ಬಿಎಂಟಿಸಿ ಬಸ್ 
ರಾಜ್ಯ

BMTC ಬಸ್‌ ಡಿಕ್ಕಿ; ಖಾಸಗಿ ಕಂಪನಿ ಉದ್ಯೋಗಿ ಸಾವು!

ಮಧ್ಯಾಹ್ನ 2.10 ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಜಂಕನ್ ಕಡೆಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು.

ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಖಾಸಗಿ ಕಂಪನಿ ಉದ್ಯೋಗಿಯೊಬ್ಬರು ಮೃತಪಟ್ಟಿರುವ ಘಟನೆ ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸೂರು ಮುಖ್ಯ ರಸ್ತೆಯ ರೂಪೇನ ಅಗ್ರಹಾರ ಬಸ್ ನಿಲ್ದಾಣದ ಬಳಿ ಬುಧವಾರ ನಡೆದಿದೆ.

ಕೇರಳ ಮೂಲದ ಬೊಮ್ಮನಹಳ್ಳಿ ಸಮೀಪದ ಸುಭಾಷ್ ನಗರದ ನಿವಾಸಿ ಸೈಯದ್ ಜಾಫರ್ ಹುಸೇನ್ (33) ಮೃತ ದುರ್ದೈವಿ. ಈ ಘಟನೆ ಸಂಬಂಧ ಬಿಎಂಟಿಸಿ ಬಸ್ ಚಾಲಕ ಪರಶುರಾಮ್ ಅವರನ್ನು ಮಡಿವಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೊಸೂರು ರಸ್ತೆಯ ರೂಪೇನಾ ಅಗ್ರಹಾರ ಬಳಿ ಸೈಯದ್ ಜಾಫರ್ ಹುಸೇನ್ ತೆರಳುವಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿ ಗಳು ಹೇಳಿದ್ದಾರೆ.

ಮಧ್ಯಾಹ್ನ 2.10 ರ ಸುಮಾರಿಗೆ ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಜಂಕನ್ ಕಡೆಗೆ ಬಿಎಂಟಿಸಿ ಬಸ್ ತೆರಳುತ್ತಿತ್ತು. ಆ ವೇಳೆ ಮಾರ್ಗ ಮಧ್ಯೆ ರೂಪೇನಾ ಅಗ್ರಹಾರ ಬಳಿ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಬಸ್ ಡಿಕ್ಕಿಯಾಗಿದೆ. ಆಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಸವಾರನ ಮೇಲೆ ಬಸ್ ಚಕ್ರಗಳು ಹರಿದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್