ಸಿಎಂ ಸಿದ್ದರಾಮಯ್ಯ 
ರಾಜ್ಯ

79ನೇ ಸ್ವಾತಂತ್ರ್ಯ ದಿನಾಚರಣೆ: ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ

ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 79 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರು: ನಮ್ಮ ದೇಶಕ್ಕೆ ಸ್ವಾತಂತ್ರ ಬಂದು 79 ವರ್ಷ ತುಂಬಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಶಾ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಧ್ವಜಾರೋಹಣ ನೆರವೇರಿಸಿದರು.

79ನೇ ಸ್ವಾತಂತ್ರ್ಯೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ಜೀಪ್​ನಲ್ಲಿ ಪೆರೇಡ್ ವೀಕ್ಷಣೆ ಮತ್ತು ಗೌರವ ರಕ್ಷೆ ಸ್ವೀಕಾರ ಮಾಡಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ. ಈ ಸಮಾರಂಭದಲ್ಲಿ ರಾಜ್ಯ ಸಂಪುಟ ಸಚಿವರು, ರಾಜ್ಯದ ಶಾಸಕರು, ಅಧಿಕಾರಿಗಳು ಹಾಗೂ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಭಾಗವಹಿಸಿದ್ದಾರೆ.

ಕಾರ್ಯಕ್ರಮದಲ್ಲಿ 8 ಸಾವಿರ ಜನರು ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿತ್ತು. ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಮೆರಗು ಪಡೆದುಕೊಂಡವು. ಕೆಎಸ್‌ಆರ್‌ಪಿ, ಸಿಆರ್‌ಪಿಎಫ್, ಬಿಎಸ್ ಎಫ್, ಗೋವಾ ಪೊಲೀಸ್ ತಂಡ ಸೇರಿ ವಿವಿಧ ಇಲಾಖೆಯ 35 ತುಕಡಿಗಳಲ್ಲಿ 1,150 ಮಂದಿಯಿಂದ ಪಥ ಸಂಚಲನ ಹಾಗೂ ಸರ್ಕಾರಿ ಮತ್ತು ಬಿಬಿಎಂಪಿಯ 1,150 ವಿದ್ಯಾರ್ಥಿಗಳು ಹಾಗೂ ಕರ್ನಾಟಕ ಪೊಲೀಸ್ ಸಮೂಹ ವಾದ್ಯಮೇಳದ 253 ಅಧಿಕಾರಿ, ಸಿಬ್ಬಂದಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT