ಬಿಜೆಪಿ ಸಭೆ 
ರಾಜ್ಯ

ವಿಧಾನಮಂಡಲ ಮುಂಗಾರು ಅಧಿವೇಶನ: BJP ಶಾಸಕಾಂಗ ಪಕ್ಷದ ಸಭೆ, ಸರ್ಕಾರದ ವಿರುದ್ಧ ರಣತಂತ್ರ

ನಡೆಯುತ್ತಿರುವ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂಬುದರ ಕುರಿತು ಸದಸ್ಯರಿಂದ ಅನೇಕ ಸಲಹೆಗಳು ಬಂದಿವೆ.

ಬೆಂಗಳೂರು: ವಿಧಾನ ಮಂಡಲ ಮುಂಗಾರು ಅಧಿವೇಶನ ಹಿನ್ನೆಲೆ ನಗರದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು.

ರಾಜಭವನದ ರಸ್ತೆಯಲ್ಲಿರುವ ಖಾಸಗಿ ಹೋಟೆಲ್​ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಅಶೋಕ್ ನೇತೃತ್ವದಲ್ಲಿ ಸಭೆ ಸಭೆ ನಡೆಯಿತು.

ಸಭೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ,. ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ್, ವಿಧಾನಸಭೆ ವಿಪಕ್ಷ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್, ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್ ಸೇರಿ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಭಾಗಿಯಾಗಿದ್ದರು.

ಸಭೆ ಬಳಿಕ ಮಾತನಾಡಿದ ಅಶೋಕ್ ಅವರು, ನಡೆಯುತ್ತಿರುವ ಅಧಿವೇಶನದಲ್ಲಿ ಏನು ಚರ್ಚಿಸಬೇಕು ಎಂಬುದರ ಕುರಿತು ಸದಸ್ಯರಿಂದ ಅನೇಕ ಸಲಹೆಗಳು ಬಂದಿವೆ. ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ ಬಗ್ಗೆ ಚರ್ಚಿಸಲು ಈಗಾಗಲೇ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗಿದೆ.

ಇದಲ್ಲದೆ, ರಸಗೊಬ್ಬರ ಕೊರತೆ, ನಷ್ಟ, ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ನಂತರ ಹರಡಲಾಗಿರುವ ತಪ್ಪು ಮಾಹಿತಿಯ ಬಗ್ಗೆಯೂ ಪ್ರಸ್ತಾಪಿಸಲಾಗುತ್ತದೆ ಎಂದು ಹೇಳಿದರು.

ಪ್ರಕರಣದಲ್ಲಿ ಎಸ್‌ಐಟಿ ರಚಿಸಿ ಹಲವು ದಿನಗಳಾಗಿವೆ. ಆದರೆ, ಇನ್ನೂ ಯಾವುದೇ ವರದಿ ಹೊರಬಂದಿಲ್ಲ. ಅನಾಮಿಕ ವ್ಯಕ್ತಿ ಈ ಹಿಂದೆ 13 ಸೈಟ್‌ಗಳನ್ನು ಸೂಚಿಸಿದ್ದರು, ಆದರೆ,ಈಗ ಆ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಜನರು ಕೂಡ ವಿರೋಧಿಸುತ್ತಿದ್ದಾರೆ. ತಪ್ಪು ಮಾಹಿತಿ ಹರಡಲಾಗುತ್ತಿದೆ. ದೂರುದಾರರು ಸ್ಪಷ್ಟವಾಗಿದ್ದರೆ, ಮೊದಲ ಸ್ಥಳದಲ್ಲಿಯೇ ಸಾಕ್ಷ್ಯ ಪತ್ತೆಯಾಗಬೇಕಿತ್ತು. ನೂರಾರು ಯುವತಿಯರ ಕೊಲೆಯಾಗಿದೆ ಎಂದು ಆತ ಆರೋಪಿಸಿದ್ದಾನೆ. ಆದರೆ, ಸಾಕ್ಷ್ಯ ಇರುವ ಸ್ಥಳ ತೋರಿಸುತ್ತಿಲ್ಲ. ಇದರ ಹಿಂದೆ ಯಾರೋ ಇದ್ದಾರೆ ಎಂಬ ಅನುಮಾನವಿದೆ. ಆದರೆ, ಸರ್ಕಾರವೇಕೆ ಮೌನ ತಾಳಿದೆ? Foj ಬಗ್ಗೆ ಸದನದಲ್ಲಿಯೂ ಚರ್ಚಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ರಾಜಣ್ಣ ಅವರ ರಾಜೀನಾಮೆ ಏಕೆ ಎಂದೂ ಸರ್ಕಾರವನ್ನು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT