ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: Free Fire ಗೇಮ್ ಅಡಿಕ್ಷನ್; ಅಕ್ಕನ ಮಗನನ್ನೇ ಕೊಂದ ಕಿರಾತಕ

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ.

ಬೆಂಗಳೂರು: ಫ್ರೀ ಫೈರ್ ಗೇಮ್ ಚಟಕ್ಕೆ ಬಿದ್ದಿದ್ದ ಅಕ್ಕನ ಮಗನನ್ನು ಮಾವನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಮೋಘ ಕೀರ್ತಿ ಎಂಬ ಬಾಲಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಎಫ್​ಐಆರ್​ ದಾಖಲಿಸಿಕೊಂಡು ಬಾಲಕನ ಮಾವನನ್ನು ಬಂಧಿಸಿದ್ದಾರೆ.

ಬಾಲಕ ಅಮೋಘ ಕೀರ್ತಿ ಕಳೆದ 8 ತಿಂಗಳಿನಿಂದ ಮಾವ ನಾಗಪ್ರಸಾದ್ ಜೊತೆಗೆ ವಾಸವಿದ್ದ. ಈ ವೇಳೆ ಮೊಬೈಲ್​ನಲ್ಲಿ ಫ್ರೀಫೈರ್ ಗೇಮ್​​ಗೆ ಅಡಿಕ್ಟ್ ಆಗಿದ್ದ. ಗೇಮ್ ಚಟಕ್ಕೆ ಬಿದ್ದು ಪದೇ ಪದೇ ಹಣ ಕೇಳುತ್ತಿದ್ದ. ವಾರದ ಹಿಂದೆ ಹಣ ಕೊಡುವಂತೆ ಮಾವನ ಮೇಲೆ ಹಲ್ಲೆ ಕೂಡ ಮಾಡಿದ್ದ. ಇದರಿಂದ ಬೇಸತ್ತ ನಾಗಪ್ರಸಾದ್ ಬಾಲಕನ ಕತ್ತು ಸೀಳಿ ಕೊಂದಿದ್ದಾರೆ.

ಸೋಮವಾರ ಬೆಳಗಿನ ಜಾವ 4.30ಕ್ಕೆ ಬಾಲಕನ ಕತ್ತು ಸೀಳಿ ಕೊಲೆ ಮಾಡಿದ ನಾಗಪ್ರಸಾದ್​, ಎಲ್ಲಿಗೂ ಹೋಗಲು ಹಣವಿಲ್ಲದೆ ಮೆಜೆಸ್ಟಿಕ್​​ನಲ್ಲೇ ಮೂರು ದಿನಗಳ ಕಾಲ ಕಳೆದಿದ್ದ. ಬಳಿಕ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಸರೆಂಡರ್ ಆಗಿದ್ದಾನೆ, ಘಟನೆ ಸಂಬಂಧ ಎಫ್ಐಆರ್ ದಾಖಲಿಸಿದ ಪೊಲೀಸರು ನಾಗಪ್ರಸಾದ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್