ರಾಜ್ಯ

News Headlines 19-08-25 | ಅಪಪ್ರಚಾರದಿಂದ ನೋವಾಗಿದೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ; ಗ್ರೇಟರ್ ಬೆಂಗಳೂರು ಮಸೂದೆಗೆ ಅಂಗೀಕಾರ; Bengaluru Rains: IMD ಎಚ್ಚರಿಕೆ!

ಅಪಪ್ರಚಾರದಿಂದ ನೋವಾಗಿದೆ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಸೌಜನ್ಯ ಕೊಲೆ ಪ್ರಕರಣ ಮತ್ತು ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳದಾದ್ಯಂತ ನಡೆದಿದೆ ಎನ್ನಲಾದ ಸರಣಿ ಕೊಲೆಗಳು, ಅತ್ಯಾಚಾರಗಳು ಮತ್ತು ಸಮಾಧಿಗಳ ಕುರಿತ ಆರೋಪಗಳು "ಆಧಾರ ರಹಿತ ಹಾಗೂ ಸುಳ್ಳು" ಎಂದು ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ವಿರುದ್ಧದ ಆರೋಪಗಳಿಗೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಅವರು, ಸತ್ಯ ಬಹಿರಂಗಪಡಿಸಲು ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿಯನ್ನು ಸ್ವಾಗತಿಸಿದರು. ಈ ಆರೋಪಗಳ ತನಿಖೆಗಾಗಿ ಎಸ್ಐಟಿ ಶ್ರಮಿಸುತ್ತಿದ್ದು ಇದು ಅಂತಿಮವಾಗಿ ಮಾನವ ಅವಶೇಷಗಳನ್ನು ಪತ್ತೆಹಚ್ಚಲು ಹಲವಾರು ಸ್ಥಳಗಳಲ್ಲಿ ಉತ್ಖನನ ನಡೆಸಿದೆ. ಸೌಜನ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರಂತರ ಹೋರಾಟಗಳು ನಡೆಯುತ್ತಿವೆ. ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ವಿಷಯಗಳನ್ನು ಬಿಂಬಿಸುವ ರೀತಿ ನೈತಿಕವಾಗಿ ತಪ್ಪು. ಇದರಿಂದ ನನಗೆ ನಿಜವಾಗಿಯೂ ನೋವಾಗಿದೆ ಎಂದರು. ಧರ್ಮಸ್ಥಳ ಮತ್ತು ಅದರ ಟ್ರಸ್ಟ್ ಅನ್ನು ಗುರಿಯಾಗಿಸಿಕೊಂಡು 14 ವರ್ಷಗಳಿಗೂ ಹೆಚ್ಚು ಕಾಲದಿಂದ ಸಂಘಟಿತ ಅಭಿಯಾನ ನಡೆಸಲಾಗುತ್ತಿದೆ ಎಂದು ಹೆಗ್ಗಡೆ ಆರೋಪಿಸಿದರು.

ಧರ್ಮಸ್ಥಳದ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ: ಸಂಸದ ಸಸಿಕುಮಾರ್ ಸೆಂಥಿಲ್ ಮಾಸ್ಟರ್ ಮೈಂಡ್

ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದೊಡ್ಡ ಷಡ್ಯಂತ್ರ ನಡೆದಿದ್ದು, ಇದರಲ್ಲಿ ಕಾಂಗ್ರೆಸ್ ಸಂಸದ ಹಾಗೂ ಮಾಜಿ ಐಎಎಸ್ ಅಧಿಕಾರಿ ಶಶಿಕಾಂತ್ ಸೆಂಥಿಲ್ ಕೈವಾಡವಿದೆ ಎಂದು ಶಾಸಕ ಜನಾರ್ಧನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ಧರ್ಮಸ್ಥಳ ದೇವಸ್ಥಾನದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ಹಿಂದೆ ತಮಿಳುನಾಡಿನ ಕಾಂಗ್ರೆಸ್ ಸಂಸದ ಸಸಿಕಾಂತ್‌ ಸೆಂಥಿಲ್ ಅವರ ಕೈವಾಡವಿದ್ದು ಈತನೇ ಸಂಪೂರ್ಣ ಪ್ರಕರಣದ ಹಿಂದಿನ ಮಾಸ್ಟರ್ ಮೈಂಡ್ ಎಂದರು. 'ದಕ್ಷಿಣ ಕನ್ನಡದ ಇಬ್ಬರು ವ್ಯಕ್ತಿಗಳೊಂದಿಗೆ ಸೇರಿಕೊಂಡು ಸಸಿಕಾಂತ್‌ ಸೆಂಥಿಲ್ ಧರ್ಮಸ್ಥಳಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಕಾರ್ಯಸೂಚಿಗಳನ್ನು ಸಿದ್ಧಪಡಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಈ ಪ್ರಕರಣದಲ್ಲಿ ಆಸಕ್ತಿ ಇರಲಿಲ್ಲವಾದರೂ, ಹೈಕಮಾಂಡ್‌ನ ಒತ್ತಡ ತಂದು ಎಸ್‌ಐಟಿ ತನಿಖೆ ಮಾಡಿಸಲಾಗಿದೆ. ಎಡಪಂಥೀಯ ನಿಲುವುಗಳನ್ನು ಹೊಂದಿರುವ ಸಸಿಕಾಂತ್ ಸೆಂಥಿಲ್ ಅವರನ್ನು ತನಿಖೆಗೆ ಒಳಪಡಿಸಬೇಕು ಎಂದು ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.

Greater Bengaluru ಮಸೂದೆಗೆ ಅಂಗೀಕಾರ

ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ಸಲುವಾಗಿ, ಕರ್ನಾಟಕ ವಿಧಾನಸಭೆಯು ಕರ್ನಾಟಕ ಪ್ಲಾಟ್‌ಫಾರ್ಮ್ ಆಧಾರಿತ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆ, 2025 ಅನ್ನು ಅಂಗೀಕರಿಸಿತು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಪ್ರಕಾರ, ಈ ಶಾಸನವು ರಾಜ್ಯಾದ್ಯಂತ 4 ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುವ ನಿರೀಕ್ಷೆಯಿದೆ. ಅಲ್ಲದೆ, ಗ್ರೇಟರ್ ಬೆಂಗಳೂರು ಆಡಳಿತ (ತಿದ್ದುಪಡಿ) ಮಸೂದೆಯನ್ನು ಮಂಗಳವಾರ ವಿಧಾನಸಭೆಯಲ್ಲಿ ಚರ್ಚೆಯ ನಂತರ ಅಂಗೀಕರಿಸಲಾಯಿತು. ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಸೂದೆಯನ್ನು ಮಂಡಿಸಿದ್ದು ಇದನ್ನು ಸದನದ ಹಲವಾರು ಸದಸ್ಯರ ಚರ್ಚೆಯ ನಂತರ ಅಂಗೀಕರಿಸಲಾಯಿತು.

Bengaluru Rains ವಾಯುಭಾರ ಕುಸಿತ ರಾಜ್ಯಾದ್ಯಂತ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯಾದ್ಯಂತ ಎರಡು ಬಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ ಆಗಲಿದೆ. ಆಗಸ್ಟ್ 21ರಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಮೋಡ ಕವಿದ ವಾತಾವರಣ ಇರಲಿದೆ. ತಿಂಗಳ ಕೊನೆಯ ವಾರದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ನಿರ್ಮಾಣವಾಗಲಿದೆ. ಬೆಂಗಳೂರಿನಲ್ಲಿ ಐದು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

5 ಕೋಟಿ ಮೌಲ್ಯದ ಮಾದಕವಸ್ತು MDMA ಕ್ರಿಸ್ಟಲ್ ವಶ

ಬೆಂಗಳೂರು ಪೊಲೀಸರು ಮಹಿಳೆ ಸೇರಿದಂತೆ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿ 5.40 ಕೋಟಿ ರೂ. ಮೌಲ್ಯದ ನಿಷೇಧಿತ ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್‌ನ್ನು ವಶಪಡಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್‌ಸಿಟಿ ಅಪರಿಚಿತ ವಿದೇಶಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಆತನ ವಶದಲ್ಲಿದ್ದ 180 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ ವಶಪಡಿಸಿಕೊಂಡಿದ್ದಾರೆ. ವಿದ್ಯಾರಣ್ಯಪುರದ ನೆಲೆಸಿದ್ದ ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು 1 ಕೆ.ಜಿ 514 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿಎಂ ದೊಡ್ಡವರು, ಅವರು ಹೇಳಿದ್ದನ್ನು ನಾವು ಚಿಕ್ಕವರು ಕೇಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಮಾರ್ಮಿಕ ನುಡಿ; ರಾತ್ರಿ ಆಪ್ತ ಶಾಸಕರೊಂದಿಗೆ ಸಭೆ!

ದುಬೈ ಏರ್ ಶೋ ವೇಳೆ ದುರಂತ; ಭಾರತದ ತೇಜಸ್ ಯುದ್ಧ ವಿಮಾನ ಪತನ, ಪೈಲಟ್ ಸಾವು! ತನಿಖೆಗೆ IAF ಆದೇಶ

"ದೇಶದ ಭದ್ರತೆಗೆ ಧಕ್ಕೆ ತಂದ್ರೆ ಬಿಡಲ್ಲ": ರಿಸಿನ್ ದಾಳಿ ಸಂಚು ರೂಪಿಸಿದ್ದ ಭಯೋತ್ಪಾದಕನಿಗೆ ಜೈಲಿನಲ್ಲಿ ಕೈದಿಗಳಿಂದ ಧರ್ಮದೇಟು; ವೈದ್ಯ ಉಗ್ರ ಆಸ್ಪತ್ರೆಗೆ ದಾಖಲು!

News headlines 21-11-2025| CM ಬದಲಾವಣೆ ವಿಷಯ; ಶಾಸಕರಿಗೆ ಹೈಕಮಾಂಡ್ ಮಹತ್ವದ ಸೂಚನೆ; ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50 ರಿಯಾಯಿತಿ; ಹಡಗು ನಿರ್ಮಾಣ, ಗೌಪ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಇಬ್ಬರ ಬಂಧನ

Asia Cup Rising stars: ಸೂಪರ್ ಓವರ್ ನಲ್ಲಿ ಮುಗ್ಗರಿಸಿದ ಭಾರತ, ವೈಭವ್ ಸೂರ್ಯವಂಶಿಯನ್ನು ಯಾಕೆ ಬ್ಯಾಟಿಂಗ್ ಗೆ ಕಳುಹಿಸಲಿಲ್ಲ? ಅಭಿಮಾನಿಗಳ ಆಕ್ರೋಶ

SCROLL FOR NEXT