ಡಿಕೆ ಶಿವಕುಮಾರ್ ಸ್ಕೂಟರ್ ಸವಾರಿ 
ರಾಜ್ಯ

DCM ಡಿ.ಕೆ ಶಿವಕುಮಾರ್ ಓಡಿಸಿದ್ದ ಸ್ಕೂಟರ್‌ ಮೇಲೆ 34 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ; ದಂಡ ಪಾವತಿಸಿದ ಮಾಲೀಕ!

ಸಂಚಾರ ಪೊಲೀಸರ ಪ್ರಕಾರ, ವಾಹನದ ಮಾಲೀಕರು ಆಗಸ್ಟ್ 6 ರಂದು ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣೆಗೆ ಖುದ್ದಾಗಿ ಹಾಜರಾಗಿ ದಂಡದ ಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ.

ಬೆಂಗಳೂರು: ಹೆಬ್ಬಾಳ ಮೇಲ್ಸೇತುವೆ ಲೂಪ್ ಪರಿಶೀಲನೆಯ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ ಸಂಚಾರ ನಿಯಮ ಉಲ್ಲಂಘನೆ ಪ್ರಕರಣದಲ್ಲಿ ವಿಧಿಸಲಾಗಿದ್ದ 18,500 ರೂ. ದಂಡವನ್ನು ವಾಹನ ಮಾಲೀಕರು ಪಾವತಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸಂಚಾರ ಪೊಲೀಸರ ಪ್ರಕಾರ, ವಾಹನದ ಮಾಲೀಕರು ಆಗಸ್ಟ್ 6 ರಂದು ಆರ್‌ಟಿ ನಗರ ಸಂಚಾರ ಪೊಲೀಸ್ ಠಾಣೆಗೆ ಖುದ್ದಾಗಿ ಹಾಜರಾಗಿ ದಂಡದ ಪೂರ್ಣ ಮೊತ್ತವನ್ನು ಪಾವತಿಸಿದ್ದಾರೆ.

ಆಗಸ್ಟ್ 5 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಪರಿಶೀಲನೆ ವೇಳೆ ಡಿಕೆ ಶಿವಕುಮಾರ್ ದ್ವಿಚಕ್ರ ವಾಹನವನ್ನು ಚಲಾಯಿಸಿದ್ದರು. ಬೆಂಗಳೂರು ಸಂಚಾರ ಪೊಲೀಸರ ವೆಬ್‌ಸೈಟ್ ಪ್ರಕಾರ, ಆ ದ್ವಿಚಕ್ರ ವಾಹನದ ಮೇಲೆ 34 ಸಂಚಾರ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದವು.

ಹೆಲ್ಮೆಟ್ ಇಲ್ಲದೆ ಸವಾರಿ ಮಾಡುವುದು, ಸವಾರಿ ಮಾಡುವಾಗ ಮೊಬೈಲ್ ಫೋನ್ ಬಳಸುವುದು ಮತ್ತು ಪ್ರವೇಶ ನಿಷೇಧ ಅಥವಾ ಏಕಮುಖ ಸಂಚಾರದಲ್ಲಿ ಸಂಚರಿಸಿರುವುದು ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳಿಗಾಗಿ ವಾಹನದ ಮೇಲೆ ಪ್ರಕರಣಗಳು ದಾಖಲಾಗಿದ್ದವು.

ಡಿಕೆ ಶಿವಕುಮಾರ್ ತಮ್ಮ ಅಧಿಕೃತ X' ಖಾತೆಯಲ್ಲಿ ಹೆಲ್ಮೆಟ್ ಧರಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿರುವ ವಿಡಿಯೋವನ್ನು ಹಂಚಿಕೊಂಡಿದ್ದು, ಆಗಸ್ಟ್ 15 ರಂದು ಹೆಬ್ಬಾಳ ಫ್ಲೈಓವರ್ ಲೂಪ್ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ತಿಳಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್