ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯದಲ್ಲಿ ಮೊಟ್ಟೆ ವಿವಾದ: ವರ್ಗಾವಣೆ ಪತ್ರ ಪಡೆದು ಬೇರೆ ಶಾಲೆಗಳಿಗೆ ಮಕ್ಕಳನ್ನು ಸೇರಿಸಿದ ಗ್ರಾಮಸ್ಥರು!

ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು.

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೊಟ್ಟೆ ಕೊಡುವುದನ್ನು ವಿರೋಧಿಸಿದ ಪೋಷಕರು, 84 ಮಕ್ಕಳ ವರ್ಗಾವಣೆ ಪತ್ರ ಪಡೆದಿದ್ದು, ಅಕ್ಕಪಕ್ಕದ ಕೀಲಾರ, ಹನಕೆರೆ, ಬೆಸಗರಹಳ್ಳಿ ಸರ್ಕಾರಿ ಶಾಲೆಗೆ ದಾಖಲಿಸಿದ್ದಾರೆ.

ಎಲ್‌ಕೆಜಿ, ಯುಕೆಜಿ ಸೇರಿ 144 ಮಕ್ಕಳಿರುವ ಶಾಲೆಯ ಬಳಿ ಇತಿಹಾಸ ಪ್ರಸಿದ್ಧ ವೀರಭದ್ರೇಶ್ವರಸ್ವಾಮಿ ದೇವಾಲಯವಿದೆ ಎಂಬ ಕಾರಣಕ್ಕೆ ಮೊಟ್ಟೆ ಬದಲು ಬಾಳೆಹಣ್ಣು ನೀಡಲಾಗುತ್ತಿತ್ತು. ಮಕ್ಕಳಿಗೆ ಮೊಟ್ಟೆ ನೀಡಬೇಕು ಎಂಬ ಕೆಲ ಪೋಷಕರ ಮಾತಿಗೆ ಇತರೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಅವರನ್ನು ಮನವೊಲಿಸುವ ಅಧಿಕಾರಿಗಳ ಪ್ರಯತ್ನ ಫಲ ನೀಡಿಲ್ಲ.

ಮೊಟ್ಟೆ ತಿನ್ನುವುದನ್ನು ನಾವು ವಿರೋಧಿಸುವುದಿಲ್ಲ. ದೇವಾಲಯ ಇರುವುದರಿಂದ ಕೊಡಬಾರದು, ಮನೆಗೇ ಕೊಟ್ಟು ಕಳುಹಿಸಲಿ ಎಂದಿದ್ದೆವು. ಬೇಯಿಸಿ ಕೊಡಬೇಕು ಎಂದು ಕೆಲವರು ಪಟ್ಟುಹಿಡಿದಿದ್ದರು.

ಆಚಾರ ವಿಚಾರಕ್ಕೆ ಅಡೆತಡೆ ಆಗುತ್ತದೆಂದು ನಮ್ಮ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸಿದೆವು, ಬ್ಲಾಕ್ ಶಿಕ್ಷಣ ಅಧಿಕಾರಿ ಕೆ ಟಿ ಸೌಭಾಗ್ಯ ಪೋಷಕರ ಮನವೊಲಿಸಲು ಪ್ರಯತ್ನಿಸಿದರು, ಆದರೆ ವ್ಯರ್ಥವಾಯಿತು. ಎಂದು ಎಸ್‌ಡಿಎಂಸಿ ಸದಸ್ಯ ಚಂದ್ರು ಆಲಕೆರೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!