ಸಂಗ್ರಹ ಚಿತ್ರ 
ರಾಜ್ಯ

ಧರ್ಮಸ್ಥಳ ಕೇಸ್: ಅಪಪ್ರಚಾರ ನಿಲ್ಲಿಸದಿದ್ದರೆ ಕಠಿಣ ಕ್ರಮ; youtubers ಗೆ ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ

ಅವಹೇಳನಕಾರಿಯಾಗಿ ಸುದ್ದಿ ಮಾಡುವವರು, ಭಾವನೆಗಳನ್ನು ಕೆರಳಿಸುವವರು ಈ ಕೂಡಲೇ ಅದನ್ನು ನಿಲ್ಲಿಸಬೇಕು. ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಮುಂದುವರೆದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಬೆಂಗಳೂರು: ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಜನರ ಭಾವನೆ ಕೆರಳಿಸುವಂತಹ ವರದಿಯ ಪ್ರಸಾರವನ್ನು ಯೂಟ್ಯೂಬರ್ಸ್ ಹಾಗೂ ಸಾಮಾಜಿಕ ಜಾಲತಾಣಗಳು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಕಠಿಣ ಎಚ್ಚರಿಕೆ ನೀಡಿದೆ.

ವಿಧಾನಸಭೆಯಲ್ಲಿ ಬಿಜೆಪಿ ಹಿರಿಯ ಶಾಸಕ ಮತ್ತು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಅವರ ಪ್ರಶ್ನೆಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಉತ್ತರಿಸಿದರು.

ಧರ್ಮಸ್ಥಳ ಗ್ರಾಮ ಪ್ರಕರಣದಲ್ಲೂ ಯೂಟ್ಯೂಬ್ ಸೇರಿ ಸಾಮಾಜಿಕ ಜಾಲತಾಣಗಳಲ್ಲಿ ಭಾವನೆಗಳನ್ನು ಕೆರಳಿಸುವಂತಹ ವರದಿ ಮಾಡಲಾಗುತ್ತಿದೆ ಎಂದು ದೂರುಗಳು ಬಂದಿವೆ.

ನಾವು ಅದನ್ನು ಗಮನಿಸಿದ್ದೇವೆ. ಹೀಗೆ ಅವಹೇಳನಕಾರಿಯಾಗಿ ಸುದ್ದಿ ಮಾಡುವವರು, ಭಾವನೆಗಳನ್ನು ಕೆರಳಿಸುವವರು ಈ ಕೂಡಲೇ ಅದನ್ನು ನಿಲ್ಲಿಸಬೇಕು. ಈ ಎಚ್ಚರಿಕೆಯನ್ನು ನಿರ್ಲಕ್ಷಿಸಿ ಮುಂದುವರೆದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.

ಧರ್ಮಸ್ಥಳ ಗ್ರಾಮದಲ್ಲಿ ಯೂಟ್ಯೂಬ್ ಚಾನೆಲ್‌ಗಳ 2 ಗುಂಪುಗಳು ಕಿತ್ತಾಡಿಕೊಂಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಇದೇ ರೀತಿಯ ಘಟನೆಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು. ಯೂಟ್ಯೂಬ್ ಸೇರಿ ಸಾಮಾಜಿಕ ಜಾಲತಾಣಗಳಿಗೆ ಕಡಿವಾಣ ಹಾಕದಿದ್ದರೆ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT