ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ 10 ಮಂದಿ ಬಾಂಗ್ಲಾ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ತಮ್ಮೊಂದಿಗೆ ಇನ್ನೂ ಎಂಟು ಮಂದಿ ಇರುವುದಾಗಿ ಬಾಯ್ಬಿಟ್ಟಿದ್ದಾರೆ. ನಂತರ ಪೊಲೀಸರು ಮೂವರು ಮಕ್ಕಳು, ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 10 ಜನ ಬಾಂಗ್ಲಾ ಪ್ರಜೆಗಳನ್ನು ಬಂಧಿಸಲಾಗಿದೆ. ಹತ್ತು ಬಾಂಗ್ಲಾ ಪ್ರಜೆಗಳು ಬಾಂಗ್ಲಾದ ಕುಲ್ನಾ ರಾಜ್ಯದ ಬಾಗೇರ್ ಹಠ್ ಜಿಲ್ಲೆಯ ತಪಲ್ಬರಿ ಗ್ರಾಮದವರು ಎಂದು ತಿಳಿದುಬಂದಿದೆ.