ಡಾ. ಜಿ. ಪರಮೇಶ್ವರ್ 
ರಾಜ್ಯ

ಈ ವರ್ಷ ಕರ್ನಾಟಕದಲ್ಲಿ 2,544 ಪೋಕ್ಸೋ ಪ್ರಕರಣ ದಾಖಲು: ಡಾ. ಜಿ ಪರಮೇಶ್ವರ್ ಮಾಹಿತಿ

ಅಧಿಕೃತ ಮಾಹಿತಿಯ ಪ್ರಕಾರ, ಏಪ್ರಿಲ್, ಮೇ ಮತ್ತು ಜೂನ್ ಎಂಬ ಕೇವಲ ಮೂರು ತಿಂಗಳಲ್ಲಿ ಕರ್ನಾಟಕದಾದ್ಯಂತ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ 1,104 ಪ್ರಕರಣಗಳು ದಾಖಲಾಗಿವೆ.

ಉಡುಪಿ: ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ಅಪರಾಧಗಳನ್ನು ಎದುರಿಸುವಲ್ಲಿ ರಾಜ್ಯವು ಇನ್ನು ಹಲವು ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ. ಅಧಿಕೃತ ಮಾಹಿತಿಯ ಪ್ರಕಾರ, ಏಪ್ರಿಲ್, ಮೇ ಮತ್ತು ಜೂನ್ ಎಂಬ ಕೇವಲ ಮೂರು ತಿಂಗಳಲ್ಲಿ ಕರ್ನಾಟಕದಾದ್ಯಂತ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ 1,104 ಪ್ರಕರಣಗಳು ದಾಖಲಾಗಿವೆ.

ಅಧಿವೇಶನದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಈ ಮಾಹಿತಿ ನೀಡಿದ್ದಾರೆ. ಈ ವರ್ಷದ ಜನವರಿ ಮತ್ತು ಜುಲೈ ನಡುವೆ, ಒಟ್ಟು 2,544 ಪ್ರಕರಣಗಳು ದಾಖಲಾಗಿದ್ದು, 18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ಬಗ್ಗೆ ಕಳವಳ ವ್ಯಕ್ತ ಪಡಿಸಿದ್ದಾರೆ.

ಗೃಹ ಸಚಿವರು ನೀಡಿದ ವಿವರಗಳ ಪ್ರಕಾರ, ಈ ವರ್ಷದ ಜನವರಿ ಮತ್ತು ಜುಲೈ ನಡುವೆ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು ಪೋಕ್ಸೊ ಪ್ರಕರಣಗಳು ವರದಿಯಾಗಿವೆ, ಬೆಂಗಳೂರು- 319 ಪ್ರಕರಣಗಳು, ಶಿವಮೊಗ್ಗ (131), ತುಮಕೂರು (114), ಚಿಕ್ಕಬಳ್ಳಾಪುರ (113), ಬೆಳಗಾವಿ (100), ಚಿತ್ರದುರ್ಗ (100) ಮತ್ತು ಮೈಸೂರು (99). ಉಡುಪಿ ಜಿಲ್ಲೆಯಲ್ಲಿ ಇಂತಹ 30 ಪ್ರಕರಣಗಳು ದಾಖಲಾಗಿವೆ.

ಕರ್ನಾಟಕವು 2023 ರಲ್ಲಿ 3,902 ಮತ್ತು 2024 ರಲ್ಲಿ 4,064 ಪೋಕ್ಸೊ ಪ್ರಕರಣಗಳನ್ನು ದಾಖಲಿಸಿದೆ ಎಂದು ದತ್ತಾಂಶಗಳು ತೋರಿಸುತ್ತವೆ. ಈ ವರ್ಷದ ಜುಲೈ ವೇಳೆಗೆ, 2,544 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 1,927 ಪ್ರಕರಣಗಳಲ್ಲಿ ತೀರ್ಪು ನೀಡಲಾಗಿದೆ.

ಉಳಿದ 1,556 ಪ್ರಕರಣಗಳು ತನಿಖೆಯಲ್ಲಿವೆ. 2023 ರ, 3,902 ಪ್ರಕರಣಗಳಲ್ಲಿ 3,882 ಪ್ರಕರಣಗಳಲ್ಲಿ ತೀರ್ಪುಗಳನ್ನು ಪ್ರಕಟಿಸಲಾಗಿದ್ದು, 126 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. 2024 ರಲ್ಲಿ, ನ್ಯಾಯಾಲಯಗಳು 4,064 ಪ್ರಕರಣಗಳಲ್ಲಿ 4,026 ಪ್ರಕರಣಗಳಲ್ಲಿ ತೀರ್ಪು ನೀಡಿದ್ದು, 36 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ.

ಪೋಕ್ಸೊ ಪ್ರಕರಣಗಳಲ್ಲಿನ ಹೆಚ್ಚಳವು ಈ ವಿಷಯದ ಬಗ್ಗೆ ಹೆಚ್ಚಿನ ತಿಳುವಳಿಕೆ ಮತ್ತು ಅರಿವು ನೀಡುತ್ತಿರುವುದರಿಂದ ಸಂತ್ರಸ್ತರು ಪೊಲೀಸರಿಗೆ ದೂರು ನೀಡುತ್ತಿದ್ದಾರೆ. "ಬಾಲಾಪರಾಧಿ ನ್ಯಾಯ ವ್ಯವಸ್ಥೆ ಮತ್ತು ಪೊಲೀಸರು ಸಂತ್ರಸ್ತರು ಪ್ರಕರಣಗಳನ್ನು ದಾಖಲಿಸಲು ಸಕ್ರಿಯವಾಗಿ ಬೆಂಬಲ ನೀಡುತ್ತಿರುವುದು ಇದಕ್ಕೆ ಕಾರಣ ಎಂದು ಮಕ್ಕಳ ಹಕ್ಕುಗಳ ಟ್ರಸ್ಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಡಾ. ವಾಸುದೇವ ಶರ್ಮಾ ಎನ್.ವಿ ತಿಳಿಸಿದ್ದಾರೆ.

ಅಂಕಿಅಂಶಗಳು ಸೂಚಿಸುವಂತೆ ಅಸ್ತಿತ್ವದಲ್ಲಿರುವ ಕಾನೂನುಗಳಿಂದ ಅಪರಾಧಿಗಳಿಗೆ ಹೆಚ್ಚಿನ ಶಿಕ್ಷೆ ಆಗುತ್ತಿಲ್ಲ. ಕೆಲವು ಪ್ರಕರಣಗಳು ನ್ಯಾಯಾಲಯಗಳಲ್ಲಿ ವರ್ಷಗಳ ಕಾಲ ವಿಳಂಬವಾಗುತ್ತವೆ. ಇಂತಹ ವಿಳಂಬಗಳು ಸಂತ್ರಸ್ತರು ಮತ್ತು ಅವರ ಕುಟುಂಬಗಳ ನೈತಿಕತೆಯನ್ನು ಕುಗ್ಗಿಸುತ್ತವೆ. ವಿಚಾರಣೆಗಳನ್ನು ತ್ವರಿತಗೊಳಿಸುವ ಅವಶ್ಯಕತೆಯಿದೆ ಮತ್ತು ಸಾರ್ವಜನಿಕ ಅಭಿಯೋಜಕರು ಕಾಯ್ದೆಯ ಪ್ರಕಾರ ಒಂದು ವರ್ಷದೊಳಗೆ ಪ್ರಕರಣಗಳನ್ನು ವಿಲೇವಾರಿ ಮಾಡಲು ಒತ್ತಾಯಿಸಬೇಕು, ”ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT