ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅದ್ಧೂರಿ ಆಚರಣೆಗಾಗಿ ಮಾಣೆಕ್ಷಾ ಪರೇಡ್ ಮೈದಾನವು ಸಂಪೂರ್ಣವಾಗಿ ಸಿದ್ಧಗೊಂಡಿದ್ದು, ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ.
ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಭದ್ರತೆಗಾಗಿ ಡಿಸಿಪಿ, ಎಸಿಪಿ, ಪೊಲೀಸ್ ಅಧಿ ಕಾರಿಗಳು, ಪಿಎಸ್‌ಐ, ಎಎಸ್‌ಐ, ಎಚ್ಚಿ, ಪಿಸಿ, ಮಹಿಳಾ ಪೊಲೀಸರು, ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಡಿಸಿಪಿ, ಎಸಿಪಿ, ಪೊಲೀಸ್ ಅಧಿಕಾರಿಗಳು, ಮಹಿಳಾ ಪಿಎಸ್‌ಐ, ಎಎಸ್‌ಐ, ಎಚ್, ಪಿಸಿ ಸೇರಿ ಒಟ್ಟು 2 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮೈದಾನ ಸುತ್ತ ಭದ್ರತೆ ಮತ್ತು ಸುರಕ್ಷತೆಗಾಗಿ ಹೆಚ್ಚುವರಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ, ಬ್ಯಾಗೇಜ್ ಸ್ಕ್ಯಾನರ್, ಕೆಎಸ್‌ಆರ್‌ಪಿ ಮತ್ತು ಸಿಆರ್‌ತುಕಡಿ, ಎರಡು ಅಗ್ನಿಶಾಮಕ ವಾಹನ, ಎರಡು ಆ್ಯಂಬುಲೆನ್ಸ್ ವಾಹನ, ಕ್ಷಿಪ್ರ ಕಾರ್ಯಾಚರಣೆ ಪಡೆ, ಬಾಂಬ್ ನಿಷ್ಕ್ರಿಯ ದಳ ತಂಡ ನಿಯೋಜಿಸಲಾಗಿದೆ.
ಸ್ವಾತಂತ್ರೋತ್ಸವ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಮೊಟ್ಟಮೊದಲ ಬಾರಿಗೆ ಇ-ಪಾಸ್ ವಿತರಣೆ ಮಾಡಲಾಗಿದ್ದು, ಒಟ್ಟು 3 ಸಾವಿರ ಇ-ಪಾಸ್ ವಿತರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಸ್ ಸಂಪೂರ್ಣವಾಗಿ ಉಚಿತವಾಗಿದ್ದು, ಪಾಸ್ ಪಡೆದವರು ಗೇಟ್ ಸಂಖ್ಯೆ 5 ರಲ್ಲಿ ಮೊಬೈಲ್ ಮೂಲಕ ತೋರಿಸಿ ಅಥವಾ ಇ-ಪಾಸ್ ಮುದ್ರಣವನ್ನು ಸಹ ಭದ್ರತಾ ಸಿಬ್ಬಂದಿಗೆ ತೋರಿಸಿ ಪ್ರವೇಶಿಸಬಹುದಾಗಿದೆ. ಒಂದು ಇ-ಪಾಸ್ ಒಬ್ಬರ ಪ್ರವೇಶಕ್ಕೆ ಮಾತ್ರ ಅವಕಾಶ ನೀಡಲಾಗಿದೆ.
ಇದೇ ವೇಳೆ ಮೈದಾನಕ್ಕೆ ಬರುವ ಸಾರ್ವಜನಿಕರಿಗೆ ಅಧಿಕಾರಿಗಳು ಕೆಲ ಸೂಚನೆಗಳನ್ನು ಅಧಿಕಾರಿಗಳು ನೀಡಿದ್ದಾರೆ.
ಆ.15ರಂದು ಶುಕ್ರವಾರ ಬೆಳಗ್ಗೆ 8.30ರ ಒಳಗಾಗಿ ತಮ್ಮ ಆಸನದಲ್ಲಿ ಆಸೀನರಾಗಬೇಕು
ಮಣಿಪಾಲ್ ಸೆಂಟರ್‌ಕಡೆಯಿಂದ ಕಬ್ಬನ್ ರಸ್ತೆಯಲ್ಲಿ ಆಗಮಿಸಿ ಗೇಟ್ 5ರ ಮೂಲಕ ಪ್ರವೇಶ
ಯಾವುದೇ ಲಗೇಜ್ ಹಾಗೂ ಇತರೆ ವಸ್ತುಗಳನ್ನು ಕಾರ್ಯಕ್ರಮಕ್ಕೆ ತರುವಂತಿಲ್ಲ ಮೊಬೈಲ್, ಹೆಮ್ಮೆಟ್, ಕ್ಯಾಮೆರಾ, ರೇಡಿಯೋ, ಕೊಡೆ ತರುವಂತಿಲ್ಲ.
ಬಿಎಂಟಿಸಿ ಹಾಗೂ ಮೆಟ್ರೋ ಸೇವೆ ಬಳಸಬೇಕು. ಕುಡಿಯುವ ನೀರಿನ ವ್ಯವಸ್ಥೆಯಿದೆ
ಸಹಾಯಕ್ಕೆ 112ಗೆ ಕರೆ ಮಾಡಿ ಅಥವಾ ಸ್ಥಳದಲ್ಲಿನ ಪೊಲೀಸರ ಸಂಪರ್ಕಿಸಬಹುದು.
ಸಿಗರೇಟ್, ಬೆಂಕಿ ಪಟ್ಟಿಗೆ, ಕರಪತ್ರಗಳು, ಚಾಕು-ಚೂರಿ, ಹರಿತವಾದ ವಸ್ತುಗಳು, ತ್ರಿವರ್ಣ ಧ್ವಜ ಹೊರತು ಪಡಿಸಿ ಇತರೆ ಬಾವುಟ, ತಿಂಡಿ, ತಿನಿಸು, ಮದ್ಯದ ಬಾಟಲಿ, ಮಾದಕ ವಸ್ತು, ಶಸ್ತ್ರಾಸ್ತ್ರಗಳು, ಪಟಾಕಿ, ಸ್ಫೋಟಕ ವಸ್ತುಗಳು, ಬಣ್ಣದ ದ್ರವ, ವಿಡಿಯೋ ಹಾಗೂ ಸ್ಟಿಲ್ ಕ್ಯಾಮರಾ, ನೀರಿನ ಬಾಟಲಿ ಹಾಗೂ ಕ್ಯಾನ್‌ಗಳ ತರುವುದಕ್ಕೆ ನಿಷೇಧ ಹೇರಲಾಗಿದೆ.
ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಸೆಂಟ್ರಲ್ ಸ್ಟ್ರೀಟ್- ಅನಿಲ್‌ಕುಂಬ್ಳೆ ವೃತ್ತದಿಂದ ಶಿವಾಜಿನಗರವರೆಗೆ, ಕಬ್ಬನ್ ರಸ್ತೆ-ಸಿಟಿಓ ವೃತ್ತದಿಂದ ಕೆಆ ರಸ್ತೆ, ಕಬ್ಬನ್ ರಸ್ತೆ ಜಂಕ್ಷನ್‌ವರೆಗೆ, ಎಂಜಿ ರಸ್ತೆ - ಅನಿಲ್‌ಕುಂಬ್ಳೆ ವೃತ್ತದಿಂದ ಕ್ವೆನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಕಬ್ಬನ್ ರಸ್ತೆ-ಬಿಆರ್‌ವಿ ಜಂಕ್ಷನ್ - ಕಾಮರಾಜ ರಸ್ತೆ ಜಂಕ್ಷನ್ ಎರಡೂ ಬದಿ, ಮಣಿಪಾಲ್ ಸೆಂಟರ್‌ಜಂಕ್ಷನ್‌ನಿಂದ ಬಿಆರ್ ಜಂಕ್ಷನ್ ಕಡೆ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.