ಡಿಕೆ ಶಿವಕುಮಾರ್-ಮಹೇಶ್ ಶೆಟ್ಟಿ ತಿಮರೋಡಿ 
ರಾಜ್ಯ

ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದವನ ಒದ್ದು ಒಳಗೆ ಹಾಕಿದ್ದೇವೆ: ತಿಮರೋಡಿ ವಿರುದ್ಧ ಡಿ.ಕೆ ಶಿವಕುಮಾರ್ ಗರಂ!

ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಧರ್ಮಸ್ಥಳದ ವಿರುದ್ಧ ಹೋರಾಟ ನಡೆಸುತ್ತಿದ್ದ ಸಾಮಾಜಿಕ ಕಾರ್ಯಕರ್ತ ಮಹೇಶ್ ತಿಮರೋಡಿ, BJP ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ (BL Santhosh) ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು.

ಇದೇ ವಿಚಾರವಾಗಿ ಮಾತನಾಡಿದ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಅವರು, ಬಿಎಲ್ ಸಂತೋಷ್ ವಿರುದ್ಧ ಮಾತನಾಡಲು ಆತನ ಬಳಿ ಯಾವ ದಾಖಲೆ ಇದೆ. ವಿನಃ ಕಾರಣ ಅವಹೇಳನ ಮಾಡಿದ್ದ ತಿಮರೋಡಿಯನ್ನು ಒದ್ದು ಒಳಗೆ ಹಾಕಿದ್ದೇವೆ ಎಂದು ಡಿಸಿಎಂ ಹೇಳಿದ್ದಾರೆ.

ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿ.ಎಲ್.ಸಂತೋಷ್ ಬಗ್ಗೆ ಮಹೇಶ್ ತಿಮರೋಡಿ ಬಾಯಿಗೆ ಬಂದಂತೆ ಮಾತನಾಡಿದ್ದಾನೆ. ಆರೋಪಗಳನ್ನು ಮಾಡಲು ಆತನ ಬಳಿ ದಾಖಲೆ ಏನಿದೆ?. ಹೀಗಾಗಿ ಅವನನ್ನು ಒದ್ದು ಒಳಗೆ ಹಾಕಿದ್ದೇವೆ ಎಂದರು. ರಾಜಕೀಯವಾಗಿ ನಮ್ಮ ನಡುವೆ ಸಾಕಷ್ಟು ಭಿನ್ನಾಭಿಪ್ರಾಯವಿರಬಹುದು. ಆದರೆ ನಮ್ಮ ವಿರೋಧಿಗಳ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದರೆ ಅದನ್ನು ಕೇಳಿಕೊಂಡು ನಾವು ಖುಷಿಪಡುವುದಿಲ್ಲ.

ಯಾರು ಬೇಕಾದರೂ ರಾಜಕೀಯವಾಗಿ ಆರೋಪ ಮಾಡಬಹುದು ತಪ್ಪೇನಿಲ್ಲ. ಆದರೆ ಯಾರೇ ಆರೋಪ ಮಾಡುವಾಗಲೂ ದಾಖಲೆಗಳನ್ನು ಇಟ್ಟುಕೊಂಡು ಆರೋಪ ಮಾಡಲಿ. ಅದನ್ನು ಬಿಟ್ಟು ಸ್ವಾಭಿಮಾನಕ್ಕೆ ಧಕ್ಕೆ ತರುವಂತ ಮಾತುಗಳನ್ನು ಆಡಬಾರದು. ಈ ರಾಜ್ಯದಲ್ಲಿ ಯಾರ ಸ್ವಾಭಿಮಾನಕ್ಕೂ ಯಾರೂ ಧಕ್ಕೆ ತರುವಂತ ಕೆಲಸ ಮಾಡಬಾರದು ಎಂದು ಡಿಕೆ ಶಿವಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ರಷ್ಯಾ ಸೇನೆ ಸೇರಿದ್ದ ಭಾರತ ಮೂಲದ ವ್ಯಕ್ತಿ ಬಂಧನ': ಭಾರತಕ್ಕೆ ಉಕ್ರೇನ್ ಮಾಹಿತಿ!

ಕೊನೆಗೂ Bigg Boss Kannada ವೀಕ್ಷಕರಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ, ರಿಯಾಲಿಟಿ ಶೋ ಪುನಾರಂಭಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಗ್ರೀನ್ ಸಿಗ್ನಲ್!

ಕೊಪ್ಪಳದ ಗಂಗಾವತಿಯಲ್ಲಿ ಹರಿಯಿತು ನೆತ್ತರು: BJP ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಹತ್ಯೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

BiggBoss Kannada: ಬಿಗ್ ಬಾಸ್ 12 ಮನೆಗೆ ಬೀಗಮುದ್ರೆ, ಜಾಲಿವುಡ್ ಸ್ಟುಡಿಯೋಸ್ ಇಂದು ಹೈಕೋರ್ಟ್ ಮೊರೆ?

SCROLL FOR NEXT