ಶ್ರೀ ಭಗವಾನ್ ಶರ್ಮಾ 
ರಾಜ್ಯ

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ; ಉತ್ತರ ಪ್ರದೇಶದ ಮಾಜಿ ಶಾಸಕನ ವಿರುದ್ಧ ಪ್ರಕರಣ ದಾಖಲು

ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

ಬೆಂಗಳೂರು: ಉತ್ತರ ಪ್ರದೇಶದ ಮಾಜಿ ಶಾಸಕ ಶ್ರೀ ಭಗವಾನ್ ಶರ್ಮಾ ಅಲಿಯಾಸ್ ಗುಡ್ಡು ಪಂಡಿತ್ ವಿರುದ್ಧ 40 ವರ್ಷದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಜೀವ ಬೆದರಿಕೆಯೊಡ್ಡಿದ' ಆರೋಪ ಕೇಳಿಬಂದಿದ್ದು, ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ದೂರಿನ ಪ್ರಕಾರ, ಮಾಜಿ ಶಾಸಕರ ಒತ್ತಾಯದ ಮೇರೆಗೆ ಮಹಿಳೆ ತನ್ನ ಅಪ್ರಾಪ್ತ ಮಗನೊಂದಿಗೆ ಆಗಸ್ಟ್ 14 ರಂದು ಉತ್ತರ ಪ್ರದೇಶದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಅದೇ ದಿನ, ಶಾಸಕರು ಅವರನ್ನು ನಗರದ ಹಲವಾರು ಸ್ಥಳಗಳಿಗೆ ಕರೆದುಕೊಂಡು ಹೋಗಿದ್ದರು ಎಂದು ಆರೋಪಿಸಲಾಗಿದೆ.

ಆಗಸ್ಟ್ 16 ರಂದು ಮಾಜಿ ಶಾಸಕರು ಅವರನ್ನು ಚಿತ್ರದುರ್ಗಕ್ಕೆ ಕರೆದೊಯ್ದರು ಮತ್ತು ಮರುದಿನ ಹಿಂದಿರುಗುವಾಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಪಂಚತಾರಾ ಹೋಟೆಲ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಿದರು ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

ಹೋಟೆಲ್ ಕೋಣೆಯೊಳಗೆ, ಆಕೆಯ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಸಂಬಂಧಕ್ಕೆ ಒತ್ತಾಯಿಸಿದನು ಮತ್ತು ಆಕೆ ವಿರೋಧಿಸಿದಾಗ ಕೊಲ್ಲುವುದಾಗಿ ಬೆದರಿಕೆ ಹಾಕಿದರು ಎಂದು ಆರೋಪಿಸಲಾಗಿದೆ.

ದೂರಿನ ಆಧಾರದ ಮೇಲೆ, ಆಗಸ್ಟ್ 17 ರಂದು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 69 (ಮೋಸದಿಂದ ಲೈಂಗಿಕ ಸಂಭೋಗ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ನಿರ್ಣಯಕ್ಕೆ ಒಪ್ಪಬೇಕು, ವರಿಷ್ಠರು ಹೇಳಿದಾಗ ದೆಹಲಿಗೆ ಹೋಗುವೆ: ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಪ್ರತಿಕ್ರಿಯೆ; ಡಿಕೆಶಿ ಆಪ್ತರ ನಡೆಗೆ CM ತೀವ್ರ ಅಸಮಾಧಾನ

ರಾಜ್ಯದಲ್ಲಿ ಯಾರೂ ನಿರೀಕ್ಷಿಸದಂತಹ "ಸ್ಫೋಟಕ" ರಾಜಕೀಯ ಬೆಳವಣಿಗೆ: ಕುಮಾರಸ್ವಾಮಿ ಭವಿಷ್ಯ

'ಸಿಎಂ ಕುರ್ಚಿ' ಕದನದ ನಡುವೆ ವರದಿಗಾರರ ಪ್ರಶ್ನೆಗೆ ಕೆರಳಿದ ಡಿಕೆಶಿ! ಹೇಳಿದ್ದೇನು?

ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿ: ನಾಯಕ ಯಾರು? ರಿಷಭ್ ಪಂತ್ ಅಥವಾ ಕೆಎಲ್ ರಾಹುಲ್! ನಾಳೆ ನಿರ್ಧಾರ

"ನಾವೂ ಕಲಿಯಬೇಕು": ಮಾಮ್ದಾನಿ-ಟ್ರಂಪ್ ಭೇಟಿಯ ಬಗ್ಗೆ ತರೂರ್ ಪೋಸ್ಟ್; ನೀವು ಹೇಳಿದ್ದು ಸರಿ ಆದರೆ ರಾಹುಲ್ ಗೆ ಇದೆಲ್ಲಾ ಅರ್ಥ ಆಗತ್ತಾ?: BJP

SCROLL FOR NEXT