ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕುಡಿತದ ಚಟ ಬಿಡಿಸಲು ನೀಡಿದ ನಾಟಿ ಔಷಧ ಸೇವಿಸಿ ಮೂವರು ಸಾವು; ಓರ್ವನ ಸ್ಥಿತಿ ಗಂಭೀರ

ಇಮಡಾಪುರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಸಾಯಪ್ಪ ಅವರು ಕುಡಿತದ ಚಟ ಬಿಡಿಸಲು ಔಷಧ ನೀಡುತ್ತಿದ್ದರು. ನಾಲ್ವರು ಔಷಧ ಪಡೆದಿದ್ದರು ಎನ್ನಲಾಗಿದೆ.

ಕಲಬುರಗಿ: ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ ನರಸಿಂಹಲು ಬಟಗೇರಾ (55), ಮದಕಲ್ ಗ್ರಾಮದ ನಾಗೇಶ (32) ಹಾಗೂ ಶಹಾಬಾದ್ ಬಳಿಯ‌ ಡಕ್ಕಾ ತಾಂಡಾ ಗಣೇಶ ರಾಠೋಡ್ (30) ಮೃತರು. ಲಕ್ಷ್ಮಿ ಅವರ ಮಗ ಲಿಂಗಪ್ಪ ಅವರ ಸ್ಥಿತಿ ಗಂಭೀರವಾಗಿದ್ದು, ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಮಡಾಪುರ ಗ್ರಾಮದಲ್ಲಿ ಫಕೀರಪ್ಪ ಅಲಿಯಾಸ್ ಸಾಯಪ್ಪ ಅವರು ಕುಡಿತದ ಚಟ ಬಿಡಿಸಲು ಔಷಧ ನೀಡುತ್ತಿದ್ದರು. ನಾಲ್ವರು ಔಷಧ ಪಡೆದಿದ್ದರು ಎನ್ನಲಾಗಿದೆ. ಪ್ರಾಥಮಿಕ ಮಾಹಿತಿಯಂತೆ ಮದ್ಯ ಸೇವನೆ ವ್ಯಸನದಿಂದ ಹೊರಬರಲು ಕೆಲವರು ನಾಟಿ ಔಷಧ ಪಡೆದಿದ್ದರು. ಭಾನುವಾರ ಔಷಧ ಪಡೆದಿದ್ದ ಜನರು ಮತ್ತೆ ಬುಧವಾರವೂ ಬಂದು ಔಷಧ ಪಡೆದಿದ್ದರು. ಆದರೆ, ಔಷಧ ಸೇವಿಸಿದ ಕೆಲವೇ ಗಂಟೆಗಳಲ್ಲಿ ಈ ದುರಂತ ಸಂಭವಿಸಿದೆ.

ಈ ಸಂಬಂಧ ಸೇಡಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಔಷಧ ನೀಡಿದ ಫಕೀರಪ್ಪ ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT