ರಾಹುಲ್ ಗಾಂಧಿ 
ರಾಜ್ಯ

ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸುವ ಹಕ್ಕು ರಾಹುಲ್ ಗಾಂಧಿಗಿದೆ: ಚುನಾವಣಾ ಆಯೋಗಕ್ಕೆ KPCC

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದರು.

ಬೆಂಗಳೂರು: ಚುನಾವಣಾ ಪ್ರಕ್ರಿಯೆಯನ್ನು ಪ್ರಶ್ನಿಸುವ ಹಕ್ಕು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗಿದ್ದು, ಅಕ್ರಮ ಆರೋಪಗಳಿಗೆ ಭಾರತೀಯ ಚುನಾವಣಾ ಆಯೋಗ ಉತ್ತರ ನೀಡಬೇಕೆಂದು ಕೆಪಿಸಿಸಿ ಮಾಧ್ಯಮ ಘಟಕ ಅಧ್ಯಕ್ಷ ಹಾಗೂ ವಕೀಲ ರಮೇಶ್ ಬಾಬು ಅವರು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯ ಚುನಾವಣಾ ಆಯುಕ್ತರಿಗೆ ರಮೇಶ್ ಬಾಬು ಅವರು ಮಂಗಳವಾರ ಪತ್ರ ಬರೆದಿದ್ದು, ರಾಹುಲ್ ಗಾಂಧಿ ವಿರುದ್ಧ ನೀಡಲಾಗಿರುವ ಹೇಳಿಕೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. ರಾಹುಲ್ ಗಾಂಧಿ ದಾಖಲೆ ಸಮೇತ ಚುನಾವಣಾ ಆಕ್ರಮಗಳನ್ನು, ಕರ್ತವ್ಯ ಲೋಪಗಳನ್ನು ದೇಶದ ಮುಂದೆ ಇಟ್ಟಿದ್ದಾರೆ. ಆರೋಪಗಳಿಗೆ ಉತ್ತರ ನೀಡಬೇಕೆಂದು ಒತ್ತಾಯಿಸಿದ್ದಾರೆ.

1950 ಮತ್ತು 1951 ರ ಜನ ಪ್ರಾತಿನಿಧ್ಯ ಕಾಯ್ದೆಗಳ ನಿಬಂಧನೆಗಳ ಜೊತೆಗೆ, ಸಂವಿಧಾನದ 324 ನೇ ವಿಧಿಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳನ್ನು ಖಚಿತಪಡಿಸಿಕೊಳ್ಳಲು, ನಿಖರವಾದ ಮತದಾರರ ಪಟ್ಟಿಯನ್ನು ನಿರ್ವಹಿಸಲು ಇಸಿಐಗೆ ಜವಾಬ್ದಾರಿ ನೀಡಿದೆ.

ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಖಾತರಿಪಡಿಸುವ ಸಂವಿಧಾನದ 19(1)(ಎ) ವಿಧಿಯನ್ನು ಉಲ್ಲೇಖಿಸಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ನಾಗರಿಕರು ಮತದಾರರ ಪಟ್ಟಿಯ ಸೂಕ್ತತೆ ಮತ್ತು ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆಯನ್ನು ಪ್ರಶ್ನಿಸುವ ಹಕ್ಕನ್ನು ಹೊಂದಿದ್ದಾರೆ. ಇಂತಹ ಕ್ರಮಗಳು ಪ್ರಜಾಪ್ರಭುತ್ವವನ್ನು ಬಲಪಡಿಸುತ್ತವೆ. ಹೀಗಾಗಿ ಚುನಾವಣಾ ಉತ್ತರಿಸಬೇಕು. ಉತ್ತರಿಸುವುದು ಬಿಟ್ಟು ಬೆದರಿಕೆ ಹಾಕಿದರು, ಅದು ಸಂವಿಧಾನದ ಸ್ಫೂರ್ತಿಗೆ ವಿರುದ್ಧವಾಗಿರುತ್ತದೆ ಎಂದು ಎಚ್ಚರಿಸಿದ್ದಾರೆ.

ದೇಶದ ಚುನಾವಣೆಗಳಲ್ಲಿ ಬಿಜೆಪಿಗೆ ಸಹಾಯ ಮಾಡಲು ಭಾರತೀಯ ಚುನಾವಣಾ ಆಯೋಗ ಮತಗಳ್ಳನದಲ್ಲಿ ತೊಡಗಿದೆ ಎಂದು ಆಯೋಗದ ವಿರುದ್ದ ಆರೋಪಕ್ಕೆ ಆಗಸ್ಟ್ 7ರಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಿಪಿಟಿ ಮೂಲಕ ತಮ್ಮ ಆರೋಪಕ್ಕೆ ರಾಹುಲ್ ಗಾಂಧಿ ಪೂರಕವಾದ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅಕ್ರಮ ನಡೆದಿದ್ದು, ಬೆಂಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಭಾರಿ ಮತಗಳ್ಳನ ನಡೆದಿದೆ. ನಮ್ಮ ಸಂಶೋಧನೆ ಪ್ರಕಾರ 6 ರೀತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು.

ಡುಪ್ಲಿಕೇಟ್ ಮತದಾರರು, ಒಬ್ಬನೇ ಮತದಾರರ ಹಲವು ರಾಜ್ಯಗಳಲ್ಲಿ ಮತ ಚಲಾಯಿಸುವುದು, ನಕಲಿ ಮನೆ ವಿಳಾಸಗಳು, ಒಂದೇ ಮನೆಯಲ್ಲಿ 80, 150 ಮತದಾರರು, ಮತದಾರರ ಪಟ್ಟಿಯಲ್ಲಿ ಮತದಾರರ ಫೋಟೋ ಇಲ್ಲದಿರುವುದು, ಫಾರ್ಮ್ 6ರ ದುರುಪಯೋಗವನ್ನು ಬಿಡುಗಡೆ ಮಾಡಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ 16 ಸ್ಥಾನ ಹಾಗೂ ಕಾಂಗ್ರೆಸ್ 9 ಸ್ಥಾನಗಳನ್ನು ಗೆದ್ದಿದೆ. ಹೀಗಾಗಿ ಕಡಿಮೆ ಅಂತರದಲ್ಲಿ ಸೋತ ಏಳು ಕ್ಷೇತ್ರಗಳ ಪೈಕಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ತನಿಖೆ ನಡೆಸಿದೆವು. ಈ ವೇಳೆ ಕಾಂಗ್ರೆಸ್ 1,15,586 ಮತಗಳನ್ನು ಪಡೆದರೆ, ಬಿಜೆಪಿ 2,29,632 ಮತಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್‌ಗಿಂತ ಬಿಜೆಪಿ 1,14,046 ಮತಗಳ ಬಹುಮತ ಪಡೆದುಕೊಂಡಿದೆ.

ಈ ಮತಗಳಲ್ಲಿ 11,965 ನಕಲಿ ಮತದಾರರು, 40,009 ನಕಲಿ ವಿಳಾಸದ ಮತಗಳು, ಒಂದೇ ವಿಳಾಸದಲ್ಲಿ ಹತ್ತಾರು ಮತಗಳಿರುವಂತಹ 10,452 ಮತಗಳು, ಫೋಟೋ ಇಲ್ಲದಿರುವ 4,132 ಹಾಗೂ ಫಾರಂ 6 ದುರ್ಬಳಕೆಯಾದ 33,692 ಮತಗಳಿವೆ ಎಂದು ಸ್ಫೋಟಕ ಆರೋಪ ಮಾಡಿದ್ದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಮಹದೇವಪುರ ವಿಧಾನಸಭಾ ಕ್ಷೇತ್ರವೊಂದರಲ್ಲೇ 6.5 ಲಕ್ಷ ಒಟ್ಟು ಮತಗಳ ಪೈಕಿ 1,00,250 ನಕಲಿ ಮತ ಚಲಾವಣೆಯಾಗಿದೆ ಎಂದು ದಾಖಲೆ ಬಿಡುಗಡೆ ಮಾಡಿದ್ದರು.

ರಾಹುಲ್ ಗಾಂಧಿಯವರ ಆರೋಪಗಳಿಗೆ ಅಂದೇ ಪ್ರತಿಕ್ರಿಯಿಸಿದ್ದ ಚುನಾವಣಾ ಆಯೋಗ, ರಾಹುಲ್ ಗಾಂಧಿ ತಮ್ಮ ಆರೋಪದ ದಾಖಲೆಗಳಿಗೆ ಸಂಬಂಧಿಸಿದಂತೆ ಘೋಷಣಾ ಪತ್ರಕ್ಕೆ ಸಹಿ ಹಾಕಿ, ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT