ಡಿ.ಕೆ ಶಿವಕುಮಾರ್ 
ರಾಜ್ಯ

'ಯಾವ ಅಧಿಕಾರಿ ಹಣ ಪಡೆದಿದ್ದಾನೆ ಹೇಳಿ, ಹೊತ್ತು ಮುಳುಗೊದರೊಳಗೆ Dismiss ಮಾಡ್ತೀನಿ: Denotification ಮಾಡಿ ಜೈಲಿಗೆ ಹೋಗಲು ನಾನು ಸಿದ್ಧವಿಲ್ಲ'

ಭೂಮಿ ಕಳೆದುಕೊಂಡ ರೈತನ ಕಷ್ಟ ಏನು ಎಂಬ ಅರಿವು ನಮಗಿದೆ. ಅವರಿಗೆ ಸಿಗುತ್ತಿರುವುದು 9,600 ಅಡಿಗಳು ಮಾತ್ರ. ಅಭಿವೃದ್ಧಿ ಆದ ನಂತರ ಆತನಿಗೆ ಸ್ವಲ್ಪ ಹಣ ಸಿಗಬಹುದು.

ಬೆಂಗಳೂರು: ಕೆಂಪೇಗೌಡ ಬಡಾವಣೆಯಲ್ಲಿ ಯಾವ ಅಧಿಕಾರಿ ಹಣ ಪಡೆದಿದ್ದಾನೆ ಹೇಳಿ, ಹೊತ್ತು ಮುಳುಗುವುದರಲ್ಲಿ ಅವರನ್ನು ಅಮಾನತು ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗುಡುಗಿದರು.

ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಟಿ.ಎನ್. ಜವರಾಯಿ ಗೌಡರು, ಕೆಂಪೇಗೌಡ ಬಡಾವಣೆ ವಿಚಾರವಾಗಿ ಪ್ರಶ್ನೆ ಕೇಳಿ, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಗುರುವಾರ ಹೇಳಿದರು. ಇದಕ್ಕೆ ಡಿಸಿಎಂ ಅವರು ಉತ್ತರಿಸಿದರು. ಹಿರಿಯ ನಾಯಕರಾದ ಜವರೇಗೌಡರು ಅನೇಕ ಆರೋಪ ಮಾಡಿದ್ದಾರೆ. ಇಂತಹ ಪ್ರಕರಣ ನಡೆಯುತ್ತಿದ್ದರೆ, ಯಾರು, ಯಾರಿಗೆ ಹಣ ನೀಡಿದ್ದಾರೆ ಎಂದು ರೈತರಿಂದ ದೂರು ಬರೆಸಿ ಕೊಡಿ. ಇಂದು ಸಂಜೆ ಸೂರ್ಯ ಮುಳುಗುವ ಹೊತ್ತಿಗೆ ಹಣ ಪಡೆದಿರುವ ಅಧಿಕಾರಿಯನ್ನು ಅಮಾನತು ಮಾಡುತ್ತೇನೆ. ಆಮೇಲೆ ತನಿಖೆ ನಡೆಸಲಾಗುವುದು.

ಭೂಮಿ ಕಳೆದುಕೊಂಡ ರೈತನ ಕಷ್ಟ ಏನು ಎಂಬ ಅರಿವು ನಮಗಿದೆ. ಅವರಿಗೆ ಸಿಗುತ್ತಿರುವುದು 9,600 ಅಡಿಗಳು ಮಾತ್ರ. ಅಭಿವೃದ್ಧಿ ಆದ ನಂತರ ಆತನಿಗೆ ಸ್ವಲ್ಪ ಹಣ ಸಿಗಬಹುದು. 2013 ರಲ್ಲಿ ಯುಪಿಎ ಸರ್ಕಾರ ತೆಗೆದುಕೊಂಡ ದಿಟ್ಟ ತೀರ್ಮಾನದ ನಂತರ ಎರಡು, ಮೂರು ಹಾಗೂ ನಾಲ್ಕು ಪಟ್ಟು ಹಣ ನೀಡುವ ತೀರ್ಮಾನವಾಗಿದೆ. ನಾವು 60:40 ಅನುಪಾತದಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ಯೋಜನೆ ಜಾರಿಗೆ ತಂದಿದ್ದೇವೆ” ಎಂದರು.

ಭೂಸ್ವಾಧೀನ ಪ್ರಕ್ರಿಯೆಯಿಂದ ಕೆಲವು ಭೂಮಿಯನ್ನು ಬಿಡಲಾಗಿದೆ ಎಂಬ ಅಂಶವನ್ನು ಮಾನ್ಯ ಸದಸ್ಯರು ಹೇಳಿದ್ದು, ಕಾನೂನು ಬಾಹಿರವಾಗಿ ಬಿಟ್ಟಿದ್ದರೆ ಅದನ್ನು ತನಿಖೆ ಮಾಡಲು ಸಿದ್ಧವಿದ್ದೇವೆ. ಅಧಿಸೂಚನೆ ಹೊರಡಿಸಿದ ನಂತರ ಮಾರ್ಗಸೂಚಿಯಂತೆ ಎಲ್ಲವನ್ನೂ ನಡೆಸಬೇಕು. ತಮಗೆ ಬೇಕಾದವರ ಜಮೀನು ಕೈಬಿಡಲು ಸಾಧ್ಯವಿಲ್ಲ. ಆ ಭಾಗದ ಜನಪ್ರತಿನಿಧಿಯಾಗಿ ನೀವು ನಮಗೆ ಪ್ರಸ್ತಾವನೆ ನೀಡಿ. ನಾನು ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ ” ಎಂದು ಭರವಸೆ ನೀಡಿದರು.

ಶಿವರಾಮ ಕಾರಂತ ಬಡವಾಣೆಯು ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ನಿರ್ಮಾಣವಾಗುತ್ತಿದ್ದು, ಈಗ ಒಂದು ಹಂತಕ್ಕೆ ಬಂದಿದೆ. ಸರ್ಕಾರ ಸುಮಾರು 7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ಇದುವರೆಗೂ ಒಬ್ಬ ರೈತನಿಗೂ ಅಲ್ಲಿ ನಿವೇಶನ ನೀಡಲು ಆಗಿಲ್ಲ. ಈ ವಿಚಾರ ಹೇಳಲು ನನಗೆ ನೋವಾಗುತ್ತದೆ. ನಾನು ಬಂದ ನಂತರ ಅರ್ಜಿ ಹಾಕಲು ಅವಕಾಶ ನೀಡಿದೆ. ಆದರೆ ಹೈಕೋರ್ಟ್ ಅರ್ಜಿ ಸ್ವೀಕಾರದಲ್ಲೂ ಯಥಾಸ್ಥಿತಿ ಕಾಯುವಂತೆ ಆದೇಶಿಸಿದೆ.

ಈ ವಿಚಾರವಾಗಿ ಅಡ್ವೊಕೇಟ್ ಜನರಲ್ ಜೊತೆ ಚರ್ಚೆ ಮಾಡುತ್ತಿದ್ದು, ರೈತರ ಆಕ್ಷೇಪದ ವಿಚಾರವಿದ್ದರೆ ಅದನ್ನು ವಿಚಾರಣೆ ಮಾಡಲಿ, ಆದರೆ ಅರ್ಜಿ ಸ್ವೀಕರಿಸುವುದನ್ನೇ ನಿಲ್ಲಿಸಿದರೆ ಕಷ್ಟವಾಗುತ್ತದೆ. ಈ ತಡೆಯಾಜ್ಞೆ ಇರುವ ಕಾರಣ ಸರ್ಕಾರಕ್ಕೆ ಪ್ರತಿ ವರ್ಷ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ಈ ಜಮೀನು ಅಧಿಸೂಚನೆಯಾಗಿ 15 ವರ್ಷವಾಗಿದೆ. ಆ ಭಾಗದ ಕೆಲವು ರೈತರಿಗೆ ಒಂದು ರೂಪಾಯಿ ಹಣ ಕೂಡ ಸಿಕ್ಕಿಲ್ಲ. ಜಮೀನೂ ಇಲ್ಲವಾಗಿದೆ.

ಸರ್ಕಾರ ಬಂಡವಾಳ ಹಾಕಿದ್ದು, ಈಗ ಅರ್ಜಿ ಮೂಲಕ ಬಂದ ಹಣದಿಂದ ಈ ರೈತರಿಗೆ ಹಣ ಪಾವತಿಸಲು ನೆರವಾಗುತ್ತದೆ. ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ಜಮೀನು ಕಳೆದುಕೊಂಡವರಿಗೆ ನಿವೇಶನ ಹಂಚುವ ವ್ಯವಸ್ಥೆ ಮಾಡುತ್ತೇನೆ. ನ್ಯಾಯಾಲಯ ಈ ವಿಚಾರದಲ್ಲಿ ಆದಷ್ಟು ಬೇಗ ವಿನಾಯಿತಿ ನೀಡುವ ವಿಶ್ವಾಸವಿದೆ” ಎಂದರು. ಈ ಪ್ರಕ್ರಿಯೆಯಲ್ಲಿ ಎಲ್ಲಾದರೂ ಅಕ್ರಮವಾಗಿದ್ದರೆ ದೂರು ಕೊಡಿ, ನಾವು ಯಾವುದೇ ಕ್ರಮಕ್ಕೂ ಸಿದ್ಧ. ನಿಮ್ಮ ಹಾಗೂ ರೈತರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ” ಎಂದು ಭರವಸೆ ನೀಡಿದರು.

ಉಮಾಶ್ರೀ ಅವರು ಬಿಡಿಎ ವತಿಯಿಂದ ಸರ್ ಎಂ ವಿಶ್ವೇಶ್ವರಯ್ಯ ಬಡಾವಣೆ 2ನೇ ಬ್ಲಾಕ್ ನಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಸಿಎ ನಿವೇಶನ 2011 ರಲ್ಲಿ ಮಂಜೂರು ಮಾಡಿರುವ ಬಗ್ಗೆ ಕೇಳಿದಾಗ, “ನಾವು ಅಧಿಕಾರಕ್ಕೆ ಬಂದ ನಂತರ ನಿವೇಶನ ಹಸ್ತಾಂತರ ಮಾಡಲಾಗಿದೆ.

ಪಾಲಿಕೆ ವತಿಯಿಂದಲೇ ಆಸ್ಪತ್ರೆ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕೆ ಹಣ ಪಾವತಿಸಲಾಗಿದೆ. ಮುಂದೆ ಆರೋಗ್ಯ ಇಲಾಖೆ ನೆರವನ್ನು ಪಡೆಯುತ್ತೇವೆ. ಸದ್ಯಕ್ಕೆ ಪಾಲಿಕೆ ವತಿಯಿಂದಲೇ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ಇದು ತಡವಾಗುತ್ತಿರುವುದಕ್ಕೆ ಕಾರಣವೇನು ಎಂದು ಪರಿಶೀಲಿಸಿ, ಅಧಿಕಾರಿಗಳಿಂದ ವಿಳಂಬವಾಗಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಹೆಚ್.ಎಸ್. ಗೋಪಿನಾಥ್ ಅವರು ಪೆರಿಫೆರಲ್ ರಿಂಗ್ ರಸ್ತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, “ಫೆರಿಫೆರಲ್ ರಿಂಗ್ ರಸ್ತೆ 2ಕ್ಕೆ ಮೊದಲ ಅಧಿಸೂಚನೆ ಬಂದಿದ್ದು 2005-06 ರಲ್ಲಿ. ಆದರೆ ಯಾವುದೇ ಸರ್ಕಾರ ಇದನ್ನು ಡಿನೋಟಿಫಿಕೇಷನ್ ಮಾಡಲಿಲ್ಲ. ಡಿನೋಟಿಫಿಕೇಶನ್ ಮಾಡದೇ ಪ್ಲಾನ್ ಗಳಿಗೆ ಅನುಮತಿ ನೀಡಿಲ್ಲ.

ಈಗ ಇದು ನನ್ನ ಕಾಲಕ್ಕೆ ಬಂದಿದೆ. ಇದನ್ನು ಡಿನೋಟಿಫಿಕೇಶನ್ ಮಾಡಿ ಜೈಲಿಗೆ ಹೋಗಲು ನಾನು ಸಿದ್ಧನಿಲ್ಲ. ಇದು ನನ್ನ ವೈಯಕ್ತಿಕ ಹಾಗೂ ಸರ್ಕಾರದ ತೀರ್ಮಾನ. ನೈಸ್ ರಸ್ತೆ ಇಲ್ಲವಾಗಿದ್ದರೆ ಬೆಂಗಳೂರು ಸತ್ತು ಹೋಗುತ್ತಿತ್ತು. ಇದು ನೈಸ್ ರಸ್ತೆಗೆ ಪರ್ಯಾಯವಾಗಿ ಬರುತ್ತಿರುವ ರಸ್ತೆ. ಪಿಆರ್ ಆರ್ 1ಕ್ಕೆ 26 ಸಾವಿರ ಕೋಟಿ ರೂ. ಬೇಕಾಗಿದೆ. ಅಂದಿನ ಕಾಲದಲ್ಲೇ ಮಾಡಿದ್ದರೆ 4-5 ಸಾವಿರ ಕೋಟಿಯಲ್ಲಿ ಮುಗಿಯುತ್ತಿತ್ತು. ಬಿಡಿಎ ವ್ಯಾಪ್ತಿಯಲ್ಲಿ ಹೊಸ ಪರಿಹಾರ ನೀತಿ ಬರುವುದಿಲ್ಲ. ಆದರೂ ನಾವು ರೈತರಿಗೆ ತೊಂದರೆ ಮಾಡಬಾರದು ಎಂದು ಉತ್ತಮ ಪರಿಹಾರ ನೀಡಲಾಗುತ್ತಿದೆ” ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT