ಬೀದಿ ನಾಯಿ 
ರಾಜ್ಯ

ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಳ: ಆಶ್ರಯ ತಾಣಗಳಿಗೆ ರವಾನಿಸುವಂತೆ ಆಗ್ರಹ

ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ.

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿತ್ತು, ಈ ಬಗ್ಗೆ ವಿಧಾನಪರಿಷತ್ ನಲ್ಲಿ ಮಂಗಳವಾರ ತೀವ್ರ ಚರ್ಚೆ ನಡೆಯಿತು.

ಪ್ರಶ್ತೋತರ ಕಲಾಪ ವೇಳೆ ವಿಪಕ್ಷ ಸದಸ್ಯ ಎಸ್. ಎಲ್. ಭೋಜೇಗೌಡ ಅವರು ಚಿಕ್ಕಮಗಳೂರು ನಗರ ಮತ್ತು ಜಿಲ್ಲೆಯ ಇತರ ಸ್ಥಳಗಳ ಜನರು ಬೀದಿ ನಾಯಿಗಳಿಂದ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಧ್ವನಿ ಎತ್ತಿದರು.

ಮಕ್ಕಳು, ಹಿರಿಯ ನಾಗರಿಕರ ಮೇಲೆ ನಾಯಿ ಕಚ್ಚುವ ಪ್ರಕರಣಗಳು ಅಧಿಕವಾಗುತ್ತಿವೆ. ಚಿಕ್ಕಮಗಳೂರಿಗೆ ಸೀಮಿತವಾಗಿರದೇ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಈ ಸಮಸ್ಯೆ ಉಲ್ಬಣಗೊಂಡಿದೆ. ಸಚಿವರು, ಶಾಸಕರು, ನ್ಯಾಯಾಧೀಶರ ಮಕ್ಕಳಿಗೆ ಬೀದಿನಾಯಿಗಳಿಂದ ಸಮಸ್ಯೆಯಿಲ್ಲ. ಬೀದಿಯಲ್ಲಿ ಓಡಾಡುವ ಮಕ್ಕಳಿಗೆ ಮಾತ್ರ ತೊಂದರೆಯಾಗುತ್ತಿವೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.

ಬೀದಿ ನಾಯಿಗಳ ದಾಳಿಯಿಂದ ರೇಬಿಸ್ ಖಾಯಿಲೆ ಬರುತ್ತಿದ್ದು, ಇದನ್ನ ತಪ್ಪಿಸಲು ಲಸಿಕೆಯಿದೆ. ನಾಯಿ ಕಚ್ಚೋದನ್ನು ತಪ್ಪಿಸುವುದು ಹೇಗೆ? ಎಂಬುದರ ವಸ್ತು ಸ್ಥಿತಿ ಬಗ್ಗೆ ಸುಪ್ರೀಂ ಕೋರ್ಟ್​ಗೆ ಕೇಳುವುದರಲ್ಲಿ ತಪ್ಪೇನಿಲ್ಲ. ಈ ಪ್ರಾಣಿ ದಯಾ ಸಂಘದವರದ್ದು ಕಾಟವಾಗಿದೆ. ಅವರ‌ ಮನೆಗಳಿಗೆ ನಾಯಿಗಳನ್ನು ಬಿಡುವಂತೆ ಕಿಚಾಯಿಸಿದರು.

ನಾನು ಈ ಹಿಂದೆ ಸಿಎಂಸಿ ಅಧ್ಯಕ್ಷನಾಗಿದ್ದಾಗ 2 ಸಾವಿರಕ್ಕೂ ನಾಯಿಗಳನ್ನು ಸಾಯಿಸಿ ತೆಂಗಿನ ಮರಗಳಿಗೆ ಗೊಬ್ಬರ ಮಾಡಿಸಿದ್ದೆ. ಬೀದಿ ನಾಯಿಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ, ಅವುಗಳಿಗಾಗಿ ಚಿರತೆಗಳು ಈಗ ನಗರ ಪ್ರದೇಶಗಳಲ್ಲಿ ಆಗಾಗ್ಗೆ ಬರುತ್ತಿವೆ. ಜನರು ಬೀದಿ ನಾಯಿಗಳಿಂದ ಮಾತ್ರವಲ್ಲದೆ ಚಿರತೆಗಳಿಂದಲೂ ಬೆದರಿಕೆಯನ್ನು ಎದುರಿಸುತ್ತಿದ್ದಾರೆ. ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿಯೂ ಈ ಕಾಟ ವ್ಯಾಪಕವಾಗಿದೆ.

ಬೀದಿ ನಾಯಿಗಳ ದಾಳಿ ಸಮಸ್ಯೆ ಗಂಭೀರವಾಗಿದ್ದು, ಸರ್ಕಾರವು ಈ ಬಗ್ಗೆ ಕಾನೂನು ಸಲಹೆ ಪಡೆದು ಸುಪ್ರೀಂಕೋರ್ಟ್​ನಲ್ಲಿ ಪ್ರಶ್ನಿಸುವಂತೆ ಸಲಹೆ ನೀಡಿದರು. ಇದೇ ವೇಳೆ ಇತರ ಸದಸ್ಯರು ಬೀದಿ ನಾಯಿಗಳನ್ನು ಆಶ್ರಯ ತಾಣಗಳಿಗೆ ಕಳುಹಿಸಬೇಕು ಮತ್ತು ಪ್ರಾಣಿ ಪ್ರಿಯರು ಅವುಗಳನ್ನು ದತ್ತು ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಇದಕ್ಕೆ ಉತ್ತರಿಸಿದ ಪುರಸಭೆ ಆಡಳಿತ ಸಚಿವ ರಹೀಮ್ ಖಾನ್ ಅವರು, ಪ್ರಾಣಿ ಜನನ ನಿಯಂತ್ರಣ ಕಾರ್ಯಕ್ರಮದಡಿ ಲಸಿಕೆ ಶಿಬಿರಗಳನ್ನು ಪೀಡಿತ ಪ್ರದೇಶಗಳಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದರು.

ಶೀಘ್ರದಲ್ಲೇ ಚಿಕ್ಕಮಗಳೂರಿನಲ್ಲಿ ಇಂತಹ ಶಿಬಿರಗಳನ್ನು ನಡೆಸಲಾಗುವುದು ಮತ್ತು ನಗರದಿಂದ ಬೀದಿ ನಾಯಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT