ಸಂಚಾರಿ ಪೊಲೀಸರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ ಹಿಂದಿ ಮಹಿಳೆ 
ರಾಜ್ಯ

ಬಟ್ಟೆ ಬಿಚ್ಚಿಸಿ ಬೆತ್ತಲೆ ಓಡಿಸ್ತೀನಿ..: Traffic Police ಗೆ 'ಕೈ' ಸನ್ನೆ ಮಾಡಿ ಹಿಂದಿ ಮಹಿಳೆಯಿಂದ ಅಶ್ಲೀಲ ನಿಂದನೆ; Video!

ಈ ಬಾರಿ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಸಾರ್ವಜನಿಕವಾಗಿಯೇ ಮಹಿಳಾ ಸಂಚಾರಿ ಪೊಲೀಸ್ ಅಧಿಕಾರಿ ಹಾಗೂ ಸಂಚಾರಿ ಪುರುಷ ಪೊಲೀಸ್ ಗೆ ಅಶ್ಲೀಲ ಪದಗಳನ್ನು ಬಳಕೆ ಮಾಡಿದ್ದಾಳೆ.

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಹಿಂದಿವಾಲಾಗಳ ಹಾವಳಿ ಹೆಚ್ಚಾಗುತ್ತಿದೆ. ಇದಕ್ಕೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಈ ಬಾರಿ ಹಿಂದಿ ಮಾತನಾಡುವ ಮಹಿಳೆಯೊಬ್ಬಳು ಸಾರ್ವಜನಿಕವಾಗಿಯೇ ಮಹಿಳಾ ಸಂಚಾರಿ ಪೊಲೀಸ್ ಅಧಿಕಾರಿ ಹಾಗೂ ಸಂಚಾರಿ ಪುರುಷ ಪೊಲೀಸ್ ಗೆ ಅಶ್ಲೀಲ ಪದಗಳನ್ನು ಬಳಕೆ ಮಾಡಿದ್ದಾಳೆ. ರಸ್ತೆಯಲ್ಲಿ ಬೈಕ್ ನಿಲ್ಲಿಸಲಾಗಿತ್ತು. ಹೀಗಾಗಿ ಸಂಚಾರಿ ಪೊಲೀಸರು ಬೈಕ್ ಗೆ ವೀಲ್ ಕ್ಯಾಪ್ ಆಗಿದ್ದರು.

ಇದನ್ನು ಪ್ರಶ್ನಿಸಿ ಸಂಚಾರಿ ಪೊಲೀಸರ ವಿರುದ್ಧವೇ ಮಹಿಳೆ ಆಕ್ರೋಶ ವ್ಯಕ್ತಪಡಿಸಿದ್ದಾಳೆ. ಇನ್ನು ಅಶ್ಲೀಲವಾಗಿ ಮಾತನಾಡುತ್ತಿದ್ದ ಮಹಿಳೆ ಜೊತೆಗೆ ಕೆಲಸ ಮಾಡುತ್ತಿದ್ದ ಬೈಕ್ ಸವಾರನಿಗೆ ನೀವು ಈ ರೀತಿ ವರ್ತಿಸಿದರೆ ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಪುರುಷರ ಪೊಲೀಸ್ ಅಧಿಕಾರಿ ಹೇಳುತ್ತಾರೆ.

ಆಗ ಮತ್ತೆ ಮಧ್ಯಪ್ರವೇಶಿಸಿದ ಮಹಿಳೆ ನಿನಗೆ ತಾಕತ್ತು ಇದ್ದರೆ ಅವನನ್ನು ಬಂಧಿಸು ಎಂದು ಪದೇ ಪದೇ ಅಶ್ಲೀಲ ಪದಗಳನ್ನು ಬಳಸಿದ್ದಾಳೆ.

ಆಗ ಪೊಲೀಸ್ ಅಧಿಕಾರಿ ನಿಮ್ಮ ಮಹಿಳೆಯಾಗಿದ್ದೀರಿ, ಅದಕ್ಕಾಗಿಯೇ ಮರ್ಯಾದೆಯಿಂದ ಮಾತನಾಡುತ್ತಿದ್ದೆವೆ. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೆ ಇರುತ್ತಿತ್ತು ಎಂದು ಹೇಳಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಗರಂ ಆಗಿದ್ದಾರೆ. ಈ ಕೂಡಲೇ ಮಹಿಳೆಯನ್ನು ಗಡಿಪಾರು ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

'RSS ನಲ್ಲಿ ಒಬ್ಬ ವ್ಯಕ್ತಿಯೂ ಇಲ್ಲ': ಪ್ರಧಾನಿ ಮೋದಿ ಹೇಳಿಕೆಗೆ ಓವೈಸಿ ತಿರುಗೇಟು!

ಅಂಬೇಡ್ಕರ್ ಸಿದ್ಧಾಂತದಂತೆ ಬದುಕಿದ್ದೇವೆ; RSS ಕಾರ್ಯಕ್ರಮಕ್ಕೆ ಹೋಗಲ್ಲ: CJI ಗವಾಯಿ ತಾಯಿ ಪತ್ರ

Madhya Pradesh: 'ದುರ್ಗಾದೇವಿ ಮೂರ್ತಿ' ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಉರುಳಿ 10 ಮಂದಿ ದಾರುಣ ಸಾವು! Video

Mysuru Dasara: ನಾಡದೇವಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ; ಜಂಬೂ ಸವಾರಿಗೆ ಸಿಎಂ ಚಾಲನೆ

SCROLL FOR NEXT