ದಸರಾ ಆನೆಗಳಿಗೆ ಸಾಂಪ್ರಾದಾಯಿಕ ಸ್ವಾಗತ 
ರಾಜ್ಯ

ಮೈಸೂರು: ಅಂಬಾವಿಲಾಸ ಅರಮನೆ ಪ್ರವೇಶಿಸಿದ ಜಂಬೂ ಪಡೆ; 9 ದಸರಾ ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ; Video

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಸ್ಟ್ 4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು.

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಭಾಗವಹಿಸಲು ನಾಗರಹೊಳೆಯ ವೀರನಹೊಸಳ್ಳಿಯಿಂದ ಗಜಪಯಣದ ಮೂಲಕ ಆಗಮಿಸಿದ್ದ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಭಾನುವಾರ ಅರಮನೆ ಆವರಣದಲ್ಲಿ ವಿಧ್ಯುಕ್ತವಾಗಿ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು.

ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆ.4ರಂದು ಗಜಪಯಣದ ಮೂಲಕ ಮೈಸೂರಿಗೆ ಆಗಮಿಸಿದ್ದ ಗಜಪಡೆ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿದ್ದವು. ಭಾನುವಾರ ಮಧ್ಯಾಹ್ನ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಅರಣ್ಯ ಭವನದಿಂದ ಬೀಳ್ಕೊಡಲಾಯಿತು.

ಅಲ್ಲಿಂದ ಆನೆಗಳು ತುಂತುರು ಮಳೆಯ ನಡುವೆಯೇ ಮೆರವಣಿಗೆ ಮೂಲಕ ನಗರದ ಅಶೋಕ ವೃತ್ತ, ಆರ್‌ಟಿಒ ವೃತ್ತ, ರಾಮಸ್ವಾಮಿ ವೃತ್ತ, ಚಾಮರಾಜ ಜೋಡಿ ರಸ್ತೆ, ಬಸವೇಶ್ವರ ವೃತ್ತ ಹಾದು ಜಯಮಾರ್ತಾಂಡ ದ್ವಾರದ ಬಳಿ ಬಂದವು. ಆನೆಗಳು ಸಂಜೆ 6:50 ಕ್ಕೆ ಶುಭ ಮಕರ ಗೋಧೋಳಿ ಲಗ್ನದಲ್ಲಿ ಸ್ವಾಗತಿಸಲಾಯಿತು.

ದಸರಾ ಆನೆಗಳಾದ ಧನಂಜಯ, ಭೀಮ, ಮಹೇಂದ್ರ, ಕಾವೇರಿ, ಕಾಂಜನ್, ಪ್ರಶಾಂತ್, ಲಕ್ಷ್ಮಿ ಮತ್ತು ಏಕಲವ್ಯ ಕಳೆದ ಸೋಮವಾರ ಹುಣಸೂರಿನ ವೀರನಹೊಸಹಳ್ಳಿಯಿಂದ ನಗರಕ್ಕೆ ಆಗಮಿಸಿ ಅರಣ್ಯ ಭವನದಲ್ಲಿ ತಂಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್