ನಟಿ ರಮ್ಯಾ  
ರಾಜ್ಯ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್​ ಮೀಡಿಯಾದಲ್ಲಿ ಮಾತನಾಡಿದ್ದರು.

ಬೆಂಗಳೂರು: ನಟಿ ಮತ್ತು ಮಾಜಿ ಸಂಸದೆ ರಮ್ಯಾ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಬೆದರಿಕೆ ಮತ್ತು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಪ್ರಸ್ತುತ ಬಂಧನಕ್ಕೊಳಗಾಗಿರುವ ಮತ್ತೋರ್ವ ಆರೋಪಿಯನ್ನು ಕೊಪ್ಪಳದ ಮಂಜುನಾಥ್ ಎಂದು ಗುರುತಿಸಲಾಗಿದೆ. ಇದಕ್ಕೂ ಮೊದಲು ಪೊಲೀಸರು ಟಿ ಓಬಣ್ಣ, ಗಂಗಾಧರ್, ರಾಜೇಶ್ ಮತ್ತು ಭುವನ್ ಗೌಡ ಎಂಬುವವರನ್ನು ಬಂಧಿಸಿದ್ದರು.

ಇತ್ತೀಚೆಗೆ ನಟಿ ರಮ್ಯಾ ಅವರು ರೇಣುಕಾಸ್ವಾಮಿ ಪರ ಸೋಷಿಯಲ್​ ಮೀಡಿಯಾದಲ್ಲಿ ಮಾತನಾಡಿದ್ದರು. ಸುಪ್ರೀಂ ಕೋರ್ಟ್​​ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗೋ ಭರವಸೆ ಇದೆ ಎಂದು ಹೇಳಿದ್ದರು. ಇದು ದರ್ಶನ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ದರ್ಶನ್ ಅಭಿಮಾನಿಗಳು ರಮ್ಯಾ ಅವರ ಸೋಶಿಯಲ್ ಮೀಡಿಯಾ ಪೋಸ್ಟ್​ಗಳಿಗೆ ಅಶ್ಲೀಲವಾಗಿ ಕಮೆಂಟ್​ಗಳನ್ನು ಮಾಡಿದ್ದರು. ಹೀಗಾಗಿ, ರಮ್ಯಾ ಅವರು ಇದನ್ನು ಗಂಭೀರವಾಗಿ ಪರಿಗಣಿಸಿ ಸೈಬರ್ ಠಾಣೆಗೆ ದೂರು ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!