ಧರ್ಮಸ್ಥಳ ಪ್ರಕರಣದ ಸಾಕ್ಷಿ-ದೂರುದಾರ 
ರಾಜ್ಯ

'ಧರ್ಮಸ್ಥಳ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್‌ಗಳಿಗೆ ವಿದೇಶದಿಂದ ಹಣ': ಕೇಂದ್ರಕ್ಕೆ ಕೋಟ ಶ್ರೀನಿವಾಸ ಪೂಜಾರಿ ಪತ್ರ, ED ತನಿಖೆಗೆ ಆಗ್ರಹ

ಎಡಪಂಥೀಯ ಗುಂಪುಗಳ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್​ ಸಹ ಹೇಳಿದ್ದಾರೆ.

ಉಡುಪಿ: ಧರ್ಮಸ್ಥಳ ಅಪಪ್ರಚಾರಕ್ಕೆ ಯೂಟ್ಯೂಬರ್ ಮತ್ತು ಇತರರಿಗೆ ವಿದೇಶದಿಂದ ಹಣಕಾಸು ಬಂದಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಬಗ್ಗೆ ಜಾರಿ ನಿರ್ದೇಶನಾಲಯಮ (ಇ.ಡಿ) ಮೂಲಕ ತನಿಖೆ ನಡೆಸುವಂತೆ ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿರುವ ಅವರು, ಗುಂಪೊಂದು ಧರ್ಮಸ್ಥಳದ ಪಾವಿತ್ರ್ಯತೆ ಹಾಳು ಮಾಡಲು ಸಂಚು ರೂಪಿಸಿರುವ ಬಗ್ಗೆ ವರದಿಯಾಗಿದೆ. ಸ್ವತಃ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಬಹಿರಂಗವಾಗಿ ಹೇಳಿದ್ದಾರೆ. ಎಡಪಂಥೀಯ ಗುಂಪುಗಳ ಮನವಿ ಮೇರೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ದಕ್ಷಿಣ ಕನ್ನಡದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ ಗುಂಡೂರಾವ್​ ಸಹ ಹೇಳಿದ್ದಾರೆ. ಅನಾಮಿಕ ದೂರುದಾರನ ಮಾತುಗಳನ್ನು ನಂಬಿಕೊಂಡು ಸಿಎಂ ಸಿದ್ದರಾಮಯ್ಯನವರು ಎಸ್‌ಐಟಿ ರಚಿಸಿದ್ದಾರೆ ಎಂದೂ ವರದಿಯಾಗಿದೆ. ಇಡೀ ಸರ್ಕಾರವೇ ಅನಾಮಿಕ ವ್ಯಕ್ತಿಗೆ ಶರಣಾದಂತೆ ಕಾಣುತ್ತಿದೆ ಎಂದು ಹೇಳಿದ್ದಾರೆ.

ಬಾಹುಬಲಿ ಬೆಟ್ಟದ ಸಮೀಪ ಸೇರಿದಂತೆ ಧರ್ಮಸ್ಥಳದಲ್ಲಿ ಎಲ್ಲೆಂದರಲ್ಲಿ ಗುಂಡಿ ತೋಡಲಾಗಿದೆ. ಭಕ್ತರಿಗೆ ಕಸಿವಿಸಿ ಉಂಟಾಗುತ್ತಿದೆ. ಮಾಧ್ಯಮಗಳ ವರದಿಗಳ ಪ್ರಕಾರ, ತಮಿಳುನಾಡಿನ ರಾಜಕಾರಣಿಯೊಬ್ಬ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದು ಕರ್ನಾಟಕದ ಹಿಂದೂಗಳ ಭಾವನೆಗೆ ಧಕ್ಕೆ ತರಲು ಯೋಜನೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಧರ್ಮಸ್ಥಳಕ್ಕೆ ಮಸಿ ಬಳಿಯಲು ಮುಸ್ಲಿಂ ಯೂಟ್ಯೂಬರ್ ಮತ್ತು ಸಹಚರರಿಗೆ ವಿದೇಶದಿಂದ ಹಣಕಾಸು ನೆರವು ದೊರೆತಿದೆ ಎಂಬ ಸುದ್ದಿ ಹರಿದಾಡುತ್ತಿದೆ. ನನ್ನ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಧರ್ಮಸ್ಥಳದ ಮಂಜುನಾಥ ಸ್ವಾಮಿಯನ್ನು ವಿರೋಧಿಸುತ್ತಿರುವವರಿಗೆ ವಿದೇಶದಿಂದ ಹಣಕಾಸಿನ ನೆರವು ಬಂದಿರುವ ಬಗ್ಗೆ ಜಾರಿ ನಿರ್ದೇಶನಾಲಯದ ಮೂಲಕ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT