ಬಾನು ಮುಷ್ತಾಕ್  
ರಾಜ್ಯ

'ಬೂಕರ್' ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ

ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್​ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಈ ಬಾರಿ ಮೈಸೂರು ದಸರಾ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸಿಎಂ ತಿಳಿಸಿದರು.

ಇನ್ನು ದಸರಾದಲ್ಲಿ ಏರ್ ಶೋಗೆ ಅನುಮತಿ ಸಿಕ್ಕಿದೆ. ಇದಕ್ಕಾಗಿ ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಅವರಿಗೆ ಪತ್ರ ಬರೆದಿದ್ದೆ. ಅವರಿಗೂ ದಸರಾಗೆ ಆಹ್ವಾನಿಸಿದ್ದೇನೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!