ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ನಗರತ್ ಪೇಟೆಯ ಕಟ್ಟಡದಲ್ಲಿ ಬೆಂಕಿ ಅನಾಹುತ; ರಾಜಸ್ಥಾನದ ವ್ಯಕ್ತಿ ಸಜೀವದಹನ

ಮಹಿಳೆ ಹಾಗೂ ಇಬ್ಬರು‌ ಮಕ್ಕಳು ಕಟ್ಟಡದ ಒಳಗೆ ಸಿಲುಕಿರುವ ಶಂಕೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬೆಂಗಳೂರು: ನಗರತ್‌ಪೇಟೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು ರಾಜಸ್ಥಾನ ಮೂಲದ ಮದನ್ ಎಂಬುವರ ಸಜೀವದಹನವಾಗಿದ್ದಾರೆ.

ಮಹಿಳೆ ಹಾಗೂ ಇಬ್ಬರು‌ ಮಕ್ಕಳು ಕಟ್ಟಡದ ಒಳಗೆ ಸಿಲುಕಿರುವ ಶಂಕೆಯಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ದುರಂತ ನಡೆದ ಮಳಿಗೆಯಲ್ಲಿ ಒಂದೇ ಕುಟುಂಬದ ಇನ್ನೂ ಮೂವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಒಟ್ಟು ನಾಲ್ವರು ಮನೆಯಲ್ಲಿ ವಾಸಿಸುತ್ತಿದ್ದರು.

ಮನೆಯಲ್ಲಿ ಪತಿ, ಪತ್ನಿ ಹಾಗೂ 8 ಮತ್ತು 5 ವರ್ಷದ ಇಬ್ಬರು ಮಕ್ಕಳಿದ್ದರು. ಮದನ್‌ ಸಿಂಗ್‌ ಎಂಬಾತ ಸಾವನ್ನಪ್ಪಿದ್ದು, ಉಳಿದ ಮೂವರು ಸಾವನ್ನಪ್ಪಿರುವ ಶಂಕ್ಯೆ ವ್ಯಕ್ತವಾಗಿದೆ. ನಾಲ್ಕು ತಾಸು ಕಾರ್ಯಾಚರಣೆ ನಡೆಸಿದರೂ ಮೂವರ ಸುಳಿವು ಸಿಕ್ಕಿಲ್ಲ. ಕಾರ್ಯಾಚರಣೆ ಮುಂದುವರೆದಿದೆ.

ಬೆಳಗಿನ ಜಾವ 3.14 ರ ಸುಮಾರಿಗೆ ತಮಗೆ ಕರೆ ಬಂದಿದ್ದು. ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೆಂಕಿಯನ್ನು ಇನ್ನೂ ನಂದಿಸಲಾಗಿಲ್ಲ ಎಂದು ಅಗ್ನಿ ಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಮುಂಜಾನೆ ಈ ಬೆಂಕಿ ಅವಘಡ ಸಂಭವಿಸಿದೆ. ಸ್ಥಳದಲ್ಲಿ ಎಂಟು ವಾಹನಗಳನ್ನು ನಿಯೋಜಿಸಲಾಗಿದ್ದು, 55 ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು 21 ಅಧಿಕಾರಿಗಳು ಸ್ಥಳದಲ್ಲಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ಹೇಳಿದರು. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಮೂರು ಅಂತಸ್ತಿನ ಕಟ್ಟಡದಲ್ಲಿ ಫ್ಲೋರ್‌ಮ್ಯಾಟ್‌ ತಯಾರಿಸುವ ಘಟಕವಿತ್ತು. ಮೊದಲಿಗೆ ಅಲ್ಲಿ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!