ಡಾ ಕೆ ಸುಧಾಕರ್ 
ರಾಜ್ಯ

ಸಂಸದ ಕೆ. ಸುಧಾಕರ್‌ ಹೆಸರು ಬರೆದು ಕಾರು ಚಾಲಕ ಆತ್ಮಹತ್ಯೆ: ರಾಜಕೀಯ ಒತ್ತಡ ಇಲ್ಲದೆ ತನಿಖೆ- ಸಚಿವರ ಭರವಸೆ

ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರ: ಮಾಜಿ ಸಚಿವ ಬಿಜೆಪಿ ಸಂಸದ ಸುಧಾಕರ್‌ ಹೆಸರನ್ನು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನನ್ನ ಸಾವಿಗೆ ಸಂಸದ ಡಾ ಕೆ ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್‌ ನೋಟ್‌ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಇನ್ನೂ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬೆಳಿಗ್ಗೆ ಮಾಹಿತಿ ಬಂದಿದೆ. ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಗುತ್ತಿಗೆ ಚಾಲಕನಾಗಿ ಕೆಲಸ ಮಾಡುತ್ತಿದ್ದ ಬಾಬು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್‌ನೋಟ್‌ನಲ್ಲಿ ತನ್ನ ಸಾವಿಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ. ಸಂಸದ ಸುಧಾಕರ್ ಮೇಲೆ ಆರೋಪ ಮಾಡಿದ್ದಾರೆ. ಎಂಪಿ ಅವರ ಅನುಯಾಯಿ ನಾಗೇಶ್, ಮಂಜುನಾಥ್ ಕಾರಣ ಎಂದು ಪತ್ರ ಬರೆದಿದ್ದಾರೆ. ಯಾರೇ ಆಗಲಿ ಕಾನೂನು ಕ್ರಮ ತೆಗೆದುಕೊಳ್ತೀವಿ ಎಂದಿದ್ದಾರೆ.

ಇದು ಗಂಭೀರ ಆರೋಪ. ಕೆಲಸ ಕೊಡಿಸೋದಾಗಿ ಹಣ ಪಡೆದಿದ್ದಾರೆ. ಇದು ಸಂಪೂರ್ಣ ತನಿಖೆ ಆಗಬೇಕು. ಕಾನೂನು ರೀತಿ ಕ್ರಮ ತೆಗೆದುಕೊಳ್ತೀವಿ. ಡೆತ್‌ನೋಟ್‌ನಲ್ಲಿ ಎಂಪಿ ಸುಧಾಕರ್ ಅವರ ಹೆಸರು ಇದೆ. ತನಿಖೆ ಆಗಲಿ. ಅವರ ಕುಟುಂಬದವರು ಏನು ಹೇಳುತ್ತಾರೆ ಅದೆಲ್ಲದರ ತನಿಖೆ ಆಗಲಿ. ಪಾರದರ್ಶಕ ತನಿಖೆ ಆಗುತ್ತದೆ. ಚಾಲಕ ಬಾಬು ಎಸ್‌ಸಿ ಸಮುದಾಯಕ್ಕೆ ಸೇರಿದ ಯುವಕ. ಸಮಗ್ರ ತನಿಖೆ ಆಗುತ್ತದೆ. ರಾಜಕೀಯ ಒತ್ತಡ ಇಲ್ಲದೆ ತನಿಖೆ ಆಗುತ್ತದೆ ಎಂದು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Ladakh violence ಗೆ ಸೋನಮ್ ವಾಂಗ್‌ಚುಕ್ ಪ್ರಚೋದನಕಾರಿ ಹೇಳಿಕೆಗಳೇ ಕಾರಣ: ಕೇಂದ್ರ ಸರ್ಕಾರ

ಲಡಾಖ್ ಹಿಂಸಾಚಾರಕ್ಕೆ ನಾಲ್ವರು ಬಲಿ: 30 ಜನರಿಗೆ ಗಾಯ; ಬಿಜೆಪಿ ಕಚೇರಿ, ಪೊಲೀಸ್ ವ್ಯಾನ್ ಗೆ ಬೆಂಕಿ; Video

Asia Cup 2025: ಇತಿಹಾಸ ಬರೆದ Abhishek Sharma, ಶ್ರೀಲಂಕಾ ಲೆಜೆಂಡ್ Sanath Jayasuriya ದಾಖಲೆ ಪತನ

Asia Cup 2025: ಬಾಂಗ್ಲಾದೇಶ ಬಗ್ಗು ಬಡಿದ ಭಾರತ, ಫೈನಲ್ ಗೆ ಲಗ್ಗೆ, Srilanka ಟೂರ್ನಿಯಿಂದ ಔಟ್!

Asia Cup 2025: ಭಾರತ ಕಳಪೆ ಫೀಲ್ಡಿಂಗ್, Saif Hassan ಗೆ 4 ಬಾರಿ ಜೀವದಾನ, ಬಾಂಗ್ಲಾ ಬ್ಯಾಟರ್ ವಿಚಿತ್ರ ದಾಖಲೆ! Elite Group ಸೇರ್ಪಡೆ!

SCROLL FOR NEXT