ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಉಚಿತ ಬಸ್​ ಯೋಜನೆ 
ರಾಜ್ಯ

Shakti Scheme: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಸೇರಿದ ಉಚಿತ ಬಸ್​ ಯೋಜನೆ

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ಗೆ ಸೇರ್ಪಡೆಯಾಗಿದೆ.

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರದ ಶಕ್ತಿ ಯೋಜನೆಯು(Shakti Scheme) ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.

ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ 'ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್'ಗೆ ಸೇರ್ಪಡೆಯಾಗಿದೆ.

2023ರ ಜೂನ್ 11 ರಿಂದ 2025 ಜುಲೈ 25ರ ಅವಧಿಯಲ್ಲಿ ನಾಲ್ಕೂ ನಿಗಮದ ಸಾರಿಗೆ ಬಸ್​ಗಳಲ್ಲಿ 5049476416 ಮಹಿಳೆಯರು (500 ಕೋಟಿ) ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. ಈ ಕಾರಣದಿಂದ ಶಕ್ತಿ ಯೋಜನೆ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​ನಲ್ಲಿ ಸ್ಥಾನ‌ ಪಡೆದಿದೆ.

ಶಕ್ತಿ ಯೋಜನೆ ಗೊಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್​​ನಲ್ಲಿ ಸ್ಥಾನ ಪಡೆದಿರುವುದು ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣವಾಗಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಹೇಳಿದ್ದಾರೆ.

ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ‌ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಸ್ಥಾನ ಪಡೆದಿದೆ ಎಂದು ಹೇಳಿದ್ದಾರೆ.

Beyond Free Rides ಎಂಬ ಹೆಸರಿನಲ್ಲಿ Sustainable Mobility Network ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ಅಧ್ಯಯನ ನಡೆಸಿತು. ಬೆಂಗಳೂರಿನಲ್ಲಿ ಶೇ. 23 ರಷ್ಟು ಮತ್ತು ಹುಬ್ಬಳ್ಳಿ-ಧಾರವಾಡದಲ್ಲಿ ಶೇ. 21 ರಷ್ಟು ಹೆಚ್ಚು ಮಹಿಳಾ ಉದ್ಯೋಗಿಗಳು ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಅಧ್ಯಯನ ವರದಿ ತಿಳಿಸಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT