ಹಾನಿಗೊಳಗಾಗಿರುವ ಮನೆಗಳು. 
ರಾಜ್ಯ

ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರಿ ಸ್ಫೋಟ; ಬಾಲಕ ಸಾವು, 7 ಮಂದಿ ಸ್ಥಿತಿ ಗಂಭೀರ

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮನೆಯೊಂದರಲ್ಲಿ ಎಲ್'ಪಿಜಿ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಭಾರೀ ಸ್ಫೋಟ ಸಂಭವಿಸಿದ್ದು, ಪರಿಣಾಮ ಬಾಲಕನೊರ್ವ ಸಾವನ್ನಪ್ಪಿ, 12 ಮಂದಿಗೆ ಗಾಯವಾಗಿರುವ ಘಟನೆ ವಿಲ್ಸನ್ ಗಾರ್ಡನ್​ನ ಚಿನ್ನಯ್ಯನಪಾಳ್ಯದಲ್ಲಿ ಶುಕ್ರವಾರ ನಡೆದಿದೆ.

ಮೃತ ಬಾಲಕನ್ನು ಮುಬಾರಕ್ (8) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಒಟ್ಟು 12 ಮಂದಿಗೆ ಗಾಯಗಳಾಗಿದ್ದು, 7 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ. 10 ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿರುವ ಆಡುಗೋಡಿ ಠಾಣೆ ಪೊಲೀಸರು ಸಿಲಿಂಡರ್ ಸ್ಟೋಟ ಸಂಭವಿಸಿರಬಹುದು ಎಂದು ಶಂಕಿಸಿದ್ದಾರೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್