ನಟಿ ರಮ್ಯಾ Express photo Nagaraja Gadekal
ರಾಜ್ಯ

ನಟಿ ರಮ್ಯಾಗೆ ಅಶ್ಲೀಲ ಸಂದೇಶ, ಬೆದರಿಕೆ: ಪ್ರಮುಖ ಆರೋಪಿ ಪ್ರಮೋದ್ ಗೌಡ ಬಂಧನ

‌ಪ್ರಕರಣದ ಮೊದಲ ಆರೋಪಿ, ಕೆಆರ್ ಪುರಂ ನಿವಾಸ ಪ್ರಮೋದ್ ಗೌಡ(20)ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.

‌ಪ್ರಕರಣದ ಮೊದಲ ಆರೋಪಿ, ಕೆಆರ್ ಪುರಂ ನಿವಾಸ ಪ್ರಮೋದ್ ಗೌಡ(20)ನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಮೋದ್ ಗೌಡ, ತನ್ನ ಫ್ರೆಂಡ್ ಮೊಬೈಲ್ ನಲ್ಲಿ ಅಕೌಂಟ್ ಓಪನ್ ಮಾಡಿ, ನಟಿ ರಮ್ಯಾ ಅವರ ಇನ್‌ಸ್ಟಾಗ್ರಾಂ ಖಾತೆಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ.

ಪ್ರಮೋದ್ ಗೌಡ- 87 ಎಂಬ ಅಕೌಂಟ್ ನಿಂದ ಮೆಸೇಜ್ ಮಾಡಿದ್ದ ಪ್ರಮೋದ್ ಗೌಡನನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.

ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.

ಈ ಸಂಬಂಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಾಂಚಿ ಪರೀಕ್ಷೆ ವಿವಾದ: ಬ್ಯಾರಿಕೇಡ್ ಮುರಿದು ವಿಧಾನಸೌಧದತ್ತ ನುಗ್ಗಿದ ವಿದ್ಯಾರ್ಥಿಗಳು! ಜಲಫಿರಂಗಿ ಬಳಸಿದ ಪೊಲೀಸರು, Video

'ಬಸವಣ್ಣನನ್ನೇ ಬಿಡಲಿಲ್ಲ.. ನಾನ್ಯಾರು..'; ‘ಅವರಿಗೆ ಸಚಿವ ಸ್ಥಾನ ಸಿಗದಿರಲು ನಾನು ಕಾರಣ ಅಲ್ಲ’ ಎಂದ ಎಂಬಿ ಪಾಟೀಲ್ ಸ್ಪಷ್ಟನೆ, Video

'JDS ಪಾದಯಾತ್ರೆಯ ಬಂಡವಾಳ ಬಯಲು ಮಾಡಿದ ವಿಜಯೇಂದ್ರ': ಕಾಂಗ್ರೆಸ್​​ನಿಂದ ವಿಡಿಯೋ ಬಿಡುಗಡೆ!