ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಕಾಲೇಜು ವಿದ್ಯಾರ್ಥಿನಿ ತಡೆದು ನೈತಿಕ ಪೊಲೀಸ್ ಗಿರಿ; ಆರು ಮಂದಿ ಬಂಧನ

ಯುವತಿ ಹಾಗೂ ಯುವಕ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾತನಾಡುತ್ತ ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಏಳೆಂಟು ಮಂದಿಯ ತಂಡ ತಡೆದು ಜೀವ ಬೆದರಿಕೆಯೊಡ್ಡಿದ್ದಾರೆ.

ಮಂಗಳೂರು: ಯುವತಿಯೊಂದಿಗೆ ಮಾತನಾಡುತ್ತಿದ್ದ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಪಾಂಡೇಶ್ವರ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಗಣೇಶ್, ಶ್ರೇಯಸ್, ಚಿಂಟು, ಚಂದನ್, ನಾಗರಾಜ್ ಮತ್ತು ರಾಮಚಂದ್ರ ಬಂಧಿತ ಆರೋಪಿಗಳು. ಯುವತಿ ಹಾಗೂ ಯುವಕ ಮಂಗಳೂರಿನ ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾತನಾಡುತ್ತ ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಏಳೆಂಟು ಮಂದಿಯ ತಂಡ ತಡೆದು ಜೀವ ಬೆದರಿಕೆಯೊಡ್ಡಿದ್ದಾರೆ. ಈ ಬಗ್ಗೆ ಯುವತಿ ಪೊಲೀಸ್ ದೂರು ನೀಡಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್​ಪಿ ಮಾಹಿತಿ ನೀಡಿದ್ದಾರೆ.

ನಗರದ ಪದವಿ ಪೂರ್ವ ಕಾಲೇಜೊಂದರ ವಿದ್ಯಾರ್ಥಿನಿಯಾದ ಯುವತಿ ಕಾಲೇಜು ಮುಗಿಸಿ ತನ್ನ ಗೆಳತಿಯೊಂದಿಗೆ ಸರ್ವೀಸ್ ಬಸ್ ನಿಲ್ದಾಣಕ್ಕೆ ಬಂದಿದ್ದಳು. ಬಳಿಕ ಗೆಳತಿ ಅಲ್ಲಿಂದ ಬಸ್‌ನಲ್ಲಿ ತನ್ನ ಮನೆಗೆ ತೆರಳಿದ್ದಳು. ಬಳಿಕ ವಿದ್ಯಾರ್ಥಿನಿಯು 3.30ರ ಸುಮಾರಿಗೆ ಅಲ್ಲಿಗೆ ಬಂದ ತನ್ನ ಸ್ನೇಹಿತೆಯ ಸಂಬಂಧಿಯಾದ ಬೇರೆ ಸಮುದಾಯದ ಯುವಕನೊಂದಿಗೆ ಮಾತನಾಡಿಕೊಂಡು ಹೋಗುತ್ತಿದ್ದಳು.

ಈ ವೇಳೆ ಸುಮಾರು 7ರಿಂದ 8 ಮಂದಿ ಅಪರಿಚಿತರು ಅಡ್ಡಗಟ್ಟಿ, ಜೊತೆಗಿದ್ದ ಯುವಕನನ್ನು ತಡೆದಿದ್ದಾರೆ. ಅಲ್ಲದೆ "ಯುವಕನ ಜೊತೆ ಯಾಕೆ ಹೋಗುತ್ತಿದ್ದಿಯಾ?, ಏನು ಮಾತನಾಡುತ್ತಿದ್ದಿಯಾ?" ಎಂಬುದಾಗಿ ಅವಾಚ್ಯ ಶಬ್ದಗಳಿಂದ ಬೈದಿದ್ದರು. ಪೊಲೀಸ್ ಗಸ್ತು ವಾಹನ ಶೀಘ್ರದಲ್ಲೇ ಬಂದಿತು, ವಿದ್ಯಾರ್ಥಿನಿ ಘಟನೆಯ ಬಗ್ಗೆ ಅವರಿಗೆ ಮಾಹಿತಿ ನೀಡಿದರು. ನಂತರ ವಿದ್ಯಾರ್ಥಿನಿ ಮನೆಗೆ ಹೋಗಿ, ತನ್ನ ಕುಟುಂಬಕ್ಕೆ ತಿಳಿಸಿದಳು, ಅದಾದ ನಂತರ ತನ್ನ ಪೋಷಕರ ಬೆಂಬಲದೊಂದಿಗೆ ದೂರು ದಾಖಲಿಸಿದಳು, ಪೊಲೀಸರು ಆರು ಶಂಕಿತರನ್ನು ಬಂಧಿಸಿದ್ದಾರೆ, ಇತರರನ್ನು ಪತ್ತೆಹಚ್ಚುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

SCROLL FOR NEXT