ಸಂಗ್ರಹ ಚಿತ್ರ 
ರಾಜ್ಯ

79ನೇ ಸ್ವಾತಂತ್ರ್ಯ ದಿನಾಚರಣೆ: ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಸಿದ್ಧತೆ ಪೂರ್ಣ; ಇದೇ ಮೊದಲ ಬಾರಿಗೆ E-pass ವ್ಯವಸ್ಥೆ ಆರಂಭ

ಆಸಕ್ತರು ಸೇವಾಸಿಂಧು ವೆಬ್‌ಸೈಟ್ www.sevasindhu.karnataka.gov. in ಮೂಲಕ ಆಧಾರ್‌ಹಾಗೂ ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮೂಲಕ ಇ-ಪಾಸ್ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಬೆಂಗಳೂರು: ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆಯಲಿರುವ ರಾಜ್ಯ ಮಟ್ಟದ 79 ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಇದೇ ಮೊದಲ ಬಾರಿಗೆ 'ಇ-ಪಾಸ್' ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಆಸಕ್ತರು ಸೇವಾಸಿಂಧು ವೆಬ್‌ಸೈಟ್ www.sevasindhu.karnataka.gov. in ಮೂಲಕ ಆಧಾರ್‌ಹಾಗೂ ಮೊಬೈಲ್ ಫೋನ್ ಸಂಖ್ಯೆಯನ್ನು ನಮೂದಿಸಿ ಒಟಿಪಿ ಮೂಲಕ ಇ-ಪಾಸ್ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ತಿಳಿಸಿದ್ದಾರೆ.

ಇ-ಪಾಸ್‌ನೊಂದಿಗೆ ಮೂಲ ಗುರುತಿನ ಚೀಟಿ ಕಡ್ಡಾಯವಾಗಿ ಹೊಂದಿರಬೇಕು. ಬೆಳಗ್ಗೆ 8.15ರ ಒಳಗೆ ಗೇಟ್ ಸಂಖ್ಯೆ 4ರಿಂದ ಮಾತ್ರ ಮೈದಾನವನ್ನು ಪ್ರವೇಶಿಸಬೇಕು. ನಿಗದಿತ ಸಮಯದ ನಂತರ ಇ-ಪಾಸ್ ಅಮಾನ್ಯವಾಗುತ್ತದೆ.

ಇ-ಪಾಸ್‌ ವರ್ಗಾಯಿಸುವಂತಿಲ್ಲ. ಒಂದು ಇಪಾಸ್‌ಗೆ ಒಬ್ಬರಿಗೆ ಮಾತ್ರ ಪ್ರವೇಶ. ಕಾರ್ಯಕ್ರಮದ ಸಂದರ್ಭದಲ್ಲಿ ಇ-ಪಾಸ್‌ನ ಮುದ್ರಿತ ಪ್ರತಿ ಅಥವಾಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಬೇಕಾಗುವುದಿಲ್ಲ.

3 ಸಾವಿರ ಇ-ಪಾಸ್‌ಗಳನ್ನು ಮೊದಲು ಬಂದವರಿಗೆ ಮೊದಲ ಆದ್ಯತೆ ಮೇಲೆ ವಿತರಿಸಲಾಗುತ್ತದೆ. ಇ ಪಾಸ್ ನವರಿಗೆ ಮೈದಾನದೊಳಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪೊಲೀಸ್ ಇಲಾಖೆಯ ನಿರ್ದೇಶನದಂತೆ ಸಾರ್ವಜನಿಕರು ತಮ್ಮ ವಾಹನಗಳನ್ನು ನಿಲುಗಡೆ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

SCROLL FOR NEXT