ಬೆಂಗಳೂರು: ಸಂಗೊಳ್ಳಿ ರಾಯಣ್ಣ ಸ್ಮಾರಕ ನಿರ್ಮಾಣಕ್ಕ 110 ಎಕರೆ ಭೂಮಿ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.
ಸ್ವಾತಂತ್ರ್ಯ ದಿನಾಚರಣೆಯ ಭಾಗವಾಗಿ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ 218 ನೇ ವಾರ್ಷಿಕ ಫಲಪುಷ್ಪ ಪ್ರದರ್ಶನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು.
ಉದ್ಘಾಟನೆಯ ನಂತರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಸಿಎಂ, ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಎರಡು ಯುದ್ಧಗಳನ್ನು ನಡೆಸಿದರು. ಮೊದಲನೆಯ ಯುದ್ಧದಲ್ಲಿ ಗೆದ್ದರು. ಎರಡನೆಯ ಯುದ್ಧದಲ್ಲಿ ಬ್ರಿಟಿಷರಿಂದ ಸೆರೆಹಿಡಿಯಲ್ಪಟ್ಟರು. ಎಲ್ಲಾ ಜಾತಿ ವಿಭಾಗಗಳಿಗೆ ಸೇರಿದ ಜನರು ರಾಣಿ ಚೆನ್ನಮ್ಮ ಅವರ ಸೈನ್ಯದಲ್ಲಿದ್ದರು, ರಾಯಣ್ಣ ಅವರ ಆಪ್ತರಾಗಿದ್ದರು. ತುಂಬಾ ಧೈರ್ಯಶಾಲಿಯಾಗಿದ್ದರು. 1931 ರಲ್ಲಿ ಬ್ರಿಟಿಷರಿಂದ ಗಲ್ಲಿಗೇರಿಸಲ್ಪಟ್ಟರು. ಅವರನ್ನು ಬ್ರಿಟಿಷರು ಗಲ್ಲಿಗೇರಿಸಿದ ಸ್ಥಳದಲ್ಲಿಯೇ ರಾಜ್ಯ ಸರ್ಕಾರ 110 ಎಕರೆ ಭೂಮಿಯನ್ನು ಮಂಜೂರು ಮಾಡುತ್ತಿದ್ದು, ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಈ ವೇಳೆ ಮುಖ್ಯಮಂತ್ರಿ ಅವರೊಂದಿಗೆ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್, ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಾರಿಗೆ ಸಚಿವ ಆರ್. ರಾಮಲಿಂಗಾ ರೆಡ್ಡಿ ಸೇರಿದಂತೆ ಇತರರು ಸಾಥ್ ನೀಡಿದ್ದರು. .