ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾಗಿರುವ ಬೆಂಗಳೂರು 
ರಾಜ್ಯ

ಬೆಂಗಳೂರಿಗಿಂದು ಪ್ರಧಾನಿ ಮೋದಿ: ಬಹುನಿರೀಕ್ಷಿತ ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ, 3ನೇ ಹಂತಕ್ಕೂ ಶಂಕು ಸ್ಥಾಪನೆ

ಬೆಂಗಳೂರು ನಗರದ ಮೂಲಸೌಕರ್ಯ ವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಂಪರ್ಕಿಸುವ ಆರ್.ವಿ ರಸ್ತೆ-ಬೊಮ್ಮಸಂದ್ರ ನಡುವಿನ (19.15 ಕಿ.ಮೀ) ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಉದ್ಘಾಟನೆ ಮಾಡಲಿದ್ದಾರೆ.

ಇದರೊಂದಿಗೆ 8 ವರ್ಷದ ವಿಳಂಬದ ಬಳಿಕ ಹಳದಿ ಮಾರ್ಗ ಆರಂಭ ಆಗುತ್ತಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

2026ರ ಮಾರ್ಚ್ ವೇಳೆಗೆ 12 ರೈಲು ಸೇರ್ಪಡೆ ಆಗಲಿದ್ದು, ಒಟ್ಟು 15 ರೈಲುಗಳು ಈ ಮಾರ್ಗದಲ್ಲಿ ಕಾರ್ಯಾಚರಣೆ ಮಾಡಲಿವೆ. ಮುಂದಿನ ದಿನಗಳಲ್ಲಿ ಟ್ರಿಪ್‌ಗಳ ಸಂಖ್ಯೆ ಕೂಡ ಹೆಚ್ಚಾಗಲಿದ್ದು, ನಿತ್ಯ 3.5 ಲಕ್ಷ ಮಂದಿ ಪ್ರಯಾಣಿಸಬಹುದು ಎಂದು ಬಿಎಂಆರ್ಸಿಎಲ್‌ ಅಂದಾಜಿಸಿದೆ.

ಸದ್ಯಕ್ಕೆ ಹೊಸ ಹಳದಿ ಮಾರ್ಗದ ಟಿಕೆಟ್ ದರ, ರೈಲುಗಳ ಸಂಚಾರದ ಅವಧಿಯನ್ನು ಬೆಂಗಳೂರು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಅಧಿಕೃತವಾಗಿ ಒದಗಿಸಿಲ್ಲ.

ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್‌ವರೆಗೆ (ಸಿಎಸ್‌ಬಿ) ಡಬ್ಬಲ್ ಡೆಕ್ಕರ್ (3.3 ನಿರ್ಮಿಸಲಾಗಿದೆ. ಡಬ್ಬಲ್ ಡೆಕ್ಕರ್ ಪ್ರೈಓವರ್‌ನ ಮೇಲ್ಬಾಗದಲ್ಲಿ ನಮ್ಮ ಮೆಟ್ರೋ ರೈಲು ಓಡಾಡಲಿದೆ. ಕೆಳಭಾಗ ವಾಹನಗಳ ಓಡಾಟಕ್ಕೆ ಮೀಸಲಾಗಿದೆ. ಜೊತೆಗೆ ಈ ಮಾರ್ಗದ ಜಯದೇವ ಇಂಟರ್ ಚೇಂಜ್ ಮೆಟ್ರೋ ನಿಲ್ದಾಣ ಅತೀ ಎತ್ತರದ ಮೆಟ್ರೋ ನಿಲ್ದಾಣ ಎನ್ನಿಸಿದ್ದು 5 ಹಂತದ ಸಾರಿಗೆ ವ್ಯವಸ್ಥೆ ನಿರ್ಮಾಣವಾಗಿದೆ. 2026ರ ಡಿಸೆಂಬರ್‌ಗೆ ಈ ಮಾರ್ಗ ಉದ್ಘಾಟನೆ ಆಗಲಿದ್ದು, ಬಳಿಕವಷ್ಟೆ ಇದರ ಪೂರ್ಣ ಬಳಕೆ ಆಗಲಿದೆ.

ಹಳದಿ ಮಾರ್ಗ ಸದ್ಯ ಕೇವಲ ಮೂರು ರೈಲುಗಳಿಂದ ಕಾರ್ಯಾಚರಣೆ ಆಗಲಿದೆ. ಚಾಲಕ ರಹಿತ ರೈಲಿಗಾಗಿ ಸಿಬಿಟಿಸಿ (ಕಮ್ಯುನಿಕೇಶನ್ ಬೇಸ್ ಟ್ರೈನ್ ಕಂಟ್ರೋಲ್) ತಂತ್ರಜ್ಞಾನ ಬಳಸಲಾಗಿದೆ. 2026ರ ವೇಳೆಗೆ ಈ ಮಾರ್ಗಕ್ಕೆ 14 ರೈಲು ಸೇರ್ಪಡೆ ಆಗಲಿದ್ದು, ಆಗ 90 ಸೆಕೆಂಡ್‌ಗೆ ಒಮ್ಮೆ ರೈಲುಗಳು ಸಂಚರಿಸಲಿವೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ಆರಂಭದಲ್ಲಿ ಚಾಲಕ ಸಹಿತವಾಗಿ ಸಂಚರಿಸಿ ಬಳಿಕ ಚಾಲಕರಹಿತವಾಗಿ ರೈಲನ್ನು ಓಡಿಸಲಾಗುವುದು ಎಂದು ಬಿಎಂಆರ್‌ಸಿಎಲ್‌ ತಿಳಿಸಿದೆ.

ಮೆಟ್ರೋ 3ನೇ ಹಂತದ ಯೋಜನೆಗೆ ಭಾನುವಾರ ಶಂಕು ಸ್ಥಾಪನೆ ಆಗಲಿದೆ. ಜೆ.ಪಿ.ನಗರ 4ನೇಹಂತದಿಂದ ಕೆಂಪಾಪುರ (32.15 -ಕಿಮೀ) ಹಾಗೂ ಹೊಸಹಳ್ಳಿ - ಕಡಬಗೆರೆ (12.5- ಕಿಮೀ) ನಡುವಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೂ ಇಂದು ಶಂಕು ಸ್ಥಾಪನೆ ಆಗಲಿದೆ. ಇದು 15,611 ಕೋಟಿ ಮೊತ್ತದ್ದಾಗಿದ್ದು, ಎರಡು ಕಾರಿಡಾರ್ ಸೇರಿ 44.65 ಕಿ.ಮೀ ಉದ್ದವಿ ರಲಿದೆ. ಈ ಮಾರ್ಗದ ಕಾಮಗಾರಿ 2028ರ ವೇಳೆಗೆ ಪೂರ್ಣ ಗೊಳ್ಳುವ ನಿರೀಕ್ಷೆಯಿದೆ.9.12 ಲಕ್ಷ ಪ್ರಯಾಣಿಕರಿಗೆ ನೆರವಾಗಲಿದೆ ಎಂದು ಬಿಎಂಅರ್‌ಸಿಎಲ್ ಹೇಳಿದೆ.

ಮೂರನೇ ಹಂತದ ನಮ್ಮ ಮೆಟ್ರೋ ಒಟ್ಟು 30 ನಿಲ್ದಾಣ ಒಳಗೊಂಡಿದೆ. (ಕಾರಿಡಾರ್1 ರಲ್ಲಿ 21 ನಿಲ್ದಾಣಗಳು ಮತ್ತು ಕಾರಿಡಾರ್2 ರಲ್ಲಿ ನಿಲ್ದಾಣಗಳು ಇರ ಲಿವೆ). ಇವುಗಳಲ್ಲಿ ಏಳು ಇಂಟರ್ಚೇಂಜ್ ನಿಲ್ದಾಣಗಳಾಗಿವೆ. ಜೆಪಿ ನಗರ 4 ನೇ ಹಂತ, ಜೆಪಿ ನಗರ, ಮೈಸೂರು ರಸ್ತೆ, ಸುಮನಹಳ್ಳಿ ಕ್ರಾಸ್, ಗೋರಗುಂಟೆಪಾಳ್ಯ, ಹೆಬ್ಬಾಳ ಮತ್ತು ಕೆಂಪಾಪುರ ಸೇರಿವೆ.

ಪ್ರಧಾನಿ ಮೋದಿಯವರು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಹೆಲಿಕಾಪ್ಟರ್ ಮುಖಾಂತರ ಮೇಖಿ ವೃತ್ತದ ಬಳಿಯ ಲಿಮಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್) ರೈಲು ನಿಲ್ದಾಣಕ್ಕೆ ಬರಲಿದ್ದಾರೆ. ಮೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ.

ನಂತರ ಮೋದಿ ಅವರು ಬೆಳಗ್ಗೆ 11.30ಕ್ಕೆ ರಸ್ತೆ ಮಾರ್ಗವಾಗಿ ಆರ್.ವಿ.ರಸ್ತೆಯ ಮೆಟ್ರೋ ನಿಲ್ದಾಣ ತಲುಪಿ ಬೆಳಗ್ಗೆ 11.45ಕ್ಕೆ ಆರ್.ವಿ.ರಸ್ತೆಯ ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಮಧ್ಯಾಹ್ನ 12.55ಕ್ಕೆ ಆರ್.ವಿ.ರಸ್ತೆಯ (ರಾಗೀಗುಡ್ಡ) ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕೇಂದ್ರದ ಸಭಾಂಗಣದಲ್ಲಿ ಆಗಮಿಸಿ ಮೆಟ್ರೋ 3ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಳಿಕ ಮಧ್ಯಾಹ್ನ 1.30ಕ್ಕೆ ನಡೆವ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಹೆಲಿಕಾಪ್ಟರ್‌ನಲ್ಲಿ ಎಚ್‌ಎಎಲ್ ನಿಲ್ದಾಣಕ್ಕೆ ತೆರಳಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಈ ನಡುವೆ ಬೆಂಗಳೂರಿಗೆ ಆಗಮಿಸುತ್ತಿರುವ ಕುರಿತು ಪ್ರಧಾನಿ ಮೋದಿ ಅವರು ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿ ಕನ್ನಡದಲ್ಲಿ ಮಾಹಿತಿ ನೀಡಿದ್ದಾರೆ.

ಆ.10ರಂದು ಬೆಂಗಳೂರಿನ ಜನರೊಂದಿಗೆ ಇರಲು ಎದುರು ನೋಡುತ್ತಿದ್ದೇನೆ. ಸಂಪರ್ಕವನ್ನು ಸುಧಾರಿಸುವ 3 ವಂದೇ ಭಾರತ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಿಸಲಾಗುವುದು. ಬೆಂಗಳೂರು ನಗರದ ಮೂಲಸೌಕರ್ಯ ವನ್ನು ಹೆಚ್ಚಿಸಲು, ಬೆಂಗಳೂರು ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಲಾಗುವುದು, ಬೆಂಗಳೂರು ಮೆಟ್ರೋದ ಮೂರನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT