ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರ 
ರಾಜ್ಯ

Dharmasthala Case: ಮೊದಲು ಮುಸುಕುಧಾರಿಯ ಮಂಪರು ಪರೀಕ್ಷೆ ಮಾಡಿ; ಕೈ ಶಾಸಕರ ಒತ್ತಾಯ

ಶೋಧ ಕಾರ್ಯಾಚರಣೆಯಲ್ಲಿ ಮುಸುಕುಧಾರಿ ದೂರುದಾರ ಹೇಳಿಕೊಂಡಂತೆ ದೊಡ್ಡ ಪ್ರಮಾಣದಲ್ಲಿ ಅಸ್ತಿಪಂಜರಗಳು ದೊರೆತಿಲ್ಲ.

ಬೆಳಗಾವಿ: ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸುಕುಧಾರಿ ಸಾಕ್ಷಿದಾರನ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್ ಶಾಸಕರೊಬ್ಬರು 'ಮೊದಲು ಆತನ ಮಂಪರು ಪರೀಕ್ಷೆ ಮಾಡಿ' ಎಂದು ಒತ್ತಾಯಿಸಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಪ್ರದೇಶಗಳಲ್ಲಿ ನಡೆದಿರುವ ಶೋಧ ಕಾರ್ಯಾಚರಣೆಯಲ್ಲಿ ಮುಸುಕುದಾರಿ ದೂರುದಾರ ಹೇಳಿಕೊಂಡಂತೆ ದೊಡ್ಡ ಪ್ರಮಾಣದಲ್ಲಿ ಅಸ್ತಿಪಂಜರಗಳು ದೊರೆತಿಲ್ಲ. ಇದು ಆತನ ಆರೋಪಗಳ ಮೇಲೆಯೇ ಶಂಕೆ ಮೂಡುವಂತೆ ಮಾಡಿದ್ದು, ಇದೇ ವಿಚಾರವಾಗಿ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ ಕಿಡಿಕಾರಿದ್ದಾರೆ.

ಧರ್ಮಸ್ಥಳ ಬುರುಡೆ ಕೇಸ್‌ನ ಮುಸುಕುಧಾರಿಯ ಮಂಪರು ಪರೀಕ್ಷೆಯನ್ನು ಮಾಡಬೇಕು ಎಂದು ಕೈ ಶಾಸಕ ಲಕ್ಷ್ಮಣ ಸವದಿ (Laxman Savadi) ಒತ್ತಾಯಿಸಿದ್ದು, ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, 'ಸುಳ್ಳು ಆರೋಪ ಮಾಡುವವರಿಗೆ ಇದು ಎಚ್ಚರಿಕೆ ಗಂಟೆ ಆಗಬೇಕು ಎಂದರು.

ಅಂತೆಯೇ ಮುಸುಕುಧಾರಿಯನ್ನಿಟ್ಟುಕೊಂಡು ಒಳಸಂಚು ಮಾಡ್ತಿದ್ದಾರಾ ನೋಡಬೇಕು. ಯಾರಿಗೂ ಕಳಂಕ ತರುವ ಕೆಲಸ ಯಾರೂ ಮಾಡಿದರೂ ಒಳಸಂಚು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಂತೆಯೇ ಮುಸುಕುಧಾರಿ ಹಿನ್ನೆಲೆ ಏನು ಎನ್ನುವುದು ಪತ್ತೆಯಾಗಬೇಕು. ಇಲ್ಲಿಯವರೆಗೂ ಸರ್ಕಾರದ ಹಣ ಎಷ್ಟು ವೆಚ್ಚವಾಗಿದೆಯೋ ಅದನ್ನು ವಸೂಲಿ ಮಾಡಬೇಕು. ಮಂಪರು ಪರೀಕ್ಷೆಯಲ್ಲಿ ಅತನ ಒಪ್ಪಿಗೆ ಬೇಕಾಗುತ್ತದೆ. ಬೇರೆ ದಾರಿಯಲ್ಲಿ ತನಿಖೆ ಮಾಡಿ ಸಂಚು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದು ಸರ್ಕಾರ ಅಥವಾ ಪಕ್ಷದ ನಿಲುವಲ್ಲ ಇದು ನನ್ನ ವೈಯಕ್ತಿಕ ಹೇಳಿಕೆ ಎಂದು ಸವದಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Dasara Holidays extended: ಸರ್ಕಾರಿ, ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 18ರವರೆಗೆ ರಜೆ; ಜಾತಿ ಗಣತಿ ಅವಧಿ ವಿಸ್ತರಣೆ!

Mark ಚಿತ್ರದ 'ಸೈಕೋ ಸೈತಾನ್' ಚಿತ್ರದ ಹಾಡು ಸಖತ್ ಟ್ರೋಲ್; Darshan ಫ್ಯಾನ್ಸ್ ಟಾಂಗ್, Youtube ವಿಡಿಯೋ ಡಿಲೀಟ್!

ಇದು 'ಮೋದಾನಿ-ನಿರ್ಭರ್ ಭಾರತ': ಸರ್ಕಾರದ ಹಳದಿ ಬಟಾಣಿ ಆಮದು ನೀತಿ ಟೀಕಿಸಿದ ಕಾಂಗ್ರೆಸ್

ನನ್ನ ಹಲವು ಡೀಪ್‌ಫೇಕ್ ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿವೆ: ನಿರ್ಮಲಾ ಸೀತಾರಾಮನ್

ಡಿಕೆಶಿಯ 'ಸುರಂಗದ ಹುಚ್ಚಿ'ನಿಂದ ಲಾಲ್‌ಬಾಗ್ ಸಸ್ಯೋದ್ಯಾನಕ್ಕೆ ಅಪಾಯ- ಆರ್. ಅಶೋಕ್

SCROLL FOR NEXT