ರಾಜ್ಯಪಾಲರ ಭೇಟಿಯಾದ ಬಿಜೆಪಿ ನಿಯೋಗ 
ರಾಜ್ಯ

Smart meter ಹಗರಣ: ರಾಜ್ಯಪಾಲರ ಭೇಟಿಯಾದ BJP; ಪ್ರಾಸಿಕ್ಯೂಷನ್‌ಗೆ ಅನುಮೋದನೆ ನೀಡುವಂತೆ ಮನವಿ

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ಜೊತೆ ಶಾಮೀಲಾಗಿ ಜಾರ್ಜ್ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಹಲವಾರು ಉಲ್ಲಂಘನೆಗಳನ್ನು ಮಾಡಿದ್ದಾರೆ.

ಬೆಂಗಳೂರು: ಸ್ಮಾಟ್ ಮೀಟರ್‌ ಟೆಂಡರ್ ಪ್ರಕ್ರಿ ಯೆಯಲ್ಲಿ ಅಕ್ರಮ ಎಸಗಿದ ಆರೋಪದಡಿ ಇಂಧನ ಸಚಿವ ಕೆ.ಜೆ.ಜಾರ್ಜ್‌ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿ ಪ್ರಾಸಿಕ್ಯೂಷನ್‌ಗೆ ಅನುಮೋದಿಸುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ ಮಾಡಿದೆ.

ಬುಧವಾರ ವಿಧಾನಸಭೆ ವಿಪಕ್ಷದ ನಾಯಕ ಅವರ ಆರ್.ಅಶೋಕ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಾಜಭವನಕ್ಕೆ ತೆರಳಿದ ಪಕ್ಷದ ಶಾಸಕರು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್ ಅವರಿಗೆ ಮನವಿಪತ್ರ ಸಲ್ಲಿಸಿದರು.

ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ಜೊತೆ ಶಾಮೀಲಾಗಿ ಜಾರ್ಜ್ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿ ಹಲವಾರು ಉಲ್ಲಂಘನೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದರು.

ಸ್ಮಾಟ್ ಮೀಟರ್‌ ಟೆಂಡರ್‌ ಪ್ರಕ್ರಿಯೆಯಲ್ಲಿ ಉದ್ದೇಶಪೂರ್ವಕವಾಗಿ ಅಕ್ರಮ ಎಸಗಿದ ಆರೋಪದಡಿ ಬೆಸ್ಕಾಂ ಅಧ್ಯಕ್ಷ ಕೆ.ಜೆ. ಜಾರ್ಜ್, ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಜತೆಗೆ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಗೌರವ್ ಗುಪ್ತಾ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್ ಅವರ ವಿರುದ್ಧವೂ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ.

ಇದೇ ವಿಚಾರ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದೇವೆ. ಪ್ರಕರಣ ಸಂಬಂಧ ವಿಚಾರಣೆ ಮಾಡಿದ ನ್ಯಾಯಾಲಯವು ಆರೋಪದ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿಗೆ ಸೂಚಿಸಿ ಆದೇಶಿಸಿದೆ ಎಂದು ತಿಳಿಸಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿದ ಸಚಿವ ಜಾರ್ಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಮಾಡಿದ ಹೈಕೋ‌, ವಿಶೇಷ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿ ಮುಂದಿನ ವಿಚಾರಣೆಯನ್ನು ಆ,20ಕ್ಕೆ ಮುಂದೂಡಿದೆ. ಹೀಗಾಗಿ ಹೈಕೋರ್ಟ್‌ನ ಮುಂದಿನ ವಿಚಾರಣೆಗೂ ಮುನ್ನ ತಾವು ನಮ್ಮ ಮನವಿ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT