ರಾಜ್ಯ

Bengaluru Rains: ಸಿಲಿಕಾನ್ ಸಿಟಿಗೆ ಮುಂದಿನ 4 ದಿನ ಗುಡುಗು ಸಹಿತ ಧಾರಾಕಾರ ಮಳೆ; IMD ಎಚ್ಚರಿಕೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದಿಂದ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅಬ್ಬರಿಸುತ್ತಿರುವ ಆಶ್ಲೇಷ ಮಳೆ ಎಲ್ಲಾ ಕಡೆ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಕಳೆದ ಎರಡು ಮೂರು ದಿನದಿಂದ ಬಿಟ್ಟೂ ಬಿಡದೆ ಮಳೆಯಾಗುತ್ತಿದ್ದು, ಉತ್ತರದ ಜಿಲ್ಲೆಗಳಲ್ಲಂತೂ ನರಕವೇ ಸೃಷ್ಟಿಯಾಗಿದೆ. ಇಷ್ಟು ದಿನ ಶಾಂತವಾಗಿದ್ದ ಹಳ್ಳಕೊಳ್ಳಗಳೆಲ್ಲಾ ಮತ್ತೆ ಹುಚ್ಚೆದ್ದು ಹರಿಯುತ್ತಿವೆ.

ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಗೆ ರಸ್ತೆಗಳಲ್ಲೆಲ್ಲಾ ನೀರು ತುಂಬಿಕೊಂಡಿದೆ. ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಶಿವಾಜಿನಗರ, ವಿಧಾನಸೌಧದ ಸುತ್ತ ಮುತ್ತ ಭಾರೀ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣವಿತ್ತು. ಇನ್ನು 3 ಗಂಟೆ ಸುಮಾರಿಗೆ ಮಳೆಯ ಆರ್ಭಟ ಜೋರಾಯಿತು.

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ದಿನವೂ ಮಳೆಯಾಗುತ್ತಿದೆ. ಆಗಸ್ಟ್ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್