ರಾಜ್ಯ

News Headlines 11-08-25 | ಸಂಪುಟದಿಂದ ಕೆಎನ್ ರಾಜಣ್ಣನ ಕಿತ್ತೆಸೆದ ಸಿದ್ದರಾಮಯ್ಯ; 18 BJP ಶಾಸಕರ ಅಮಾನತು ರದ್ದತಿ ನಿರ್ಧಾರ ಅಂಗೀಕಾರ; ಮತಗಳ್ಳತನ ಆರೋಪ: Rahul Gandhi ವಿರುದ್ಧ ECಗೆ JDS ದೂರು!

ಸಂಪುಟದಿಂದ ಕೆಎನ್ ರಾಜಣ್ಣನ ಕಿತ್ತೆಸೆದ ಸಿದ್ದರಾಮಯ್ಯ

ತಮ್ಮದೇ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಹೈಕಮಾಂಡ್ ಮುಜುಗುರಕ್ಕೀಡಾಗುವಂತೆ ಮಾಡುತ್ತಿದ್ದ ರಾಜ್ಯ ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಶಿಫಾರಸು ಮಾಡಿದ ನಂತರ ಸೋಮವಾರ ಅವರನ್ನು ವಜಾಗೊಳಿಸಲಾಯಿತು. ಆರಂಭದಲ್ಲಿ, ಸಿದ್ದರಾಮಯ್ಯ ಅವರು ರಾಜಣ್ಣ ಅವರನ್ನು ರಾಜೀನಾಮೆ ನೀಡುವಂತೆ ಕೇಳಿಕೊಂಡರು. ಆದರೆ, ಅವರು ರಾಜೀನಾಮೆ ನೀಡದ ಕಾರಣ, ಅವರನ್ನು ಸಂಪುಟದಿಂದ ತೆಗೆದುಹಾಕಲಾಯಿತು ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ಪಿಟಿಐಗೆ ತಿಳಿಸಿವೆ. ರಾಜಣ್ಣ ಅವರನ್ನು ಪದಚ್ಯುತಗೊಳಿಸುವ ಪತ್ರವನ್ನು ಮುಖ್ಯಮಂತ್ರಿಗಳು ಮಧ್ಯಾಹ್ನ ರಾಜ್ಯಪಾಲರಿಗೆ ಕಳುಹಿಸಿದರು ಮತ್ತು ಶಿಫಾರಸನ್ನು ರಾಜಭವನ ಅಂಗೀಕರಿಸಿತು. ಲೋಕಸಭಾ ಚುನಾವಣೆ ವೇಳೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ಸೇರಿದಂತೆ ದೇಶದ ಹಲವೆಡೆ ಮತಕಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪದ ಬಗ್ಗೆ ಚರ್ಚೆಯಾಗುತ್ತಿದ್ದಾಗ, ಕೆಎನ್ ರಾಜಣ್ಣ ಪಕ್ಷಕ್ಕೆ ಮುಜುಗುರ ಉಂಟು ಮಾಡುವ ಹೇಳಿಕೆ ನೀಡಿದ್ದರು.

Dharmasthala case ಸ್ಥಳ ಸಂಖ್ಯೆ 13ರಲ್ಲಿ GPR ಬಳಕೆ: 38 ವರ್ಷದ ಹಳೇ ಪ್ರಕರಣಕ್ಕೆ ಮರುಜೀವ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಇಂದು ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್ ಸಾಧನ ಬಳಸಿ ಆಪಾದಿತ ಸಮಾಧಿ ಸ್ಥಳ 13ರಲ್ಲಿ ಅಸ್ಥಿಪಂಜರಗಳ ಹುಡುಕಾಟ ನಡೆಸುತ್ತಿದೆ. ಇಲ್ಲಿಯವರೆಗೆ ಅನಾಮಿಕ ದೂರುದಾರ ತೋರಿಸಿದ 15 ಸ್ಥಳಗಳಲ್ಲಿ ಎಸ್‌ಐಟಿ ಶೋಧ ನಡೆಸಿದ್ದು ಈ ಪೈಕಿ ಒಂದರಲ್ಲಿ ಮಾತ್ರ ಮಾನವ ಅವಶೇಷಗಳು ಪತ್ತೆಯಾಗಿದ್ದವು. ಆದರೆ ಉಳಿದ ಕಡೆಗಳಲ್ಲಿ ಶವ ಪತ್ತೆಯಾಗದ ಕಾರಣ ಜಿಪಿಆರ್ ತಂತ್ರಜ್ಞಾನ ಬಳಸಲು ಎಸ್ಐಟಿ ನಿರ್ಧರಿಸಿದೆ. ಮತ್ತೊಂದೆಡೆ 38 ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಿಗೂಢವಾಗಿ ಸಾವಿಗೀಡಾದ ಪದ್ಮಲತಾ ಪ್ರಕರಣಕ್ಕೆ ಮರುಜೀವ ಸಿಕ್ಕಿದ್ದು ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಪದ್ಮಲತಾ ಸಹೋದರಿ ಎಸ್‌ಐಟಿಗೆ ದೂರು ನೀಡಿದ್ದಾರೆ. ಈ ಮಧ್ಯೆ ರಹಸ್ಯ ಸಮಾಧಿ ಪ್ರಕರಣದಲ್ಲಿ ರಾಷ್ಟ್ರೀಯ ಮಾವನ ಹಕ್ಕುಗಳ ಆಯೋಗ ಎಂಟ್ರಿಕೊಟ್ಟಿದ್ದು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಉತ್ಖನನ ಸ್ಥಳಗಳಿಗೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.

BJP 18 ಶಾಸಕರ ಅಮಾನತು ರದ್ದತಿ ನಿರ್ಧಾರ ಅಂಗೀಕಾರ

ಕರ್ನಾಟಕ ವಿಧಾನಸಭೆಯು ಸೋಮವಾರ 18 ಬಿಜೆಪಿ ಶಾಸಕರ ಅಮಾನತು ರದ್ದತಿ ನಿರ್ಧಾರವನ್ನು ಅಂಗೀಕರಿಸಿದೆ. ಕಳೆದ ಅಧಿವೇಶನದ ಸಂದರ್ಭದಲ್ಲಿ ಬಿಜೆಪಿಯ 18 ಬಿಜೆಪಿ ಸದಸ್ಯರು ಸಭಾಧ್ಯಕ್ಷರ ಪೀಠಕ್ಕೆ ಅಗೌರವ ತೋರಿದ್ದಾರೆ ಎಂದು ಆರೋಪಿಸಿ ವಿಧಾನ ಸಭಾಧ್ಯಕ್ಷ ಯುಟಿ ಖಾದರ್ ಅವರು 6 ತಿಂಗಳ ಕಾಲ 18 ಬಿಜೆಪಿ ಸದಸ್ಯರುಗಳನ್ನು ಅಮಾನತ್ತು ಮಾಡಿದ್ದರು. ಇದಾದ ಬಳಿಕ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಎಲ್ಲ ಸದಸ್ಯರು ಸಭಾಧ್ಯಕ್ಷರನ್ನು ಭೇಟಿ ಮಾಡಿ ಅಮಾನತ್ತನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು.

ಚಿನ್ನ ಕಳ್ಳಸಾಗಣೆ ಪ್ರಕರಣ: ಡಿಜಿಪಿ ಕೆ. ರಾಮಚಂದ್ರ ರಾವ್ ಮರುನೇಮಕ

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಭಾಗಿಯಾಗಿಯಾಗಿದ್ದಾರೆ ಎಂಬ ಆರೋಪ ಮೇಲೆ ಕಡ್ಡಾಯ ರಜೆಯಲ್ಲಿದ್ದ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಮರುನೇಮಕ ಮಾಡಿದೆ. ಡಿಜಿಪಿ ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಪೊಲೀಸ್ ಮಹಾನಿರ್ದೇಶಕರ ಹುದ್ದೆ ನೀಡಿ ಮೇಲ್ದರ್ಜೆಗೇರಿಸಲಾಗಿದೆ. ರಾಜ್ಯ ಸರ್ಕಾರವು ಐಪಿಎಸ್ (ವೇತನ) ನಿಯಮಗಳು 2016ರ ನಿಯಮ 12ರ ಅಡಿಯಲ್ಲಿ ಸಿಐಡಿ, ವಿಶೇಷ ಘಟಕಗಳು ಮತ್ತು ಆರ್ಥಿಕ ಅಪರಾಧಗಳ ಮಹಾನಿರ್ದೇಶಕ ಹುದ್ದೆಗೆ ಸಮಾನವಾಗಿದೆ ಎಂದು ಹೇಳಿದೆ. ಮಾರ್ಚ್ 15ರಂದು ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು. ಪೊಲೀಸ್ ಪ್ರೋಟೋಕಾಲ್ ಸೇವೆಗಳ ದುರುಪಯೋಗ ಮತ್ತು ಪ್ರಕರಣದಲ್ಲಿ ಡಿಜಿಪಿ ರಾವ್ ಸಂಭಾವ್ಯ ಪಾತ್ರದ ಕುರಿತಂತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ನೇತೃತ್ವದ ತನಿಖಾ ಸಮಿತಿ ಪ್ರಶ್ನಿಸಿತ್ತು.

ಮತಗಳ್ಳತನ ಆರೋಪ: ರಾಹುಲ್ ಗಾಂಧಿ ವಿರುದ್ಧ ECಗೆ JDS ದೂರು

ಬೆಂಗಳೂರಲ್ಲಿ ಪ್ರತಿಭಟನೆ ವೇಳೆ ಮತಗಳ್ಳತನದ ಬಗ್ಗೆ ಸುಳ್ಳು ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ನಿಯೋಗ ಇಂದು ಕರ್ನಾಟಕ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಜೆಡಿಎಸ್ ಎಂಎಲ್ಸಿ ಕೆ.ಎ ತಿಪ್ಪೇರುದ್ರಸ್ವಾಮಿ, ಮುಖಂಡರಾದ ಜವರಾಯಿಗೌಡ ಮತ್ತು ಹೆಚ್. ಎನ್ ದೇವರಾಜ್ ಸೇರಿದಂತೆ ಇತರರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ನಕಲಿ ಮತದಾನದ ಆರೋಪದ ಜೊತೆಗೆ ರಾಹುಲ್ ಗಾಂಧಿ ಚುನಾವಣಾ ಆಯೋಗದ ವಿರುದ್ಧವೂ ಸುಳ್ಳು ಆರೋಪ ಮಾಡಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜೆಡಿಎಸ್ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ, ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ, ರಾಕೆಟ್ ಚಾಲಿತ ಗ್ರೇನೆಡ್ ವಶಕ್ಕೆ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ತಿರುಗೇಟು ನೀಡಿದ ಅಪ್ಘಾನಿಸ್ತಾನ! ಹೇಳಿದ್ದೇನು?Video

ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿಎಂ ಸೂಚನೆ

SCROLL FOR NEXT