ಪರಪ್ಪನ ಅಗ್ರಹಾರ ಜೈಲಿಗೆ ನಟ ದರ್ಶನ್ (ಸಂಗ್ರಹ ಚಿತ್ರ) 
ರಾಜ್ಯ

Renukaswamy Murder case: ನಟ ದರ್ಶನ್, ಪವಿತ್ರಾ ಗೌಡ ಸೇರಿ ಐವರು ಪರಪ್ಪನ ಆಗ್ರಹಾರ ಜೈಲಿಗೆ ಶಿಫ್ಟ್!

ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆ ಆರೋಪಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರನ್ನು ಇಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಬೆಂಗಳೂರು: ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ 5 ಆರೋಪಿಗಳನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆ ಆರೋಪಿ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐವರನ್ನು ಇಂದು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಐವರು ಆರೋಪಿಗಳನ್ನು ಕೋರಮಂಗಲ ನ್ಯಾಯಾಧೀಶರ ನಿವಾಸಕ್ಕೆ ಕರೆದುಕೊಂಡು ಬರಲಾಗಿತ್ತು. ಸಿಸಿಹೆಚ್ 64ರ ಜಡ್ಜ್ ಈರಪ್ಪಣ್ಣ ಪವಡಿ ನಾಯ್ಕ್ ಆದೇಶದಂತೆ ಐವರು ಆರೋಪಿಗಳನ್ನು ಪೊಲೀಸರು, ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ದಿದ್ದಾರೆ.

ಈ ವೇಳೆ ಎಲ್ಲಾ ಆರೋಪಿಗಳನ್ನೂ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿ ಆದೇಶಿಸಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ಇಲ್ಲಿಂದ ಎಲ್ಲಾ ಆರೋಪಿಗಳನ್ನು ಪರಪ್ಪನ ಅಗ್ರಹಾರದಲ್ಲಿರುವ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗುತ್ತದೆ.

ಈ ಹಿಂದೆಯೂ ದರ್ಶನ್ ಇದೇ ಜೈಲಿನಲ್ಲಿ ಕೆಲ ದಿನಗಳಿದ್ದು, ಐಷಾರಾಮಿ ಜೀವನದ ಫೋಟೋ ವೈರಲ್ ಬೆನ್ನಲ್ಲೇ ಬಳ್ಳಾರಿಗೆ ಶಿಫ್ಟ್ ಮಾಡಲಾಗಿತ್ತು. ಇದೀಗ ಮತ್ತೆ ನಟ ದರ್ಶನ್ ಪರಪ್ಪನ ಅಗ್ರಹಾರ ಸೇರಲಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್​

ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ A1 ಪವಿತ್ರಾಗೌಡ, A2 ದರ್ಶನ್, A11 ನಾಗರಾಜು, A12 ಲಕ್ಷ್ಮಣ, A14 ಪ್ರದೋಶ್ ನನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಿದ್ದು, ಕಾರಾಗೃಹದ ಕ್ವಾರಂಟೈನ್ ಜೈಲಿಗೆ ಹಾಕಿದ್ದಾರೆ.

ಇನ್ನು ಪವಿತ್ರ ಗೌಡ ಮಾತ್ರ ಪ್ರಮುಖ ಜೈಲಿನ ಮಹಿಳಾ ಬ್ಯಾರಕ್ ಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜೈಲು ವೈದ್ಯರಿಂದ ಆರೋಗ್ಯ ತಪಾಸಣೆ ಬಳಿಕ ಆರೋಪಿಗಳಿಗೆ ಕೈದಿ ನಂಬರ್ ನೀಡಲಾಗುತ್ತದೆ.

ಮಧ್ಯಂತರ ಜಾಮೀನು ಪಡೆದಾಗ ದರ್ಶನ್ ಬಳ್ಳಾರಿ ಜೈಲಿನಲ್ಲಿದ್ದರು. ಬೆಂಗಳೂರು ಜೈಲಿನಲ್ಲಿ ರಾಜಾತಿಥ್ಯ ಸ್ವೀಕರಿಸಿದ ಕಾರಣ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

2026 T20 World Cup: ಅರ್ಹತೆ ಪಡೆದ ನಮೀಬಿಯಾ, ಜಿಂಬಾಬ್ವೆ!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

SCROLL FOR NEXT