ಸಿಲಿಂಡರ್ ಸ್ಫೋಟ (ಸಾಂದರ್ಭಿಕ ಚಿತ್ರ) 
ರಾಜ್ಯ

ವಿಲ್ಸನ್ ಗಾರ್ಡನ್‌ LPG ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತಿಬ್ಬರ ಸಾವು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಯ್ಯನಪಾಳ್ಯ ಕಾಲೋನಿಯಲ್ಲಿ ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಪರಿಣಾಮ 11 ಮಂದಿ ಗಾಯಗೊಂಡಿದ್ದರು.

ಬೆಂಗಳೂರು: ವಿಲ್ಸನ್ ಗಾರ್ಡನ್‌ನಲ್ಲಿ ಸಂಭವಿಸಿದ ಎಲ್‌ಪಿಜಿ ಸಿಲಿಂಡರ್ ಸ್ಫೋಟ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮತ್ತಿಬ್ಬರು ಸೋಮವಾರ ಸಾವನ್ನಪ್ಪಿದ್ದು, ಇದರೊಂದಿಗೆ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಮೃತರನ್ನು ತಮಿಳುನಾಡು ಮೂಲದ ಮನೆಕೆಲಸಗಾರ್ತಿ ಕಸ್ತೂರಮ್ಮ (30) ಮತ್ತು ಅವರ ಮಗಳು ಕಾಯಲ್ (8) ಎಂದು ಗುರ್ತಿಸಲಾಗಿದೆ.

ಶೇ. 35 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಕಾಯಲ್ (8), ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ 5 ಗಂಟೆಗೆ ಮೃತಪಟ್ಟಿದ್ದಾಳೆ. ಇನ್ನು ಶೇ. 40 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಬಾಲಕಿಯ ತಾಯಿ ರಾತ್ರಿ 8 ಗಂಟೆ ಸಮಯದಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ಇತರರಲ್ಲಿ, ಸರಸಮ್ಮ ಎಂಬುವವರಿಗೆ ಇನ್ನೂ ಚಿಕಿತ್ಸೆ ಮುಂದುವರೆದಿದ್ದು, ಉಳಿದವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶುಕ್ರವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿನ್ನಯ್ಯನಪಾಳ್ಯ ಕಾಲೋನಿಯಲ್ಲಿ ಕಸ್ತೂರಮ್ಮ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿತ್ತು. ಪರಿಣಾಮ 11 ಮಂದಿ ಗಾಯಗೊಂಡಿದ್ದರು. ಸ್ಫೋಟದ ತೀವ್ರತೆಗೆ ನೆರೆ ಹೊರೆಯ ಮನೆಗಳಿಗೂ ಹಾನಿಯಾಗಿತ್ತು. ಘಟನೆಯಲ್ಲಿ ಗಾಯಗೊಂಡಿದ್ದ 11 ಮಂದಿಯ ಪೈಕಿ ಮುಬಾರಕ್ (10) ಎಂಬ ಬಾಲಕಘಟನೆ ನಡೆದ ದಿನವೇ ಸಾವನ್ನಪ್ಪಿದ್ದ.

ಈ ಸಂಬಂಧ ಮುಬಾರಕ್ ಅವರ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಲ್‌ಪಿಜಿ ಸಿಲಿಂಡರ್ ಕಂಪನಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪ

ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಜಾ!

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಪೂಮಾದಿಂದ 300 ಕೋಟಿ ಆಫರ್ ಕೈಬಿಟ್ಟ ಕೊಹ್ಲಿ: ತನ್ನದೇ ಬ್ರ್ಯಾಂಡ್ ಗಾಗಿ ಹೊಸ ಡೀಲ್, 40 ಕೋಟಿ ರೂ. ಹೂಡಿಕೆ!

ಮಳೆ, ಚಳಿಯಿಂದಾಗಿ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55ರಷ್ಟು ಕುಸಿತ: ಸಚಿವ ತಿಮ್ಮಾಪುರ

SCROLL FOR NEXT