ಚಾಮರಾಜನಗರ: ಬನ್ನೇರುಘಟ್ಟ ಸಫಾರಿ ಮೇಲೆ ಚಿರತೆ ದಾಳಿ ಪ್ರಕರಣ ಹಸಿರಾಗಿರುವಂತೆಯೇ ಅತ್ತ ಚಾಮರಾಜನಗರದಲ್ಲಿ ಹೆಣ್ಣು ಚಿರತೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಬಂಡೆಯ ಗುಹೆಯೊಳಗೆ ಹೆಣ್ಣು ಚಿರತೆಯ ಮೃತ ಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಹನೂರು ವನ್ಯಜೀವಿ ವಲಯದ ಮೇಕೆದಾಟು ಅರಣ್ಯ ಪ್ರದೇಶದಲ್ಲಿ ಸುಮಾರು ಐದು-ಆರು ವರ್ಷ ವಯಸ್ಸಿನ ಚಿರತೆ ಮೃತ ಪಟ್ಟಿದೆ. ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಆಗಸ್ಟ್ 17 ರಂದು ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಬಂಡೆಯ ಗುಹೆಯೊಳಗೆ ಚಿರತೆ ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಸ್ತುತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಶವಪರೀಕ್ಷೆ ವರದಿ ಮಾತ್ರ ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಸಾಧ್ಯ ಎಂದು ಅಧಿಕಾರಿ ಹೇಳಿದ್ದಾರೆ.
ಜುಲೈನಲ್ಲಿ, ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಅಭಯಾರಣ್ಯ ವ್ಯಾಪ್ತಿಗೆ ಬರುವ ಕೊತ್ತಲವಾಡಿ ಗ್ರಾಮದ ಬಳಿಯ ಕಲ್ಲಿನ ಕ್ವಾರಿಯಲ್ಲಿ ಚಿರತೆಯ ಮೃತ ಪಟ್ಟಿತ್ತು.