ದಿನೇಶ್ ಗುಂಡೂರಾವ್ 
ರಾಜ್ಯ

ಹೃದಯಾಘಾತ ತಡೆಗೆ ಬಸ್-ರೈಲ್ವೆ ನಿಲ್ದಾಣಗಳಲ್ಲಿ AED ಸಾಧನ ಅಳವಡಿಕೆಗೆ ರಾಜ್ಯ ಸರ್ಕಾರ ಮುಂದು

ಹೃದಯಾಘಾತದ ಸಂದರ್ಭದಲ್ಲಿ, ತಕ್ಷಣದ ಪರಿಹಾರಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 25,000 ರೂ. ಮೌಲ್ಯದ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ.

ಬೆಂಗಳೂರು: ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಸಹಾಯ ಮಾಡಲು ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳಲ್ಲಿ ‘ಆಟೊಮೇಟೆಡ್ ಎಕ್ಸ್‌ಟರ್ನಲ್ ಡಿಫೈಬ್ರಿಲ್ಲೇಟರ್ಸ್ (ಎಇಡಿ)’ ಸಾಧನ ಅಳವಡಿಸುವ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.

ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಕುರಿತ ವಿಧಾನ ಪರಿಷತ್ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಪ್ರಕರಣಗಳು ಸಾಮಾನ್ಯವಾಗಿ ಮಧುಮೇಹ, ಬಿಪಿ, ಮಾಲಿನ್ಯ, ಒತ್ತಡ, ಬೊಜ್ಜು ಮತ್ತು ಜಡ ಜೀವನಶೈಲಿಗೆ ಸಂಬಂಧಿಸಿದ್ದಾಗಿರುತ್ತವೆ. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಲಕ್ಷಣಗಳನ್ನು ಹೊಂದಿರುವವರನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗುವುದು. ಸಮಸ್ಯೆಗಳನ್ನು ನಿವಾರಿಸಲು ಅವರಿಗೆ ಔಷಧಿಗಳನ್ನು ನೀಡಲಾಗುವುದು ಎಂದು ಹೇಳಿದರು.

ಹೃದಯ ಜ್ಯೋತಿ ಯೋಜನೆಯಡಿ, ರಾಜ್ಯಾದ್ಯಂತ ಟೆಲಿ ಇಸಿಜಿ ಸೌಲಭ್ಯಗಳನ್ನು ಸ್ಥಾಪಿಸಲಾಗುವುದು. ಹೃದಯಾಘಾತದ ಸಂದರ್ಭದಲ್ಲಿ, ತಕ್ಷಣದ ಪರಿಹಾರಕ್ಕಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ 25,000 ರೂ. ಮೌಲ್ಯದ ಟೆನೆಕ್ಟೆಪ್ಲೇಸ್ ಇಂಜೆಕ್ಷನ್ ಅನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರು ಮಾತನಾಡಿ, ಯುವಕರಲ್ಲಿ ಹೃದಯಾಘಾತ ಹೆಚ್ಚುತ್ತಿರುವುದು ಕಳವಳಕಾರಿಯಾಗಿದೆಯ ಅವುಗಳನ್ನು ತಡೆಗಟ್ಟಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹೃದಯಾಘಾತ ಪ್ರಕರಣಗಳ ಮಾದರಿಯನ್ನು ಎರಡು ತಿಂಗಳ ಕಾಲ ಗಮನಿಸಲಾಗಿದೆ. ಹೃದಯಾಘಾತ ಪ್ರಕರಣಗಳನ್ನು ಕೋವಿಡ್ -19 ನೊಂದಿಗೆ ಜೋಡಿಸುವುದು ಸರಿಯಲ್ಲ ಎಂದು ಹೇಳಿದರು.

ಹೃದಯಘಾತ ಪ್ರಕರಣಗಳ ಕುರಿತಂತೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ರವೀಂದ್ರ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಾರ್ಯಪಡೆಯನ್ನು ಸಹ ರಚಿಸಿತ್ತು. ಸರಕಾರಕ್ಕೆ ನೀಡಿರುವ ವರದಿಯಲ್ಲಿ ಜನರ ಊಹೆಗೂ ಇದಕ್ಕೂ ಸಂಬಂಧವಿಲ್ಲ ಎಂದು ಉಲ್ಲೇಖಿಸಲಾಗಿದೆ. ಜನರು ವದಂತಿಗಳಿಗೆ ಕಿವಿಗೊಡುವುದನ್ನು ನಿಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದ ಎಲ್ಲ ಸರಕಾರಿ ಆಸ್ಪತ್ರೆಗಳ ಜೊತೆ ಕಡ್ಡಾಯವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ತೆರೆಯಬೇಕೆಂಬ ಉದ್ದೇಶ ಸರಕಾರಕ್ಕಿದೆ. ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಈ ಆಸ್ಪತ್ರೆಗಳು ಕಾರ್ಯಾರಂಭ ಮಾಡಿವೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಸ್ಥಾಪನೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ಕೊಟ್ಟಿದ್ದಾರೆ. ಈ ನಿಯಮವನ್ನು ನಾವು ಈಗಾಗಲೇ ಅಳವಡಿಸಿಕೊಂಡು ಕಾರ್ಯಾರಂಭ ಮಾಡಿದ್ದೇವೆ. ಎಲ್ಲ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಜೊತೆಗೆ ಟ್ರಾಮಾ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು. ಸರ್ಕಾರವು ಎಂಟು ತಿಂಗಳಲ್ಲಿ ಹುಬ್ಬಳ್ಳಿಯಲ್ಲಿ ಹೃದ್ರೋಗ ಚಿಕಿತ್ಸಾ ಘಟಕವನ್ನು ಮತ್ತು ಎರಡು ತಿಂಗಳಲ್ಲಿ ಬೆಳಗಾವಿಯಲ್ಲಿ ಮತ್ತೊಂದು ಹೃದ್ರೋಗ ಘಟಕವನ್ನು ತೆರೆಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT