NHRC ಅಧಿಕಾರಿಗಳು 
ರಾಜ್ಯ

ಧರ್ಮಸ್ಥಳ ಪ್ರಕರಣ: NHRC ಅಧಿಕಾರಿಗಳ ತನಿಖೆ, ವಿವಿಧ ಸ್ಥಳಗಳಿಗೆ ಭೇಟಿ, ದಾಖಲೆಗಳ ಸಂಗ್ರಹ!

ಬೆಳ್ತಂಗಡಿ ತಾಲೂಕಿಗೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.

ಮಂಗಳೂರು: ಧರ್ಮಸ್ಥಳದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪ ಕುರಿತಂತೆ ಇದೀಗ ಮಾನವ ಹಕ್ಕಗಳ ಆಯೋಗವೂ ತನಿಖೆ ಆರಂಭಿಸಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.

ಈ ಸಂಬಂಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.

ಆರಂಭಿಕವಾಗಿ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್ ನೇತೃತ್ವದ NHRC ತಂಡವು ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳು ಹೇಳಿಕೆಗಳನ್ನು ಒದಗಿಸಿದ್ದಾರೆ. ಈ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳದ ನೇತ್ರಾ ನದಿ ದಡದಲ್ಲಿ ಅನೇಕ ಮಹಿಳೆಯರು ಮತ್ತು ಅಪ್ರಾಪ್ತ ಬಾಲಕಿಯರ ಶವಗಳನ್ನು ನನ್ನಿಂದ ಬಲವಂತವಾಗಿ ಹೂಳಿಸಲಾಗಿದೆ ಎಂಬ ಅನಾಮಿಕ ಸಾಕ್ಷಿದಾರನ ಹೇಳಿಕೆ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT