೇಯಕ, ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ ವಿಧೇಯಕ-2025ಕ್ಕೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು ತಿದ್ದುಪಡಿ ವಿಧೇಯಕ, ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ ವಿಧೇಯಕ) ಕರ್ನಾಟಕ ಅತ್ಯಾವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ ವಿಧೇಯಕ) ನೋಂದಣಿ (ಕರ್ನಾಟಕ ತಿದ್ದುಪಡಿ) ವಿಧೇಯಕ, ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸರ್ಕಾರಿ ವ್ಯಾಜ್ಯನಿರ್ವಹಣೆ (ತಿದ್ದುಪಡಿ) ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕ ಸೇರಿದಂತೆ 17 ವಿಧೇಯಕಗಳಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ನವಿಲುತೀರ್ಥದಿಂದ ರಾಮದುರ್ಗದ 8 ಕೆರೆ ಭರ್ತಿ: ಬೆಳಗಾವಿ ಜಿಲ್ಲೆಯ ನವಿಲು ತೀರ್ಥ ಅಣೆಕಟ್ಟಿನಿಂದ ಮಲ್ಲಪ್ರಭಾ ನದಿಯ ನೀರು ಎತ್ತುವ ಮೂಲಕ ರಾಮದುರ್ಗ ತಾಲ್ಲೂಕಿನ ಚಂದರಗಿ ಮತ್ತು ಸುತ್ತಮುತ್ತಲಿನ ಗ್ರಾಮಗಳ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಾಮನಹಳ್ಳಿ ಬೈರಾನ್ ಹಾಗೂ ವೈದ್ಯನಾಥ ಪುರ ಕಾಲುವೆಗಳ ಆಧುನೀಕರಣ ಕಾಮಗಾರಿ ಕೈಗೊಳ್ಳಲು ಸಂಪುಟ ಸಭೆ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಸಚಿವರು ವಿವರಿಸಿದರು.

'ರೋಹಿತ್ ವೇಮುಲಾ ಮಸೂದೆ' ಮುಂದೂಡಿಕೆ: ಆದಾಗ್ಯೂ ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ ನಿರ್ಧಾರವನ್ನು ಮುಂದೂಡಲಾಗಿದೆ. ಈ ವಿಧೇಯಕ ಕುರಿತು ಒಂದು ಬಾರಿಯೂ ಸಮಾಲೋಚನಾ ಸಭೆ ನಡೆಸಿಲ್ಲ. ಇದಕ್ಕಾಗಿ ಅದನ್ನು ಮುಂದಿನ ಸಭೆಗೆ ಮುಂದೂಡಿದ್ದೇವೆ" ಎಂದು ಸಚಿವರು ಹೇಳಿದರು.

ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತೊಡೆದುಹಾಕುವ ಗುರಿಯನ್ನು ಈ ಕಾಯ್ದೆ ಹೊಂದಿದೆ. ಕರ್ನಾಟಕ ಸರ್ಕಾರ "ರೋಹಿತ್ ವೇಮುಲಾ ಕಾಯ್ದೆ" ಜಾರಿಗೊಳಿಸಬೇಕೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಏಪ್ರಿಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. 2016 ರಲ್ಲಿ ಹೈದರಾಬಾದ್‌ನಲ್ಲಿ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಜಾತಿ ಆಧಾರಿತ ತಾರತಮ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದರು.

ಕರ್ನಾಟಕ ಶಿಕ್ಷಣ ಸಂಸ್ಥೆಗಳ (ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯ ನಿಯಮಗಳು ಮತ್ತು ಷರತ್ತುಗಳ ಮಾನ್ಯತೆ) (ತಾಂತ್ರಿಕ ಶಿಕ್ಷಣ) ನಿಯಮಗಳಿಗೆ ತಿದ್ದುಪಡಿ ಮಾಡುವ ಮೂಲಕ ಮುಸ್ಲಿಮೇತರ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಆಯಾ ಅಲ್ಪಸಂಖ್ಯಾತ ವರ್ಗದ ಶೇ. 50 ರಷ್ಟು ವಿದ್ಯಾರ್ಥಿಗಳನ್ನು ಹೊಂದಿರಬೇಕು ಎಂಬ ನಿಯಮವನ್ನು ತೆಗೆದುಹಾಕಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಪಾಟೀಲ್ ಹೇಳಿದರು.

ದೇವರಾಜ ಅರಸು ಅಭಿವೃದ್ಧಿ ನಿಗಮದ ಮೂಲಕ ಅಂದಾಜು 33.09 ಕೋಟಿ ರೂ. ವೆಚ್ಚದಲ್ಲಿ ಒಟ್ಟು 1,103 ಎಲೆಕ್ಟ್ರಿಕ್ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸಿ, ಅವುಗಳನ್ನು 11 ನಿಗಮಗಳ ಮೂಲಕ ಆಹಾರ ಮಳಿಗೆ ಆರಂಭಿಸುವ ಹಿಂದುಳಿದ ವರ್ಗಗಳಿಗೆ ಸೇರಿದ ನಿರುದ್ಯೋಗಿಗಳಿಗೆ ಒದಗಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ ಅಲ್ಪಸಂಖ್ಯಾತ ಬಾಲಕಿಯರ ಶಿಕ್ಷಣಕ್ಕಾಗಿ 15 ಮಹಿಳಾ ಕಾಲೇಜು ಕಟ್ಟಡಗಳ ನಿರ್ಮಾಣಕ್ಕೆ 87.60 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಎಚ್. ಕೆ. ಪಾಟೀಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರವೇ ಅಡ್ಡಿ ಸೃಷ್ಟಿಸುತ್ತಿದೆ: DCM ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

SCROLL FOR NEXT